ದೇವನಹಳ್ಳಿ, ಜನವರಿ 1: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿಯ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದರು. ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡುವಂತೆ. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪೊಲೀಸರು ಪಾರ್ಟಿಗೆ ಬ್ರೇಕ್ ಹಾಕಿ, ಸ್ಥಳದಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಫಾರ್ಮ್‌ಹೌಸ್ ಮಾಲೀಕ ಮತ್ತು ಪಾರ್ಟಿ ಅಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ