ಮಂಗಳೂರು, ಜ.1: ಹೊಸ ವರ್ಷದ ಮೊದಲ ದಿನದಂದು ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡು ಹರಿದುಬಂದಿದೆ. ವಿಶೇಷವಾಗಿ ಮಂಗಳೂರು ಐತಿಹಾಸಿಕ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ದೇವರ ದರ್ಶನಕ್ಕೆ ಆಗಮಿಸಿದ್ದಾರೆ. ಹೊಸ ವರ್ಷವನ್ನು ದೇವರ ಆಶೀರ್ವಾದದೊಂದಿಗೆ ಆರಂಭಿಸಬೇಕೆಂಬ ಸಂಕಲ್ಪದೊಂದಿಗೆ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ದೇವಸ್ಥಾನವನ್ನು ಸುಂದರಗಳಿಂದ ಅಲಂಕರಿಸಲಾಗಿದೆ, ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ. ಕೇವಲ ಮಂಗಳೂರಿನ ಭಕ್ತರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಬೀಚ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ತಂಗಿ, ಹೊಸ ವರ್ಷದ ದಿನ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಕದ್ರಿ ದೇವಸ್ಥಾನದಲ್ಲಿರುವ ಏಳು ಕೆರೆಗಳಲ್ಲಿ ಪವಿತ್ರ ಸ್ನಾನ ಮಾಡಿ, ನಂತರ ಕಲಶ ಸ್ನಾನ ಕೈಗೊಂಡು ಭಕ್ತರು ದೇವರ ದರ್ಶನ ಪಡೆದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ