ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುವುದು ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ, ಹೂ ಮತ್ತು ಎಲೆಗಳಿಂದ ಅಲಂಕರಿಸಲ್ಪಟ್ಟಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.