ಬೆಂಗಳೂರು, ಜನವರಿ 01: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನಮ್ಮ ಮೆಟ್ರೋ ಭಾರಿ ಆದಾಯ ಗಳಿಸಿದೆ. ನಿನ್ನೆ ಒಂದೇ ದಿನದಲ್ಲಿ ಮೆಟ್ರೋಗೆ 3 ಕೋಟಿ 8 ಲಕ್ಷ ರೂ. ಆದಾಯ ಹರಿದುಬಂದಿದೆ ಎಂದು ಮೆಟ್ರೋ ಅಂಕಿಅಂಶಗಳು ತಿಳಿಸಿವೆ. ಸುಮಾರು 8,93,903 ಮಂದಿ ಪ್ರಯಾಣಿಕರು ಮೆಟ್ರೋ ಸೇವೆಗಳನ್ನು ಬಳಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಮೆಟ್ರೋ ಸಂಚಾರವನ್ನು ವಿಸ್ತರಿಸಲಾಗಿದೆ. ನಿನ್ನೆ ಬೆಳಗ್ಗೆ 5 ಗಂಟೆಯಿಂದ ಇಂದು ಬೆಳಗ್ಗಿನ ಜಾವ 3:10ರವರೆಗೆ ಮೆಟ್ರೋ ಸಂಚಾರ ಸಮಯವನ್ನು ವಿಸ್ತರಿಸಲಾಗಿದೆ. ಎಂ.ಜಿ. ರಸ್ತೆ ನಿಲ್ದಾಣ, ಹಳದಿ, ನೇರಳೆ ಮತ್ತು ಹಸಿರು ಮಾರ್ಗಗಳು ಎಲ್ಲಾ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದವು. ಪ್ರಮುಖವಾಗಿ ಕೋರಮಂಗಲ, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಂತಹ ಪ್ರದೇಶಗಳಲ್ಲಿ ಜನರು ಹೊಸ ವರ್ಷಾಚರಣೆಗೆ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳಿಗೆ ಮೆಟ್ರೋಗೆ ಅಧಿಕ ಆದಾಯ ಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.