ಕೇರಳಕ್ಕೆ ಮಂಡ್ಯ ಬಿಜೆಪಿ ಕಾರ್ಯಕರ್ತರ ಪತ್ರ
ಮಂಡ್ಯ, ಜನವರಿ 1: ‘ಕೇರಳ ಸಿಎಂ ಪಿಣರಾಯಿ ವಿಜಯನ್ (ಪಿಣರಾಯಿ ವಿಜಯನ್) ಅವರೇ, ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದಾರೆ. ದಯವಿಟ್ಟು ಒಂದು ಟ್ವೀಟ್ ಮಾಡಿಬಿಡಿ. ನೀವು ಟ್ವೀಟ್ ಮಾಡಿದರೆ ನಮ್ಮ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮನೆ ಕೊಡುತ್ತಾರೆ’. ಇದು ಮಂಡ್ಯ ಬಿಜೆಪಿ (ಬಿಜೆಪಿ) ಕಾರ್ಯಕರ್ತರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ಪತ್ರ ಬರೆದು ಮನವಿ! ಕೇರಳ ಸಿಎಂ ಬೆನ್ನಲ್ಲೇ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ವಾಸವಿದ್ದ ಅಕ್ರಮ ವಲಸಿಗರಿಗೆ ಮನೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾದ ಬೆನ್ನಲ್ಲೇ ಮಂಡ್ಯದ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದರೂ ಅವರಿಗೆ ಈ ಸೌರ ಸೌಲಭ್ಯ ದೊರಕಿಲ್ಲ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನೆ ಎಂಬ ಮಾತು ಕೇಳಿಬರುತ್ತಿದೆ. ಈ ಬಡವರ ಪರ ಕಾಳಜಿ ಇಟ್ಟುಕೊಂಡು ಒಂದು ಟ್ವೀಟ್ ಮಾಡಿಕೊಡಬೇಕು ಎಂದು ಕೇರಳ ಸಿಎಂಗೆ ಬರೆದ ಪತ್ರದಲ್ಲಿ ಮಂಡ್ಯ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಆ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಮಂಡ್ಯ ಕಾರ್ಯಕರ್ತರು ಹೇಳಿದ್ದೇನು? ವಿಡಿಯೋ ನೋಡಿ
ನೀವು ಟ್ವೀಟ್ ಮಾಡಿದ ತಕ್ಷಣ ಅಕ್ರಮ ವಲಸಿಗರಿಗೆ ಮನೆ ನೀಡಲಾಗುತ್ತಿದೆ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ವಲಸಿಗರಿಗೆ ಮನೆ ನೀಡಲಾಗುತ್ತಿದೆ ಎಂದು ಹೇಳಿ, ಅದೇ ರೀತಿ ರಾಜ್ಯದ ಬಡವರಿಗೆ ಸೂರಿನ ವ್ಯವಸ್ಥೆ ಮಾಡಿ ಟ್ವೀಟ್ ಮಾಡಿ ಎಂದು ಕೇರಳ ಸಿಎಂಗೆ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಪಿಣರಾಯಿ ವಿಜಯನ್ಗೆ ಬರೆದ ಪತ್ರದಲ್ಲೇನಿದೆ?
ಕರ್ನಾಟಕದ ನಿಜವಾದ ವಸತಿ ಹೀನರಿಗೆ ಬಡವರಿಗೆ ಸೂರು ನೀಡಲು ಕರ್ನಾಟಕ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಹಾಗೂ ಡಿ.ಕೆ ಶಿವಕುಮಾರ್ ರವರಿಗೆ ಟ್ವಿಟ್ ಮೂಲಕ ಆದೇಶ ನೀಡುವ ಬಗ್ಗೆ ಮನವಿ ಎಂದಿನಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮುಂದುವರಿದು, ‘ಮಾನ್ಯರೆ, ತಾವು ಒಂದು ಟ್ವಿಟ್ ಮಾಡಿ ಬೆಂಗಳೂರಿನ ಕೋಗಿಲು ಅಕ್ರಮ ಬಡಾವಣೆಯ ಜನರ ಬಗ್ಗೆ ಮಾನವೀಯತೆಯಿಂದ ಪರ್ಯಾಯ ವ್ಯವಸ್ಥೆ ಮಾಡಿ ಎಂದು ಹೇಳಿದ ತಕ್ಷಣ ನಮ್ಮ ಕರ್ನಾಟಕ ಸರ್ಕಾರ ಬೆಚ್ಚಿಬಿದ್ದು ಬಯ್ಯಪ್ಪನ ಹಳ್ಳಿಯಲ್ಲಿ ಹೊಸ ಮನೆ ಕೊಡುತ್ತದೆ ಎಂದರೆ ನಿಮ್ಮ ಶಕ್ತಿ ಏನು ಎಂಬುದು ಕನ್ನಡಿಗರಿಗೆ ಅರ್ಥವಾಗಿದೆ. ನಮ್ಮ ಕರ್ನಾಟಕದಲ್ಲಿ ಪ್ರವಾಹ, ಮಳೆಹಾನಿ, ಭೂಕುಸಿತ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಕ್ಕೆ 14000 ಜನ ಮನೆ ಕಳೆದುಕೊಂಡಿದ್ದಾರೆ. ಸೂರಿಲ್ಲದೆ ಪ್ಲಾಸ್ಟಿಕ್ ಶೆಡ್ಗಳಲ್ಲಿ ವಾಸವಾಗುತ್ತಿದೆ. ವಿವಿಧ ವಸತಿ ಯೋಜನೆ, ಸೇರಿದಂತೆ ಹಲವಾರು ವರ್ಷದಿಂದ ಸಾವಿರಾರು ಜನರು ಚಾತಕ ಪಕ್ಷಿಯ ರೀತಿ ಕಾಯುತ್ತಿದ್ದಾರೆ. ದಯವಿಟ್ಟು ನಮ್ಮ ರಾಜ್ಯದ ಬಡವರ ಬಗ್ಗೆ ನೀವು ಒಂದು ಟ್ವಿಟ್ ಮಾಡಿ ಹೇಳಿದರೆ ಖಂಡಿತ ನಮ್ಮ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ಆದೇಶವನ್ನು ಪಾಲಿಸುತ್ತಾರೆ ಅನ್ನೋ ನಂಬಿಕೆ ಇದೆ . ಸಂಪೂರ್ಣ ಕರ್ನಾಟಕದ ಆಡಳಿತ ಚುಕ್ಕಾಣಿಯನ್ನು ನಿಮಗೆ ಜನರಲ್ ಪವರ್ ಆಫ್ ಅಟಾರ್ನಿ ಮಾಡಿಕೊಟ್ಟಿದ್ದಾರೆ ಎಂದು ನಮ್ಮ ರಾಜ್ಯದಲ್ಲಿ ಮಾತನಾಡುತ್ತಿದ್ದಾರೆ. ರಾಮ, ಕೃಷ್ಣ, ಶಿವ, ಪಾರ್ವತಿ, ಪೂಜಿಸುವ ನಮ್ಮ ಬಗ್ಗೆಯೂ ದಯವಿಟ್ಟು ಕರುಣೆಯಿರಲಿ ಎಂದು ತಮ್ಮಲ್ಲಿ ಬೇಡಿಕೊಳ್ಳುತ್ತೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಹೊಸ ವರ್ಷದ ಮರುದಿನವೇ ಕೋಗಿಲು ನಿರಾಶ್ರಿತರಿಗೆ ಮನೆ ಭಾಗ್ಯ: 187 ಮನೆಗಳ ಸರ್ವೆ ಮುಕ್ತಾಯ, ಯಾರಿಗೆ ಸಿಗಲಿದೆ ಸೂರು?
ಈ ಹಿಂದೆ ಬಂಡೀಪುರ ಮಾರ್ಗವಾಗಿ ರಾತ್ರಿ ಸಂಚಾರ ನಿರ್ಬಂಧಿಸಿದಾಗ, ನಿಮ್ಮ ರಾಜ್ಯದಲ್ಲಿಯೇ ಕಾಲ್ತುಳಿತಕ್ಕೆ ನಮ್ಮ ಸರ್ಕಾರ ಪರಿಹಾರ ಕೊಟ್ಟಾಗ, ನಿಮ್ಮ ರಾಜ್ಯದಲ್ಲಿ ಮನೆಕಟ್ಟಿಕೊಡಲು ನಮ್ಮ ಸರ್ಕಾರಕ್ಕೆ ಹಣಕೊಟ್ಟಾಗ ನಿಮಗೆ ಏನೆಂದು ಗೊತ್ತಾಯಿತು. ಇದಲ್ಲದೇ ಈ ಕೊಡಲೇ ನಮ್ಮ ಪರವಾಗಿಯೂ ದನಿ ಎತ್ತಬೇಕೆಂದು ನಿಮ್ಮಲ್ಲಿ ಕಳಕಳಿಯ ಮನವಿ, ಸಾಧ್ಯವಾದರೆ ನಿಮ್ಮ ರಾಜ್ಯದ ಸಂಸದ ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವೇಣುಗೋಪಾಲ್ ರವರಿಗೂ ಟ್ವಿಟ್ ಮಾಡಲು ಹೇಳಿ ಎಂದು ಪತ್ರದಲ್ಲಿ ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ