Headlines

ಬಂಡೆ ಬ್ಲಾಸ್ಟ್​​ನಿಂದ 4 ಚಿರತೆಗಳು ಸಾವು: ಹೋರಾಟದ ಎಚ್ಚರಿಕೆ ಕೊಟ್ಟ ST ಸೋಮಶೇಖರ್, ಖಂಡ್ರೆ ಹೇಳಿದ್ದಿಷ್ಟು

ಬಂಡೆ ಬ್ಲಾಸ್ಟ್​​ನಿಂದ 4 ಚಿರತೆಗಳು ಸಾವು: ಹೋರಾಟದ ಎಚ್ಚರಿಕೆ ಕೊಟ್ಟ ST ಸೋಮಶೇಖರ್, ಖಂಡ್ರೆ ಹೇಳಿದ್ದಿಷ್ಟು


ಬೆಂಗಳೂರು, ಜನವರಿ 01: ನಾಲ್ಕು ಚಿರತೆಗಳು (ಚಿರತೆ) ಮೃತದೇಹ ಛಿದ್ರ ಛಿದ್ರವಾಗಿದೆ. ಕ್ವಾರಿಯಿಂದ ಸಿಡಿದ (ಕ್ವಾರಿ ಬ್ಲಾಸ್ಟ್) ಕಲ್ಲು ನಾಲ್ಕು ಚಿರತೆಗಳ ಪ್ರಾಣ ತೆಗೆದಿದೆ. ಗರ್ಭಿಣಿ ಚಿರತೆ ಮತ್ತು ಚಿರತೆಯ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಹುಟ್ಟುವ ಮೊದಲೇ ಸತ್ತು ಹೋಗಿವೆ. ಚಿರತೆ ಕೊಂದವರ ವಿರುದ್ಧ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಯಶವಂತಪುರ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಕಲ್ಲು ಬಂಡೆ ಹೊಡೆಯಲು ಸಿಡಿಮದ್ದು ಸಿಡಿಸಿದ್ದಕ್ಕೆ, ಕ್ವಾರಿಯಿಂದ ಸಿಡಿದ ಕಲ್ಲು ಗರ್ಭಿಣಿ ಚಿರತೆಗೆ ಬಡಿದಿದೆ. ಇದ್ರಿಂದ ಚಿರತೆ ಪ್ರದರ್ಶಿಸಿದೆ. ಎಷ್ಟು ಕರೆ ಮಾಡಿದರೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಫೋನ್ ತೆಗೆಯಲಿಲ್ಲ. ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮಾಡುವುದಾಗಿ ಶಾಸಕ ಎಸ್ ಟಿ ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕ್ವಾರಿ ಅರಣ್ಯ ಇಲಾಖೆ ಇಲ್ಲ. ಈ ಬಗ್ಗೆ ತನಿಖೆ ನಡೆಸಲಾಗಿದೆ. ಗಂಭೀರವಾಗಿ ಪರಿಗಣಿಸುತ್ತೇವೆ. ಎಸ್‌ಟಿ ಸೋಮಶೇಖರ್ ಅವರ ಆರೋಪದ ಬಗ್ಗೆ ಮಾಹಿತಿ ಬಂದಿದೆ. ನಾನು ಬೀದರ್ ನಲ್ಲಿದ್ದೆ. ಸಾಕಷ್ಟು ಕಾರ್ಯಕ್ರಮಗಳಲ್ಲಿ ಬ್ಯೂಸಿಯಾಗಿದ್ದೆ. ಅವರು ಕರೆ ಮಾಡಿದ್ದರಂತೆ. ನಾನು ಫೋನ್ ಬದಲಾಯಿಸಿದ ಕಾರಣ ನಾನು ಕರೆ ಸ್ವೀಕರಿಸಲು ಆಗಲಿಲ್ಲ.

ಇದನ್ನೂ ಓದಿ: ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

ಕ್ವಾರಿಯವರು ಬ್ಲಾಸ್ಟ್ ಮಾಡಿದ್ದಾರೆ. ಕ್ವಾರಿ ಅರಣ್ಯದ ಒಳಗಡೆ ಬರುವುದಿಲ್ಲ, ಹೊರಗೆ ಬರುತ್ತೆ. ನಮ್ಮ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬ್ಲಾಸ್ಟ್ ಮಾಡಿದ ಕಾರಣಕ್ಕಾಗಿ ಒಂದು ಚಿರತೆ ಸತ್ತಿದೆ. ಚಿರತೆ ಮರಣೋತ್ತರ ಪರೀಕ್ಷೆ ವೇಳೆ ಹೊಟ್ಟೆಯಲ್ಲಿ ಮರಿ ಇತ್ತು ಅಂತ ಗೊತ್ತಾಗಿದೆ. ಅದನ್ನು ಅತ್ಯಂತ ಗಂಭೀರವಾಗಿ ನಮ್ಮ ಇಲಾಖೆ ಪರಿಗಣಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಅವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ವನ್ಯಜೀವಿ ಸಂರಕ್ಷಣೆ ನಮ್ಮ ಆದ್ಯತೆ. ವನ್ಯಜೀವಿ ಸಂರಕ್ಷಣೆ ಮಾಡಿದರೆ ಮಾತ್ರ ಪ್ರಕೃತಿಯ ಸಮತೋಲನ ಕಾಪಾಡಲು ಸಾಧ್ಯ. ನಾವು ಆ ವಿಚಾರದ ಬಗ್ಗೆ ಬಹಳ ಗಂಭೀರವಾಗಿದ್ದೇವೆ. ನಾನು ಎಸ್‌ಟಿ ಸೋಮಶೇಖರ್ ಅವರ ಜೊತೆಗೂ ಕೂಡ ಮಾತನಾಡುತ್ತೇನೆ. ಕ್ವಾರಿ ಅರಣ್ಯ ಒಳಗಡೆ ಇಲ್ಲ ಅಂತ ಮಾಹಿತಿ ಇದೆ. ಸಾಕಷ್ಟು ವರ್ಷಗಳಿಂದ ಕೆಲವು ಗಣಿಗಾರಿಕೆಗಳು ನಡೆಯುತ್ತಿವೆ. ನಿಯಮಾವಳಿಯಲ್ಲಿ ಅವಕಾಶವಿದೆ ಮಾರ್ಗಸೂಚಿಯಲ್ಲಿ ಏನಾದರೂ ಉಲ್ಲಂಘನೆ ಆಗಿದ್ದರೆ ಅತ್ಯಂತ ಕಠಿಣವಾದ ಕ್ರಮವನ್ನು ತೆಗೆದುಕೊಳ್ಳುತ್ತದೆ. ಯಾರೇ ಇರಲಿ ಎಷ್ಟೇ ಒತ್ತಡ ಬರಲಿ, ಹಿಂದೆನೂ ನಾವು ಬಿಟ್ಟಿಲ್ಲ ಮುಂದೇನು ಬಿಡಲ್ಲ. ಪಾರದರ್ಶಕವಾದ ತನಿಖೆ ನಡೆಯುತ್ತಿದೆ ಕ್ರಮ ಆಗುತ್ತೆ. ಲೀಗಲ್ ಮೈನಿಂಗ್ ಕೂಡ ಈ ರೀತಿ ಬ್ಲಾಸ್ಟ್ ಮಾಡಲು ಅವಕಾಶವಿಲ್ಲ. ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಎಫ್‌ಎಸ್‌ಎಲ್ ವರದಿ ಬಂದ ನಂತರ ನಿಖರವಾದ ಕಾರಣ ತಿಳಿಯಲಿದೆ: ಪ್ರಭಾಷ್ ಚಂದ್ರ

ಚಿರತೆ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಷ್ ಚಂದ್ರ, ಇದು ಬೆಂಗಳೂರು ಅರ್ಬನ್ ಜಿಲ್ಲೆಯ ಮಾವಿನ ತೋಟದಲ್ಲಿ ಶುಕ್ರವಾರ ಘಟನೆ ನಡೆದಿದೆ. ಚಿರತೆ ಹೊಟ್ಟೆಯಲ್ಲಿ 3 ಮರಿಗಳಿದ್ದವು. ಮಾವಿನ ತೋಟದ ಪಕ್ಕದಲ್ಲಿ ಕ್ವಾರಿ ಇದೆ, ಆದರೆ ಚಿರತೆ ಆರಿಸಿದ್ದು ಮಾವಿನ ತೋಟದಲ್ಲಿ. ಸರಿಯಾದ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಪಶು ವೈದ್ಯರು ಪರಿಶೀಲನೆ ಮಾಡಿದ್ದು, ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ, ವರದಿ ಬಂದ ಮೇಲೆ ನಿಖರವಾದ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು

ವಿವಿಧ ಗ್ರಾಮಗಳ ಸರ್ವೆ ನಂಬರ್‌ಗಳಲ್ಲಿ ಕಲ್ಲು ಬಂಡೆ ಹೊಡೆಯುವ ಕ್ರಷರ್‌ಗಳನ್ನು ನಿಷೇಧಿಸಿ ಅಂತ ಅರಣ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಕಲ್ಲು ಬಂಡೆಯ ಹೊಡೆತಕ್ಕೆ ಪ್ರಾಣ ಕಳೆದುಕೊಂಡ ಚಿರತೆಯ ದೃಶ್ಯಗಳು ಮನಕಲಕುವಂತಿವೆ. ಹೆಚ್ಚಿನ ದುರ್ಘಟನೆಗಳು ನಡೆಯುವ ಮೊದಲು ಸರ್ಕಾರವು ಎಷ್ಟು ಒಳ್ಳೆಯದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *