Headlines

ಖರೀದಿ ಕೇಂದ್ರವಿದ್ದರೂ ವ್ಯಾಪಾರವಿಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ ಮೆಕ್ಕೆಜೋಳ ರೈತರು

ಖರೀದಿ ಕೇಂದ್ರವಿದ್ದರೂ ವ್ಯಾಪಾರವಿಲ್ಲ: ಸರ್ಕಾರದ ವಿರುದ್ಧ ಸಿಡಿದೆದ್ದ ಮೆಕ್ಕೆಜೋಳ ರೈತರು


ಖರೀದಿ ಕೇಂದ್ರವಿದ್ದರೂ ಮಾರಾಟವಾಗದೆ ಉಳಿದ ಬೆಳೆ

ಗದಗ, ಜನವರಿ 02: ಗದಗ (ಗದಗ) ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರು ಮತ್ತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಹೋರಾಟದ ಬಳಿಕ ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿದ್ದರೂ, ವಾಸ್ತವದಲ್ಲಿ ಖರೀದಿ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಖರೀದಿ ಕೇಂದ್ರ ಆರಂಭವಾಗಿದೆ ಎಂಬ ಮಾತು ಕೇವಲ ಕಾಗದದಲ್ಲೇ ಉಳಿದಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆಯೇ?

ಲಕ್ಷ್ಮೇಶ್ವರ ಹಾಗೂ ಮುಳಗುಂದ ಪ್ರದೇಶಗಳಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಮೆಕ್ಕೆಲವನ್ನು ಮಾರಾಟ ಮಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ. ಕೆಲವು ರೈತರ ಹೆಸರು ಮಾತ್ರ ನೋಂದಣಿ, ಬೆಂಬಲ ಬೆಲೆಯಲ್ಲಿ ಒಂದೇ ಒಂದು ಕ್ವಿಂಟಾಲ್ ಮೆಕ್ಕೆಜೋಳವೂ ಖರೀದಿಯಾಗಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ. ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾವಿರಾರು ರೂ. ನಷ್ಟ ಅನುಭವಿಸುತ್ತಿರುವ ರೈತರು

ಜಿಲ್ಲೆಯಲ್ಲಿ ಸುಮಾರು 1.44 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯುತ್ತಿದೆ, ಹೆಕ್ಟೇರ್‌ಗೆ ಸರಾಸರಿ 30 ರಿಂದ 40 ಕ್ವಿಂಟಲ್ ಇಳುವರಿ ಬಂದಿದೆ. ಒಟ್ಟು 45 ಲಕ್ಷ ಕ್ವಿಂಟಲ್ ಮೆಕ್ಕೆಜೋಳ ಉತ್ಪಾದನೆಯಾಗಿದ್ದರೂ, ಕೇವಲ 2 ಸಾವಿರ ರೈತರ ಹೆಸರು ಮಾತ್ರ ಖರೀದಿ ಕೇಂದ್ರದಲ್ಲಿ ನೋಂದಣಿಯಾಗಿದೆ. ರೈತರು ನೋಂದಣಿಯಿಂದ ಹೊರಗುಳಿದಿದ್ದಾರೆ.

ಇದೀಗ ರೈತರಿಗೆ ಕ್ವಿಂಟಲ್‌ಗೆ 1500 ರಿಂದ 1700 ರೂಪಾಯಿಗೆ ಮೆಕ್ಕೆಜೋಳ ಮಾರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಪ್ರತಿಕ್ವಿಂಟಲ್‌ಗೆ 500 ರಿಂದ 70 ರೂಪಾಯಿಗಳಾಗುತ್ತಿರುವಾಗ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *