Headlines

ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ನಿವೃತ್ತ ಶಿಕ್ಷಕ

ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ನಿವೃತ್ತ ಶಿಕ್ಷಕ


ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್ ಅರೆಸ್ಟ್ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್ ನಂಬರ್ 8 ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೋಡಾಕ್ ಮೋಸ ಹೋಗಿದ್ದಾರೆ.

202 ನವೆಂಬರ್ 29 ರಂದು ಯುವತಿ ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬೈಯ ಕೋಲವಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಾತಾಡ್ತಾರೆಂದು ಗಂಡನಿಗೆ ಫೋನ್ ಕೊಟ್ಟಿದ್ದಾಳೆ. ಮುಂಬೈನಲ್ಲಿ ಇತ್ತಿಚೆಗೆ ಉಗ್ರವಾದಿಯ ಬಂಧನ ಆಗಿದ್ದು, ಆತನ ಬಳಿ 250ಕ್ಕೂ ಹೆಚ್ಚು ಎಟಿಎಂ ಕಾರ್ಡ್‌ಗಳು ಸಿಕ್ಕಿವೆ. ಅದರಲ್ಲಿ ನಿಮ್ಮ ಹೆಸರಿನ ಕಾರ್ಡ್ ಕೂಡ ಇದೆ. ನಿಮ್ಮ ಬ್ಯಾಂಕ್ ಕೊಟ್ಯಾಂತರ ರೂಪಾಯಿ ಖಾತೆಯ ಮೂಲಕ ಮನಿ ಲಾಂಡ್ರಿಂಗ್ ನಡೆದಿದೆ ಎಂದು ಬೆದರಿಸಿದ್ದಾರೆ. ಮುಖಕ್ಕೆ ಬಟ್ಟೆ ಧರಿಸಿದ್ದವರು ಹೇಳಿದ ಮಾತುಗಳಿಂದ ಭಯಗೊಂಡ ಪಲ್ಡೆನ್, ನನ್ನದೇನೂ ತಪ್ಪಿಲ್ಲ. ಈಗ ನಾನೇನು ಮಾಡಬೇಕು ಹೇಳಿ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕರು ನಿವೃತ್ತ ಶಿಕ್ಷಕರ ಬಳಿ ಹಣ ಪೀಕಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ ವಂಚನೆಗೆ ಹೆದರಿ ಫ್ಲಾಟ್, ಸೈಟ್ ಮಾರಿದ್ದಲ್ಲದೆ ಸಾಲ ಮಾಡಿ 2 ಕೋಟಿ ರೂ. ಕಳೆದುಕೊಂಡ ಮಹಿಳಾ ಟೆಕ್ಕಿ

ತನಿಖೆಗಾಗಿ ನಿಮ್ಮ ಖಾತೆಯಲ್ಲಿರುವ ಹಣವನ್ನ ಹಂತಹಂತವಾಗಿ ನಮ್ಮ ಖಾತೆಗೆ ಹಾಕಿ. ನಿಮ್ಮ ಹಣವನ್ನ ಎಲ್ಲಾ ಫಂಡ್‌ಗೆ ಜಮೆ ಮಾಡಬೇಕು. ಬಳಿಕ ಹಣವನ್ನು ರಿಟರ್ನ್ ಕೊಡಲಾಗುವುದೆಂದು ನಂಬಿಸಿದ್ದಾರೆ. ವಿಷಯವನ್ನ ಯಾರೊಂದಿಗೂ ಶೇರ್ ಮಾಡದಂತೆ ಷರತ್ತು ಕೂಡ ವಿಧಿಸಿದ್ದಾರೆ. ಡಿ. 3ರಿಂದ 11ರ ವರೆಗೆ ಬೇರೆ ಖಾತೆಗೆ ಒಟ್ಟು 1,61,00,047 ರೂಪಾಯಿ ಹಾಕಿಸಿಕೊಂಡಿದ್ದ ವಂಚಕರು, ಕರೆ ಮಾಡಿ ನಿಮ್ಮನ್ನು ಬಂಧಿಸುವ ಸಾಧ್ಯತೆ ಇದೆ. ಅದು ಬೇಡವೆಂದರೆ ಮತ್ತೆ 40 ಲಕ್ಷ ಕೊಡಿ ಎಂದು ಡಿಮ್ಯಾಂಡ್ ಮಾಡಿದ್ದಾರೆ.

ಇದ್ದ ಹಣವನ್ನೆಲ್ಲ ಇವರಿಗೆ ಅದಾಗಲೇ ಕೊಟ್ಟಿದ್ದ ಪಲ್ಡೆನ್, ಸ್ನೇಹಿತನಿಗೆ ಕರೆ ಮಾಡಿ 40 ಲಕ್ಷ ಕೇಳಿದ್ದಾರೆ. ಆಗ ಇಷ್ಟೊಂದು ಹಣ ಯಾಕೆಂದು ಆತ ವಿಚಾರಿಸಿದ ವೇಳೆ ನಡೆದ ಘಟನೆಯನ್ನು ವಿವರಿಸಿದ್ದಾರೆ. ಆಗ ವಂಚನೆ ಬಗ್ಗೆ ಗೊತ್ತಾಗಿ, ಕೂಡಲೇ ಪಲ್ಡೆನ್ ಅವರು ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಕಾರವಾರ ಸೈಬರ್ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 7:20 pm, ಶುಕ್ರ, 2 ಜನವರಿ 26



Source link

Leave a Reply

Your email address will not be published. Required fields are marked *