ಬೆಂಗಳೂರು, (ಜನವರಿ 02): ಹೊಸ ವರ್ಷದ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳು ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ.
ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಲೀಕ್!
ಇಂದು ನಡೆದ ಬಿಕಾಂ ಐದನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ಲೀಕ್ ಆಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನಿನ್ನೆ ಸಂಜೆ ಪ್ರಶ್ನೆಪತ್ರಿಕೆಯ ಪ್ರತಿಗಳು ವಾಟ್ಸಾಪ್ ಗುಂಪಿನಲ್ಲಿ ಹರಿದಾಡುತ್ತಿವೆ, ಇಂದು ಪರೀಕ್ಷಾ ಕೇಂದ್ರದಲ್ಲಿ ನೀಡಲಾದ ಪ್ರಶ್ನೆಪತ್ರಿಕೆಗೂ ಲೀಕ್ ಆದ ಪೇಪರ್‌ಗೂ ಸಂಪೂರ್ಣ ಸಾಮ್ಯತೆ ಇದೆ ಎಂದು ದೃಢಪಟ್ಟಿದೆ. ಇನ್ನು ಈ ವ್ಯವಸ್ಥಿತ ನಕಲು ದಂಧೆಯ ಹಿಂದೆ ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ತಮ್ಮ ಕಾಲೇಜಿನ ಫಲಿತಾಂಶದ ಪ್ರಶ್ನೆ ಬರಲಿ ಎಂಬ ಉದ್ದೇಶದಿಂದ ಪರೀಕ್ಷಾ ವಿಭಾಗದ ಸಿಬ್ಬಂದಿಗೆ ಶಾಮೀಲಿಪತ್ರಿಕೆ ಮೊದಲೇ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ
ವಿದ್ಯಾರ್ಥಿ ಸಂಘಟನೆ NSUI ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಸಮರ ಸಾರಿದೆ. ಇಂದಿನ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ನಮಗೆ ಲಭ್ಯವಾಗಿತ್ತು. ಇದನ್ನು ದುರುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಾಮಾಣಿಕವಾಗಿ ಓದಿದ ಇದನ್ನು ಮಾಡಿದ ದ್ರೋಹ ಎಂದು ಸಂಘಟನೆಯ ಪ್ರತಿನಿಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಶ್ನೆಪತ್ರಿಕೆ ಸೊರಿಕೆಯಾಗಿರುವ ಬಗ್ಗೆ ಮಾಹಿತಿ ಇದ್ದರೂ ಸಹ ಬೆಂಗಳೂರು ನಗರ ವಿವಿಯ ಪರೀಕ್ಷಾ ವಿಭಾಗ ಯಾವುದಾದರೂ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡಮಾಡಿಕೊಟ್ಟಿದೆ. ಈ ಹಗರಣದ ಬಗ್ಗೆ ವಿಶ್ವವಿದ್ಯಾಲಯವು ಮೌನಕ್ಕೆ ಶರಣಾಗಿರುವುದು ವಿದ್ಯಾರ್ಥಿಗಳ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 7:43 pm, ಶುಕ್ರ, 2 ಜನವರಿ 26