Headlines

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ


ಬೆಂಗಳೂರು, ಜ.1: ಇಂದು ಕರ್ನಾಟಕದ ಹಲವು (ಕರ್ನಾಟಕ ಹವಾಮಾನ ಮುನ್ಸೂಚನೆ) ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ವಾತಾವರಣ ಇರುತ್ತದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27°C (81°F) ಮತ್ತು ಕನಿಷ್ಠ ತಾಪಮಾನ 18°C ​​(64°F) ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಕರ್ನಾಟಕ ಮಳೆಯಾಗುವ ಸಾಧ್ಯತೆ ಕಡಿಮೆ. ಹಾಗೂ ಮಂಗಳೂರು ಮತ್ತು ಉಡುಪಿ ಸುತ್ತಲೂ, ಚಳಿ ಹೆಚ್ಚಿರಲಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ನಡೆಯಲಿದೆ. ಕಲಬುರಗಿ,ಬೀದರ್, ಮತ್ತು ಬಾಗಲಕೋಟೆಯಲ್ಲಿ ಸಾಮಾನ್ಯ ಚಳಿ ಇದ್ದು, ಗರಿಷ್ಠ 29°C ಮತ್ತು ರಾತ್ರಿ ತಾಪಮಾನ ಕಡಿಮೆ ಇರುತ್ತದೆ. ದಾವಣಗೆರೆ,ಚಿತ್ರದುರ್ಗ ಮತ್ತು ಬಳ್ಳಾರಿ ಇಂದು ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ಮುಂದಿನ 3 ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಚಳಿ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬಿಗ್ ಶಾಕ್: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ.ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದುವರೆಯಲಿದೆ. ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಚಳಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಸಂಕ್ರಾಂತಿ ಸಮಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 6:25 am, ಶನಿ, 3 ಜನವರಿ 26



Source link

Leave a Reply

Your email address will not be published. Required fields are marked *