ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್​​ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ

ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್​​ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ


ಬಲೂಚಿಸ್ತಾನದ ಪ್ರಮುಖ ನಾಯಕ (ಬಲೂಚ್ ನಾಯಕ) ಮೀರ್ ಯಾರ್ ಬಲೂಚ್, ಪಾಕಿಸ್ತಾನ ಮತ್ತು ಚೀನಾದ ನಡುವಿನ ಸಂಬಂಧದ ಬಗ್ಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗ ಮುಕ್ತ ಪತ್ರ ಬರೆದಿದ್ದಾರೆ. ಬೀಜಿಂಗ್-ಇಸ್ಲಾಮಾಬಾದ್ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ, ಮುಂದಿನ ಕೆಲವು ತಿಂಗಳುಗಳಲ್ಲಿ ಚೀನಾ ತನ್ನ ಮಿಲಿಟರಿ ಪಡೆಗಳನ್ನು ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ಸೂಚಿಸಬಹುದು ಎಂದು ಈ ಪತ್ರದಲ್ಲಿ ಹೇಳಿದ್ದಾರೆ. ಬಲೂಚಿಸ್ತಾನ್ ಪಾಕಿಸ್ತಾನದ ನಿಯಂತ್ರಣದಲ್ಲಿ ಡಬ್ಬಾಳಿಕೆಯನ್ನು ಎದುರಿಸಿದೆ. ಹಿಂಸೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪಾಕ್ ಮಾಡಿದೆ ಎಂದು ಹೇಳಿದ್ದಾರೆ. ಈ ಕಾರಣಕ್ಕೆ ಬಲೂಚಿಸ್ತಾನ್ ಮೇ 2025 ರಲ್ಲಿ ಪಾಕಿಸ್ತಾನದಿಂದ ಸ್ವಾತಂತ್ರ್ಯ ಎಂದು ಘೋಷಿಸಲಾಯಿತು. 2026 ರ ಮೊದಲ ವಾರದಲ್ಲಿ “ಬಲೂಚಿಸ್ತಾನ್ ಜಾಗತಿಕ ರಾಜತಾಂತ್ರಿಕ ವಾರ” ವನ್ನು ಆಚರಣೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು.

ಇನ್ನು ಪಾಕ್ ಮತ್ತು ಚೀನಾದ ನಡುವಿನ ಸಂಬಂಧದ ಬಗ್ಗೆ ಪತ್ರ ಬರೆಯುವ ಮೂಲಕ ಭಾರತಕ್ಕೆ ಎಚ್ಚರಿಕೆ ನೀಡಲಾಗಿದೆ. ಇದರೊಂದಿಗೆ ಭಾರತದ ಆಡಳಿತಾತ್ಮಕ ಕೆಲಸವನ್ನು ಹಾಡಿ ಹೊಗಳಿದ್ದಾರೆ. 2025 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರವು ದಿಟ್ಟ ಕ್ರಮಗಳ ಬಗ್ಗೆ ಶ್ಲಾಘಿಸಿದರು. ಕಳೆದ ವರ್ಷ ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ ಭಯೋತ್ಪಾದನಾ ಕೇಂದ್ರಗಳನ್ನು ನಾಶಮಾಡಲು ಆಪರೇಷನ್ ಸಿಂಧೂರ್ ಮೂಲಕ ಕ್ರಮಕ್ಕೆ ಗಮನ ಸೆಳೆಯಲಾಯಿತು. ಈ ಕ್ರಮವನ್ನು ಮತ್ತು ಪ್ರಾದೇಶಿಕ ಭದ್ರತೆ ಮತ್ತು ನ್ಯಾಯ ನೀಡುವ ಮೂಲಕ ದೃಢ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಶಾಂತಿ, ಸಮೃದ್ಧಿ, ಅಭಿವೃದ್ಧಿ, ವ್ಯಾಪಾರ, ರಕ್ಷಣೆ, ಭದ್ರತೆ, ಭವಿಷ್ಯದ ಭರವಸೆಗಳು ಮತ್ತು ಗುಪ್ತ ಬೆದರಿಕೆಗಳನ್ನು ತಗ್ಗಿಸುವಂತಹ ಸ್ನೇಹ, ವಿಶ್ವಾಸ ಮತ್ತು ಪರಸ್ಪರ ಹಿತಾಸಕ್ತಿಗಳನ್ನು ಬೆಳೆಸುವಲ್ಲಿ ಭಾರತ ಮತ್ತು ಸರ್ಕಾರಕ್ಕೆ ನಮ್ಮಬೆಂಬಲವಿದೆ ಎಂದು ಹೇಳಿದ್ದಾರೆ. ಬಲೂಚಿಸ್ತಾನದ ಜನರು ಕಳೆದ ಎಪ್ಪತ್ತೊಂಬತ್ತು ವರ್ಷಗಳಿಂದ ಪಾಕಿಸ್ತಾನದ ಆಕ್ರಮಣ, ಭಯೋತ್ಪಾದಕ ದಾಳಿಯನ್ನು ಸಹಿಸಿಕೊಂಡು ಬಂದಿದೆ. ಈ ಪಿಡುಗನ್ನು ಬೇರು ಸಮೇತ ತೆಗೆಯುವ ಕೆಲಸ ಆಗಬೇಕಿದೆ. ಅದಕ್ಕಾಗಿ ಭಾರತಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: RSS ಅನ್ನು ವಿಕಿಪೀಡಿಯಾದಲ್ಲಿ ಹುಡುಕುವ ಬದಲು ಅದರ ಜೊತೆಗೆ ಕೆಲಸ ಮಾಡಿ: ಮೋಹನ್ ಭಾಗವತ್

ಪಾಕಿಸ್ತಾನ ಮತ್ತು ಚೀನಾ ನಡುವಿನ ಹೆಚ್ಚುತ್ತಿರುವ ಕಾರ್ಯತಂತ್ರದ ಮೈತ್ರಿಯನ್ನು ಬಲೂಚಿಸ್ತಾನದ ಜನರು ಅತ್ಯಂತ ಅಪಾಯಕಾರಿ ಎಂದು ಹೇಳಿದ್ದಾರೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಐಸಿ) ಅಂತಿಮ ಹಂತಕ್ಕೆ ಬಂದಿದೆ. ಅದಕ್ಕಾಗಿ ಬಲೂಚಿಸ್ತಾನದ ರಕ್ಷಣಾ ಮತ್ತು ಸ್ವಾತಂತ್ರ್ಯ ಪಡೆಗಳ ಸಾಮರ್ಥ್ಯಗಳನ್ನು ಉತ್ತಮಗೊಳಿಸದಿದ್ದರೆ ಚೀನಾ ಕೆಲವೇ ತಿಂಗಳುಗಳಲ್ಲಿ ಬಲೂಚಿಸ್ತಾನದಲ್ಲಿ ತನ್ನ ಮಿಲಿಟರಿ ಪಡೆಗಳನ್ನು ನಿಯೋಜಿಸಬಹುದು ಎಂದು ಹೇಳಿದರು. ಇದು ಬಲೂಚಿಸ್ತಾನಕ್ಕೆ ಎಂದು, ಭಾರತಕ್ಕೂ ತೊಂದರೆ ಎಂದು ಹೇಳಿದ್ದಾರೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *