ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು!
ತುಮಕೂರು, ಜನವರಿ 03: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಜೋಳದ ಜೋಳದ ಚಿಗುರು ಸಿಪ್ಪೆ ಸೇವಿಸಿದ ಪರಿಣಾಮ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಜಂಪಕ್ಕುವರಿಗೆ ಸೇರಿದ ಸುಮಾರು 200ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50ಕ್ಕೂ ಹೆಚ್ಚು ಕುರಿ ಮರಿಗಳು ಇವೆ.
ರೂಪಾಯಿ ನಷ್ಟ
ಪ್ರತಿದಿನದಂತೆ ಮೊನ್ನೆ ಕುರಿಗಳನ್ನು ಮೇವಿಗಾಗಿ ಹೊಲದತ್ತ ತೆಗೆದುಕೊಳ್ಳಲಾಯಿತು. ಎಂದಿನಂತೆ ಹುಲ್ಲು ಮೇಯುತ್ತಿದ್ದ ಕುರಿಗಳು, ಏಕಾಏಕಿ ಕುಸಿದು ಬಿದ್ದಿದ್ದು, ಕೆಲವೇ ಕ್ಷಣಗಳಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದರಿಂದ ಕುರಿಗಾಹಿಗೆ ಭಾರೀ ಗಾತ್ರದ ಕಾರಣ, ರೂಪಾಯಿ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶ
ವಿಷಯ ತಿಳಿಯದಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ವೇಳೆ ಕುರಿಗಳು ಜೋಳದ ಚಿಗುರು ಸಿಪ್ಪೆಯನ್ನು ಸೇವಿಸಿರುವುದು. ವೈದ್ಯಾಧಿಕಾರಿ ಅರ್ಕೆರಪ್ಪ ಅವರು, ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶವು ವಿಷವಾಗಿ ಪರಿಣಮಿಸುತ್ತದೆ ಕುರಿಗಳು ಸಾವಿಗೆ ಕಾರಣ ಎಂದು.
ಘಟನೆಯ ಹಿನ್ನೆಲೆ ಕುರಿಗಳ ಮಾದರಿ ಸ್ಯಾಂಪಲ್ ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದೆ, ಅಂತಿಮ ವರದಿ ನಿರೀಕ್ಷಿಸಲಾಗಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ರೈತರು ಹಾಗೂ ಕುರಿಗಾಹಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಪಶು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.