ಎಐ ದೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ
ಮುಜಫರ್‌ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋಗಳನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಮುಜಫರ್ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಅವರ AI ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್ ಕುಮಾರ್ ಎಂದು ಗುರುತಿಸಲಾಗಿದೆ. ರಾಷ್ಟ್ರಪತಿ ಹಾಗೂ ಪ್ರಧಾನಿಯನ್ನು ಹೋಲಿಸುವಂತೆ ಧ್ವನಿಯನ್ನು ಭಾರತದ ಎಐ ಮೂಲಕ ಡೀಪ್ ಪೇಕ್ ಮಾಡಲಾಗಿದೆ.
ಮುಜಫರ್ ಪುರ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರ ವಿಡಿಯೋ ಹಂಚಿಕೊಂಡಿದ್ದಾರೆ. ಇದು ಸಾರ್ವಜನಿಕರನ್ನು ದಾರಿತಪ್ಪಿಸುವ ಮತ್ತು ದೇಶದ ಅತ್ಯುನ್ನತ ಹುದ್ದೆಯಲ್ಲಿರುವವರ ಘನತೆ, ಪ್ರತಿಷ್ಠೆ, ವಿಶ್ವಾಸಕ್ಕೆ ಹಾನಿ ಮಾಡಿದೆ ಎಂದು ಹೇಳಿದ್ದಾರೆ.
ಈ ಮೂಲಕ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸುವುದು, ಹಾಗೂ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಷ್ಟ್ರವಿರೋಧಿ ಭಾವನೆ, ವದಂತಿಗಳನ್ನು, ಸಾಮಾಜಿಕ ಅಶಾಂತಿಯನ್ನು ಸೃಷ್ಟಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ. ಜೊತೆಗೆ ಇಂತಹ ಕೃತ್ಯ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ.
ಇದನ್ನೂ ಓದಿ: ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ
ಇನ್ನು ಇಂತಹ ಪ್ರಕರಣಗಳನ್ನು ತಡೆಯಲು ಹಾಗೂ ಇದರ ತನಿಖೆಯನ್ನು ಮಾಡಲು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಮುಜಪ್ ಪುರದ ಎಸ್ ಎಸ್ ಪಿ ನಿರ್ದೇಶನ ನೀಡಿದೆ. ಇನ್ನು ಪ್ರಧಾನಿ, ರಾಷ್ಟ್ರಪತಿ ಅವರ ಎಐ ವಿಡಿಯೋ ಮಾಡಿರುವ ವ್ಯಕ್ತಿಯಿಂದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. 01/26ರಂತೆ ಪ್ರಕರಣ ದಾಖಲಾಗಿದ್ದು, ಪ್ರಮೋದ್ ಕುಮಾರ್ ನ ಕ್ರಿಮಿನಲ್ ಹಿನ್ನಲೆಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ