Headlines

ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ


ಬೆಳಗಾವಿ, ಜನವರಿ 04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಡಿಸಿಸಿ ಬ್ಯಾಂಕ್ ಘಟನೆಯಲ್ಲಿ ನೌಕರರ ಪ್ರತಿಭಟನೆ. ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಜೊತೆಗೆ ಮತ್ತೊಂದೆಡೆ ಶಾಸಕ ಲಕ್ಷ್ಮಣ ಸವದಿ ಅವರ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಈ ವೇಳೆ ಲಕ್ಷ್ಮಣ ಸವದಿ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *