Headlines

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಶನಿವಾರ ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಆದರೆ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಐವರಿಗೆ ಬಿಸಿಸಿಐ ಸೆಲೆಕ್ಷನ್ ಕಮಿಟಿ ಶಾಕ್ ನೀಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.

ಇದೇ ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ಶುಭ್‌ಮನ್ ಗಿಲ್ ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ ಭಾರತ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಬುಮ್ರಾ ಅನುಪಸ್ಥಿತಿಯಲ್ಲಿ ತಂಡಕ್ಕೆ ಕಮ್‌ಬ್ಯಾಕ್ ನೀಡುವ ನಿರೀಕ್ಷೆಯಲ್ಲಿದ್ದ ಮೊಹಮ್ಮದ್ ಶಮಿಗೆ ಬಿಸಿಸಿಐ ಆಯ್ಕೆ ಸಮಿತಿ ಶಾಕ್ ನೀಡಿದೆ.

ಅನುಭವಿ ವೇಗಿ ಮೊಹಮ್ಮದ್ ಶಮಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಿದ್ದೂ ಶಮಿಗೆ ಆಯ್ಕೆ ಸಮಿತಿಗೂ ಶಮಿಗೆ ಮಣೆ ಹಾಕದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

ಇನ್ನು ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ ಫೈನಲ್‌ನಲ್ಲಿ ಶತಕ ಸಿಡಿಸಿ ಜಾರ್ಖಂಡ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಇಶಾನ್ ಕಿಶನ್‌ಗೂ ಕೂಡಾ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇಶಾನ್ ಕಿಶನ್ ಕಿವೀಸ್ ಎದುರಿನ ಟಿ20 ಸರಣಿ ಹಾಗೂ ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿದ್ದಾರೆ.

ಪುಣೆ ಮೂಲದ ಪ್ರತಿಭಾನ್ವಿತ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರನ್ನು ಆಯ್ಕೆ ಸಮಿತಿ ಕೈಬಿಟ್ಟಿದೆ. ಗಾಯಕ್ವಾಡ್ ಭಾರತ ಪರ ಕಳೆದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದರು. ಹೀಗಿದ್ದೂ ಋತುರಾಜ್‌ಗೆ ಆಯ್ಕೆ ಸಮಿತಿ ತಂಡದಿಂದ ಕೈಬಿಟ್ಟು ಶಾಕ್ ನೀಡಿದೆ.

ಭಾರತದ ಪ್ರತಿಭಾನ್ವಿತ ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ಮತ್ತೊಮ್ಮೆ ಆಯ್ಕೆ ಸಮಿತಿ ಏಕದಿನ ಸರಣಿಯಿಂದ ಕೈಬಿಟ್ಟಿದೆ. ಅಕ್ಷರ್ ಪಟೇಲ್ ಏಕಾಂಗಿಯಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಪಂದ್ಯದ ದಿಕ್ಕು ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

ಇನ್ನು ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕಳೆದ 5 ಪಂದ್ಯಗಳ ಪೈಕಿ ನಾಲ್ಕು ಪಂದ್ಯಗಳಲ್ಲಿ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಪಡಿಕ್ಕಲ್ ಪ್ರದರ್ಶನ ಗಮನಿಸಿದರೆ, ಭಾರತ ತಂಡದಲ್ಲಿ ಈ ಬಾರಿ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.

Source link

Leave a Reply

Your email address will not be published. Required fields are marked *