ಮಂಗಳೂರು, ಜನವರಿ 04: ಕಾನೂನಿನ ನೆಪವೊಡ್ಡಿ ಪ್ರಸಿದ್ಧ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಖಾಕಿ ತಡೆ ವಿಚಾರವೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದೆ. ಜೂಜು, ಪ್ರಾಣಿ ಹಿಂಸೆಯ ಕಾರಣ ನೀಡಿ ಕೋಳಿ ಅಂಕಕ್ಕೆ ಮಂಗಳೂರು ನ್ಯಾಯಾಲಯ ಅನುಮತಿ ನಿರಾಕರಣೆ ಬೆನ್ನಲ್ಲೇ ಗರೋಡಿ ಆಡಳಿತ ಸಮಿತಿಯ ಮೊರೆ ಹೋಗಿದೆ. ಈ ವೇಳೆ ಅಭಯ್ ಅಂಕ ನೀಡಿರುವ ದೈವ, ‘ಹಿಂದೆ ಕೋಳಿ ನಿಲ್ಲಲು ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ’ ಎಂದು.
ವಿಟ್ಲ ಕೇಪು ಉಳ್ಳಾಲ್ತಿ ಬಳಿಕ ಇದೀಗ, 150 ವರ್ಷಗಳ ಇತಿಹಾಸವಿರುವ ಕಂಕನಾಡಿ ಗರೋಡಿ ಜಾತ್ರೆಯ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಅನುಮತಿ ನಿರಾಕರಿಸಲಾಗಿದೆ. ಹಲವು ಬಾರಿ ಮನವಿ, ಮನವರಿಕೆ ಮಾಡಿದರೂ ಪೊಲೀಸರು ಒಪ್ಪಿಲ್ಲ. ಹೀಗಾಗಿ ಬೇರೆ ದಾರಿ ಕಾಣದೆ ಗರೋಡಿ ಆಡಳಿತ ಸಮಿತಿ ಕೋಟಿ ಚೆನ್ನಯ್ಯ ದೈವಗಳ ಮೊರೆ ಹೋಗಿದೆ. ದೈವವೇ ದಾರಿ ತೋರಿಸಿಕೊಡಬೇಕು ಎಂದು ಪ್ರಾರ್ಥನೆ ಸಲ್ಲಿಸಿದೆ. ಯಾಕೆ ಈ ಬಾರಿ ಕೋಳಿ ಅಂಕ ನಡೆದಿಲ್ಲ ಎಂದು ದರ್ಶನದ ವೇಳೆ ದೈವಗಳು ಪ್ರಶ್ನೆ ಮಾಡಿದ್ದು, ಪೊಲೀಸ್ ಇಲಾಖೆಯಿಂದ ಕೋಳಿ ಅಂಕಕ್ಕೆ ತಡೆ ಎಂದು ಭಕ್ತರು ಮುಂದಾಗಿದ್ದಾರೆ.
ಇದನ್ನೂ ಓದಿ: ಕೋಳಿ ಅಂಕ; ಕಾಂಗ್ರೆಸ್ ಶಾಸಕ ಆಯ್ತು ಈಗ ಬಿಜೆಪಿ ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಸೇರಿ 27 ಜನರ ವಿರುದ್ಧ ಕೇಸ್
ಇನ್ನು ಕೋಳಿ ಅಂಕಕ್ಕೆ ತಡೆ ವಿಚಾರವಾಗಿ ಗರಡಿ ಕ್ಷೇತ್ರದ ಟ್ರಸ್ಟಿ ಚಂದ್ರನಾಥ್ ಅತ್ತಾವರ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಾರ್ಣಿಕದ ಕತೆ ಬಹಳ ಇತ್ತು, 1997ರ ಅಯೋಧ್ಯೆ ರಾಮ ಮಂದಿರ ವಿವಾದದ ಕರ್ಫ್ಯೂ ವೇಳೆಯೂ ಇಲ್ಲಿ ಕೋಳಿ ಅಂಕ ನಡೆಸಲಾಯಿತು. ಕೊರೊನಾ ಸಂದರ್ಭದಲ್ಲೂ ಕೂಡ ಇದೆ. ದೈವಗಳಿಗೆ ಪ್ರಾರ್ಥನೆ ಬೆನ್ನಲ್ಲೇ ಎಲ್ಲಾ ಅಡೆತಡೆಗಳು ಪರಿಹಾರವಾಗಿತ್ತು. ಇದೀಗ ಮತ್ತೆ ಕೋಳಿ ಅಂಕವನ್ನ ಸುಸೂತ್ರವಾಗಿ ನಡೆಸೋದಾಗಿ ದೈವ ನುಡಿ ಕೊಟ್ಟಿದೆ. ಜೂಜು ನಡೆದರೆ ಕ್ರಮ ಕೈಗೊಳಲಿ. ಆದರೆ ಭಕ್ತರ ಧಾರ್ಮಿಕ ನಂಬಿಕೆಗೆ ಅಡ್ಡಿಪಡಿಸಬಾರದು ಎಂದು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 10:21 am, ಭಾನುವಾರ, 4 ಜನವರಿ 26