ಜನವರಿ ತಿಂಗಳ ಮೊದಲ ವಾರ ಕೆಲವರಿಗೆ ಮಾತ್ರ ಶುಭವಿದ್ದು, ಉಳಿದವರು ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಏರಿಳಿತಗಳನ್ನು ಸಹಿಸಿಕೊಳ್ಳಬೇಕಾಗುವುದು. ಭವಿಷ್ಯದ ಕಡೆ ನಿಮ್ಮ ಚಿತ್ತವಿರಲಿ. ಕ್ಷಣಿಕವನ್ನು ತೀರ್ಮಾನ ಮಾಡುವುದು ಬೇಡ.
ಮೇಷ ರಾಶಿ:
ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಹೊಸ ವರ್ಷದ ಮೊದಲ ವಾರ ನಿಮ್ಮ ಮನಸ್ಸಿನ ಮಾತನ್ನು ಕೇಳದೇ ಬುದ್ಧಿಯಿಂದ ಸರಿಯಾದ ತೀರ್ಮಾನವನ್ನು ಮಾಡಿ. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ಆದಾಯಕ್ಕೆ ಮೂಲವಾದುದನ್ನು ಹುಡುಕುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಕಾರಾತ್ಮಕತೆಯನ್ನು ಬುದ್ಧಿಪೂರ್ವಕವಾಗಿ ಹಿಮ್ಮೆಟ್ಟಿಸಿ. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹ ಕಾಣಿಸುತ್ತದೆ.
ವೃಷಭ ರಾಶಿ:
ಎರಡನೇ ರಾಶಿಯವರಿಗೆ ಈ ವಾರ ಅದೃಷ್ಟವನ್ನು ನಂಬಿ ಸುಮ್ಮನೆ ಕುಳಿತರೆ ಪ್ರಯೋಜನವಾಗದು. ಕಾರ್ಯೋನ್ಮುಖರಾಗುವ ಅವಶ್ಯಕತೆ ಬಹಳ ಇರಲಿದೆ. ಜೀವನೋತ್ಸಾಹಕ್ಕೆ ನಿಮ್ಮದಾದ ಚಿಂತನೆಗಳು ಇರಲಿ. ಸತ್ಪಾತ್ರರಿಗೆ ಸುವಸ್ತುವನ್ನು ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯವಾಗಿ ತೋರುವುದು. ಕಲ್ಪನೆಯಲ್ಲಿ ಕಲಿಯುವುದನ್ನು ಕಡಿಮೆ ಮಾಡಿ. ಈ ವಾರ ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆಯಾಗುತ್ತದೆ. ಇಲ್ಲದೆ ಸೃಷ್ಟಿಸಿಕೊಳ್ಳಲಾಗಿದೆ. ಭೂಮಿಯ ವ್ಯವಹಾರದಲ್ಲಿ ನೀವು ಜಯಶಾಲಿಯಾಗುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ.
ಮಿಥುನ ರಾಶಿ:
ಈ ವಾರ ಸ್ವಂತ ಮಕ್ಕಳಿಂದ ನಿಮಗೆ ಆಗಬೇಕಾದ ಸಹಾಯ ಆಗಬಹುದು. ನೌಕರರ ವಿಚಾರದಲ್ಲಿ ಗಟ್ಟಿಯಾದ ನಿಲುವು ಅಗತ್ಯ. ಸಂಗಾತಿಯನ್ನು ವಿಧವಾಗಿ ಪರೀಕ್ಷಿಸಿ. ನೆರೆಯವರ ಜೊತೆ ಕಲಹ ಬೇಡ. ನಂಬಿಕೆಯನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುತ್ತಾರೆ. ನಿಮ್ಮ ಆಸೆಗಳನ್ನು ಯಾವುದೇ ಪೂರ್ವಾಪರ ವಿಚಾರವಿಲ್ಲದೇ ಪೂರೈಸಿಕೊಳ್ಳಿ. ಕುಟುಂಬದ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೆ ಅಕ್ಕರೆ ಹೇಳರಚುವುದು.
ಕರ್ಕಾಟಕ ರಾಶಿ:
ಜನವರಿಯ ಈ ವಾರ ನಿಮ್ಮ ಸಮಯವನ್ನಷ್ಟೇ ಅಲ್ಲದೆ ಇತರರ ಸಮಯವನ್ನು ಹಾಳುಮಾಡುವಿರಿ. ನಿಶ್ಚಿತ ಕೆಲಸದಲ್ಲಿ ಆಲಸ್ಯದಿಂದ ಇದ್ದು ಎಲ್ಲರಿಂದ ಹೇಳಿಸಿಕೊಳ್ಳಿರಿ. ಯಾರಿಗಾದರೂ ನಿಜವನ್ನು ತಿಳಿಸಬೇಕಾದರೆ ಮನಸ್ಸಿಗೆ ನೋವಾಗದಂತೆ ತಿಳಿಸಿ. ಉಪಕಾರದ ವಿಚಾರದಲ್ಲಿ ನೀವು ಹಿಂದಿರುವಿರಿ. ವೃತ್ತಿಯು ಬೇಸರ ತರಬಹುದು. ಸರ್ಕಾರಿ ನೌಕರರು ಅಧಿಕ ಕಾರ್ಯಗಳು ಕಡೆ ಗಮನಹರಿಸಬೇಕಾದೀತು. ಎಂದೋ ಆದ ಘಟನೆಯನ್ನು ಮತ್ತೆ ನೆನಪಿಸಿಕೊಂಡು ಮನಸ್ತಾಪವನ್ನು ತಂದುಕೊಳ್ಳುವಿರಿ. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ ಮಾಡಿ. ಯಾರ ಮಾತನ್ನೂ ನಂಬದ ಸ್ಥಿತಿಯನ್ನು ನೀವೇ ತಂದುಕೊಳ್ಳಿರಿ.
ಸಿಂಹ ರಾಶಿ:
ವಾರದ ಮಧ್ಯದಲ್ಲಿ ಆಕಸ್ಮಿಕ ಧನಲಾಭಕ್ಕೆ ಹಿಂದೇಟು ಹಾಕುವಿರಿ. ಮೋಜಿನಲ್ಲಿ ನಿಮ್ಮ ಸಮಯ ಕಳೆಯುವುದು. ನಿಮ್ಮ ಒತ್ತಡವನ್ನು ಸಹೋದ್ಯೋಗಿಗಳ ಮೇಲೆ ಹಾಕಿ ಸ್ವಲ್ಪ ಹಗುರಾಗಬಹುದು. ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ವಿದೇಶದ ಸಂಪರ್ಕವು ವ್ಯಾಪಾರಕ್ಕಾಗಿ ಇರಲಿದೆ. ಈ ವಾರ ಅಪಮಾನವನ್ನು ಸಹಿಸಲಾಗದೇ ಎದುರಿಸಲೂ ಆಗದೇ ಹತಾಶೆಗೊಳ್ಳುವಿರಿ. ಮಾಹಿತಿಯನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಲು. ನಿಮ್ಮ ಮಾತಿಗೆ ಕೆಲವರ ಬೆಂಬಲವು ನಿಮಗೆ ಖುಷಿ ಕೊಡುವುದು. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು.
ಕನ್ಯಾ ರಾಶಿ:
ಈ ವಾರ ಸುಳ್ಳನ್ನು ಸತ್ಯವೆಂದು ನಂಬಿಸುವ ಸಾಹಸಕ್ಕೆ ಹೋಗುವುದು ಬೇಡ, ಅದು ಆಗದು. ಆಸ್ತಿಯ ದಾಖಲೆಗಳು ಕಾಣದೇ ಆತಂಕ ಉಂಟಾಗಬಹುದು. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾಗುವುದು. ಸತ್ಯವನ್ನು ಮರೆಮಾಚಲು ತಂತ್ರವನ್ನು ಹೆಣೆಯಬಹುದು. ಮಕ್ಕಳು ನಿಮ್ಮ ಪ್ರತಿ ಬದಲಾವಣೆಯನ್ನೂ ಗಮನಿಸುತ್ತಾರೆ. ಈ ವಾರ ನಿಮ್ಮ ಜಾಣ್ಮೆಯಿಂದ ಆದಾಯವನ್ನು ಅಧಿಕ ಮಾಡಿಕೊಳ್ಳುವಿರಿ. ವಿದೇಶೀಯ ವಸ್ತುಗಳ ಬಳಕೆಯನ್ನು ಮಾಡುವುದು ಕಾರಣಾಂತರಗಳಿಂದ ಇಷ್ಟವಾಗದು. ನಿಮ್ಮ ಸಹಾಯಕತೆಯನ್ನು ಮನೆಯವರ ಮುಂದೆ ಹೇಳಿಕೊಳ್ಳಿ. ಆಕಸ್ಮಿಕವಾಗಿ ಬಂಧುಗಳ ಜೊತೆ ನಿಮ್ಮ ಬಾಂಧವ್ಯವು ಗಟ್ಟಿಯಾಗಿ ಇರುವುದು.
ತುಲಾ ರಾಶಿ:
ಏಳನೇ ರಾಶಿಯವರಿಗೆ ಜನವರಿಯ ಮೊದಲ ವಾರ ದೇವರ ಇಚ್ಛೆಯಂತೆ ಎಲ್ಲವೂ ಆಗುತ್ತದೆ ಎಂಬ ದಾರ್ಢ್ಯತೆಯು ನಿಮ್ಮ ಎಲ್ಲ ಕೆಲಸಕ್ಕೂ ಬಲವನ್ನು ಕೊಡುವುದು. ಉನ್ನತ ಮಟ್ಟದ ಕಾರ್ಯಕ್ಕೆ ಪರಿಚಿತರ ಬೆಂಬಲವನ್ನು ಪಡೆಯಿರಿ. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುತ್ತೀರಿ. ಈ ವಾರ ಮನೋವಿಕಾರವನ್ನು ಕಡಿಮೆ ಮಾಡಿಕೊಳ್ಳಿ. ಕುಟುಂಬದಲ್ಲಿ ನಡೆಯುವ ಕಾರ್ಯಗಳಿಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಕೃಷಿ ಸೂಕ್ತ ಸ್ಥಳದಲ್ಲಿ ಮಾರಾಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳಿ. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಮುಂದುವರಿಯಿರಿ.
ವೃಶ್ಚಿಕ ರಾಶಿ:
ಈ ವಾರ ಉದ್ಯಮವನ್ನು ಯೋಗ್ಯ ರೀತಿಯಲ್ಲಿ ನಿಭಾಯಿಸಲಾಗದು. ಉದ್ಯೋಗಕ್ಕಾಗಿ ದೇವತೋಪಾಸನೆಯನ್ನು ಮಾಡುವುದು ಅನಿವಾರ್ಯವಾದೀತು. ಹೇಳಿಕೊಳ್ಳುವಷ್ಟು ಆದಾಯವಿಲ್ಲದಿದ್ದರೂ ಅಹಂಕಾರಕ್ಕೇನು ಕೊರತೆ ಇರದು. ನಿಮ್ಮ ಮಾತಿನಿಂದ ಶತ್ರುಗಳು ಹುಟ್ಟಿಕೊಳ್ಳಬಹುದು. ಮೇಲಿಂದ ಮೇಲೆ ಬರುತ್ತಿರುವ ಆರೋಗ್ಯದ ತೊಂದರೆಯು ನಿಮಗೆ ಅಸತಂಕವನ್ನು ಉಂಟುಮಾಡಬಹುದು. ಕಛೇರಿಯಲ್ಲಿ ಎಲ್ಲರ ಜೊತೆ ಒಂದಿಲ್ಲೊಂದು ವಿಚಾರಕ್ಕೆ ಕಿರಿಕ್ ಮಾಡಿಕೊಳ್ಳುವಿರಿ. ನಿಮ್ಮ ಕಾರ್ಯದಲ್ಲಿ ತಾಳ್ಮೆಯು ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಗೆಲ್ಲುವ ತಂತ್ರ ಬಳಸಿ. ಅಳತೆಯನ್ನು ಅರಿತು ವ್ಯವಹರಿಸುವುದು ಎಲ್ಲ ದೃಷ್ಟಿಯಿಂದ ಉತ್ತಮ.
ಧನು ರಾಶಿ:
ಮೊದಲನೇ ವಾರ ಭೂಮಿಗೆ ಸಂಬಂಧಿಸಿರುವ ವ್ಯವಹಾರವು ಪೂರ್ಣವಾಗಿ ಗೊತ್ತಾಗಲು ಸಮಯವನ್ನು ತೆಗೆದುಕೊಳ್ಳುವಿರಿ. ಸ್ನೇಹಿತರ ನಿರೀಕ್ಷೆಯಲ್ಲಿ ಹೆಚ್ಚಿನ ಸಮಯ ಕಳೆದುಹೋಗುವುದು. ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಾಗಿದೆ. ಈ ವಾರ ವೃತ್ತಿಯಲ್ಲಿ ನಿಮಗೆ ವಿರಾಮ ಸಿಗದೇ ನಿಮ್ಮ ಸ್ವಂತ ಕಾರ್ಯವನ್ನು ಕೈ ಬಿಡಬೇಕಾಗುವುದು. ಒಪ್ಪಿಕೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವುದು ಆಗದು. ಸಂಗಾತಿಯ ಬೆಂಬಲವು ನಿಮ್ಮ ಕಾರ್ಯಗಳಿಗೆ ಸಿಗಲಿದೆ. ಅಗತ್ಯವಿದ್ದಾಗ ಮಾತ್ರ ಸಾಲದ ಬಗ್ಗೆ ಯೋಚಿಸಿ. ಸರ್ಕಾರಿ ಉದ್ಯೋಗಿಗಳ ವರ್ಗಾವಣೆಯಿಂದ ಬೇಸರಪಡುವಿರಿ. ಗೃಹ ನಿರ್ಮಾಣದ ಕಾರ್ಯವನ್ನು ಮುಂದೂಡಲಾಗಿದೆ.
ಮಕರ ರಾಶಿ:
ಹತ್ತನೆಯ ರಾಶಿಯವರಿಗೆ ಈ ವಾರ ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಅನ್ಯರ ಆಗಮನವು, ಸಲಹೆಯನ್ನು ಕೊಡುವುದು ಇಷ್ಟವಾಗದು. ಅಚ್ಚುಕಟ್ಟಾದ ಕಾರ್ಯಕ್ಕೆ ಪ್ರಸಿದ್ಧಿ ಸಿಗುವುದು. ಸಂಗಾತಿಯ ಸಂಪತ್ತಿನಿಂದ ನಿಮಗೆ ಬೇಕಾದುದನ್ನು ಪಡೆಯುವಿರಿ. ಯಾರ ಮಾತನ್ನು ಒಪ್ಪಿಕೊಳ್ಳದೇ ನಿಮ್ಮದೇ ಆದ ದಾರಿಯಲ್ಲಿ ನಡೆಯುವಿರಿ. ಕೆಲಸದ ಕೆಲಸದಲ್ಲಿ ನಿಮ್ಮ ಮಧ್ಯೆ ಅನಗತ್ಯ ಪ್ರವೇಶದಿಂದ ಕೋಪಗೊಳ್ಳುವಿರಿ. ಈ ವಾರ ಅಲ್ಪ ಆದಾಯದಲ್ಲಿ ತೃಪ್ತಿ ಹೊಂದಬೇಕಾದೀತು. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು. ಶಿಕ್ಷಕರ ವೇತನವನ್ನು ಹೆಚ್ಚಿಸಿಕೊಳ್ಳುವರು. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಉತ್ತಮ. ವಿದ್ಯಾರ್ಥಿಗಳ ಉತ್ಸಾಹವನ್ನು ಕುಗ್ಗಿಸುವುದು ಬೇಡ.
ಕುಂಭ ರಾಶಿ:
ಈ ರಾಶಿಯವರಿಗೆ ಮೊದಲ ವಾರ ಮಕ್ಕಳಿಗೆ ಬೇಕಾದ ವ್ಯವಸ್ಥೆ ಮಾಡುವ ಹೊರೆಯನ್ನು ಹೊತ್ತು ತಿರುಗಾಟಮಾಡುವಿರಿ. ಬಾಯಿಯ ಚಪಲಕ್ಕೆ ವಿರುದ್ಧ ಆಹಾರ ತಿಂದು ಹೊಟ್ಟೆಯನ್ನು ಹಾಳುಮಾಡಿಕೊಳ್ಳಬೇಕಾಗುವುದು. ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ಈ ವಾರ ಅನೇಕ ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯವಾಗಲಿಲ್ಲ. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು. ಮೋಜಿನ ಕಾರಣಕ್ಕೆ ಸುತ್ತಾಟ ಮಾಡುವಿರಿ. ಬಂಧುಗಳ ಜೊತೆ ಅನಗತ್ಯ ವಾಗ್ವಾದ ಬೇಡ.
ಮೀನ ರಾಶಿ:
ಈ ವಾರ ನಿಮ್ಮ ವ್ಯಾಪಾರವು ಬಹಳ ಶಿಸ್ತುಬದ್ಧವಾಗಿರಲಿದೆ, ಹಣದ ಹರಿವೂ ನಿಮಗೆ ಎಣಿಸಿದಂತೆ ಇರಲಿದೆ. ಹಳೆಯ ದಾಂಪತ್ಯವಾದರೂ ಸಂತೋಷಕ್ಕೆ ಕೊರತೆ ಇಲ್ಲದಂತೆ ಇರುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಕೊಡುಗೆಯನ್ನು ನೀಡುವಿರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸಿ. ಕೆಲವು ಸಂಗತಿಗಳನ್ನು ನಿರೀಕ್ಷಿಸಬಹುದು. ನಿಮ್ಮನ್ನು ಕೆಲವರು ಅನಾದರ ಮಾಡಿದಂತೆ ಕಾಣಿಸಿತು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ನೀವು ವರ್ಗಾವಣೆಗೆ ಒತ್ತಡವನ್ನು ತರುತ್ತೀರಿ. ಅಸಮಯದ ಆಹಾರವು ನಿಮಗೆ ಅಭ್ಯಾಸ ಸೂಕ್ತವಾಗಿದೆ. ಈ ವಾರ ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಮಾಡಬೇಕಾದೀತು.
-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)