Headlines

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ


ಹುಬ್ಬಳ್ಳಿ, (ಜನವರಿ 04) : ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರನ್ನು ದಾರಿ ತಪ್ಪಿಸುತ್ತಿದೆ. ನರೇಗಾ ಯೋಜನೆ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದೆ, ಅದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಖಿಕತೆಯನ್ನು ತೋರಿಸಿದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕೇಂದ್ರ ಸಚಿವರು ಪ್ರಲ್ಹಾದ ಜೋಶಿ (ಪ್ರಹ್ಲಾದ ಜೋಶಿ) ವಾಗ್ದಾಳಿ ಪ್ರಮಾಣ.

ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತರಿಯಿತ್ತು . ಈಗ 125 ದಿನಗಳಿಗೆ ಮಾಡಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗಾವಕಾಶದ ಭರವಸೆಯೊಂದಿಗೆ ಆದಾಯದ ಭದ್ರತೆಯು ಹೆಚ್ಚಾಗಲಿದೆ (ಪ್ರತಿದಿನ ಕೂಲಿ 370 ರೂ ಆಗಿದೆ). ಮುಂದೆಯೂ ಆಯಾ ಗ್ರಾಮ ಪಂಚಾಯತಗಳೇ ಯೋಜನೆ ಕೇಂದ್ರವಾಗಿರಲಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತಿದೆ ಎಂಬ ಭೀತಿಯನ್ನು ಕಾಂಗ್ರೆಸ್ ಮೂಡಿಸುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು

ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲ ಮಾಡಿಕೊಡಲು 60 ದಿನಗಳ ಬಿಡುವು ಕೊಡುಗೆ. ಇಂತಹ ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೃಷಿ ವಿರೋಧಿ ಅನುಸರಿಸುತ್ತಿದೆ. ಹಿಂದೆ ಕೂಲಿಕಾರರ ಹೆಸರು ಹೇಳಿ ನರೇಗಾ ಯೋಜನೆ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರಗಳು ಅನಗತ್ಯ ವೆಚ್ಚವನ್ನು ಕಡಿಮೆ ಮಾಡಲು ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ನಿಗದಿಪಡಿಸಲಾಗಿದೆ ಎಂದು ಹೇಳಿದರು

ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಕಾಲಾನುಕಾಲಕ್ಕೆ ಯೋಜನೆಗಳಲ್ಲಿ ಪಾರದರ್ಶಕತೆ ಮತ್ತು ಪರಿಣಾಮ ತರುವ ಕೆಲವು ಯೋಜನೆಗಳಲ್ಲಿ ಅಗತ್ಯ ಪರಿಷ್ಕರಣೆ ತರುವುದು ಅವಶ್ಯವಾಗಿದೆ. ಈ ಬದಲಾವಣೆಯ ಮುಖ್ಯ ಉದ್ದೇಶ ಜನರ ಜೀವನೋಪಾಯವನ್ನು ಸುಧಾರಿಸುವ ಕಲ್ಯಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಇವೆರಡನ್ನು ಒಟ್ಟಿಗೆ ತೆಗೆದುಕೊಳ್ಳಬೇಕಾಗಿದೆ. ಏಕೆಂದರೆ ಇವೆರೆಡೂ ಒಂದಕ್ಕೊಂದು ಪೂರಕ ಮತ್ತು ಅನಿವಾರ್ಯ ಎಂದರು.

MGNAREGA ಯೋಜನೆಯು ಬೇಡಿಕೆ ಆಧಾರಿತ (ಡಿಮಾಂಡ್ ಡ್ರೈವನ್ ಸ್ಕೀಮ್) ಯೋಜನೆಯಾಗಿದೆ. ಆದರೆ ಇದು ಆಫ್ ದಿ ರೆಕಾರ್ಡ್ ಗುರಿ ಆಧಾರಿತ ಯೋಜನೆಯಾಗಿ ಪರಿವರ್ತಿತವಾಗಿತ್ತು. ಈ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಇದ್ದ ಅತಿ ದೊಡ್ಡ ಸಮಸ್ಯೆ ಎಂದರೆ ಸೂಕ್ತ ಸಮಯದಲ್ಲಿ ಕೂಲಿ ಮತ್ತು ಸಾಮಗ್ರಿ ವೆಚ್ಚದ ಪಾವತಿ (ವೇತನ ಮತ್ತು ವಸ್ತು ಪಾವತಿ). ಹೊಸ ಪರಿಷ್ಕೃತ ಯೋಜನೆ ಕೇಂದ್ರೀಕೃತ ಪಾವತಿ ವ್ಯವಸ್ಥೆ ಈ ಮೊದಲು ಇದ್ದ ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬೀಳಲಿದೆ ಎಂದೂ ಸಚಿವ ಜೋಶಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 5:54 pm, ಭಾನುವಾರ, 4 ಜನವರಿ 26



Source link

Leave a Reply

Your email address will not be published. Required fields are marked *