ಚಿಕ್ಕಮಗಳೂರು: ರೋಗಿ ಸ್ಟ್ರೆಚರ್​ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ

ಚಿಕ್ಕಮಗಳೂರು: ರೋಗಿ ಸ್ಟ್ರೆಚರ್​ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ


ಚಿಕ್ಕಮಗಳೂರು, ಜನವರಿ 5: ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಭಾರೀ ನಿರ್ಲಕ್ಷ್ಯದ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ 60 ವರ್ಷದ ಮಂಜುನಾಥ್ ಎಂಬ ರೋಗಿಗೆ ತುರ್ತು ಚಿಕಿತ್ಸಾ ಘಟಕದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅವರು ಸೋಮವಾರ ಘಟನೆ ಮುಂಜಾನೆ ನಡೆಯಿತು. ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ ಅವರನ್ನು ಶನಿವಾರ ಸಂಜೆಯೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದರೂ ಬೆಳಗ್ಗೆಯವರೆಗೆ ಸೂಕ್ತ ಚಿಕಿತ್ಸೆ ನೀಡಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ರೋಗಿ ಉಸಿರಾಡಲು ಪರದಾಡುತ್ತಿದ್ದಾಗ, ಅಲ್ಲಿದ್ದ ವೈದ್ಯರು ಮೊಬೈಲ್ ನಲ್ಲಿ ಮಾತನಾಡುತ್ತಾ ಎಂಬ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ವಿಡಿಯೋ ವೈರಲ್ ಆದ ನಂತರ ಆಸ್ಪತ್ರೆಯ ಸಿಬ್ಬಂದಿ ಎಚ್ಚೆತ್ತುಕೊಂಡು ಮಂಜುನಾಥ್‌ಗೆ ಚಿಕಿತ್ಸೆ ನೀಡಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಆದರೆ ಆಗಲೇ ತಡವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಆಸ್ಪತ್ರೆಯಲ್ಲಿದ್ದಾರೆ. ಈ ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯ ಘಟನೆಯನ್ನು ಬಹಿರಂಗಪಡಿಸಿದ್ದು, ಜಿಲ್ಲಾಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತು ಪರಿಸ್ಥಿತಿಯಲ್ಲೂ ರೋಗಿಗೆ ಚಿಕಿತ್ಸೆ ನೀಡದಿರುವುದು ಅಮಾನವೀಯ ನಡೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *