ಚೆನ್ನೈ: ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಕೆಲವೊಂದು ಅಚ್ಚರಿ ತೀರ್ಮಾನ ತೆಗೆದುಕೊಂಡಿದೆ. ಈ ಪೈಕಿ ಋತುರಾಜ್ ಗಾಯಕ್ವಾಡ್ ಕೈಬಿಟ್ಟಿದ್ದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ ಹೊರಹಾಕಿದ್ದಾರೆ.

ಇದೇ ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಗಿಲ್ ನಾಯಕರಾಗಿ ಕಮ್ಬ್ಯಾಕ್ ಮಾಡಿದ್ದಾರೆ. ಇದರ ಜತೆಗೆ ರಿಷಭ್ ಪಂತ್, ಮೊಹಮ್ಮದ್ ಸಿರಾಜ್ ಕೂಡಾ ತಂಡ ಕೂಡಿಕೊಂಡಿದ್ದಾರೆ.

ಇನ್ನು ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಪುಣೆ ಮೂಲದ ಋತುರಾಜ್ ಗಾಯಕ್ವಾಡ್, ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ಗೆ ನಿರಾಸೆ ಎದುರಾಗಿದೆ.

ಇದೀಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಕಿವೀಸ್ ಸರಣಿಗೆ ಆಯ್ಕೆ ಮಾಡಿದ ತಂಡದ ಕುರಿತಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುಬ್ರಮಣ್ಯಂ ಬದ್ರಿನಾಥ್ ಗಂಭೀರವಾದ ಸವಾಲು ಹಾಕಿದ್ದಾರೆ.

ಫಾರ್ಮ್ನಲ್ಲಿರುವ ಋತುರಾಜ್ ಗಾಯಕ್ವಾಡ್ ಅವರನ್ನು ಕೈಬಿಟ್ಟು ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದೇಕೆ ಎಂದು ಎಸ್ ಬದ್ರಿನಾಥ್ ಪ್ರಶ್ನಿಸಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಂಡದಲ್ಲಿ ಈಗಾಗಲೇ ತಜ್ಞ ಆಲ್ರೌಂಡರ್ ಇರುವಾಗ, ನಿತೀಶ್ ಕುಮಾರ್ ರೆಡ್ಡಿಯನ್ನು ಆಯ್ಕೆ ಸಮಿತಿ ಯಾವ ಕಾರಣಕ್ಕೆ ಆಯ್ಕೆ ಮಾಡಿದೆಯೋ ಗೊತ್ತಾಗುತ್ತಿಲ್ಲ.

ಫಾರ್ಮ್ನಲ್ಲಿರುವ ಗಾಯಕ್ವಾಡ್ ಅವರನ್ನು ಬಿಟ್ಟು ನಿತೀಶ್ ಕುಮಾರ್ ರೆಡ್ಡಿ ಆಯ್ಕೆ ಮಾಡಿದ್ದೇಕೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದು ಬದ್ರಿನಾಥ್ ಹೇಳಿದ್ದಾರೆ.

ಸದ್ಯ ಈಗಾಗಲೇ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಹೀಗೆ ಇಬ್ಬರು ತಜ್ಞ ಆಲ್ರೌಂಡರ್ಗಳಿದ್ದಾರೆ. ಇದರ ಹೊರತಾಗಿ ಮತ್ತೋರ್ವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಆತ ಏಕದಿನ ತಂಡದಲ್ಲಿ ಯಾಕಿದ್ದಾನೆ ಎನ್ನುವುದು ನನಗಂತೂ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಲ್ರೌಂಡರ್ ಎಂದು ಆಯ್ಕೆ ಮಾಡಲಾಗಿದೆ ಎನ್ನುತ್ತಾರೆ. ಆದರೆ ಆತನ ಎಸೆತಗಳನ್ನು ಬ್ಯಾಟರ್ಗಳು ಮೂಲೆ ಮೂಲೆಗೆ ಬೌಂಡರಿ ಚಚ್ಚುತ್ತಿದ್ದಾರೆ. ಹೀಗಿರುವಾಗ ಋತುರಾಜ್ ಗಾಯಕ್ವಾಡ್ ಕೈಬಿಟ್ಟು ನಿತೀಶ್ ಕುಮಾರ್ ರೆಡ್ಡಿ ಆಯ್ಕೆ ಮಾಡಿದ್ದು ನಿಜಕ್ಕೂ ಅನ್ಯಾಯವೇ ಸರಿ ಎಂದು ಬದ್ರಿನಾಥ್ ಹೇಳಿದ್ದಾರೆ.

ಋತುರಾಜ್ ಗಾಯಕ್ವಾಡ್ ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಕೇವಲ 83 ಎಸೆತಗಳಲ್ಲಿ 105 ರನ್ ಸಿಡಿಸಿದ್ದರು. ದೇಶಿ ಕ್ರಿಕೆಟ್ನಲ್ಲೂ ಗಾಯಕ್ವಾಡ್ ಮಿಂಚುತ್ತಿದ್ದಾರೆ. ಹೀಗಿದ್ದೂ ಕಿವೀಸ್ ಎದುರಿನ ಏಕದಿನ ಸರಣಿಯಲ್ಲಿ ಋತುರಾಜ್ಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜನವರಿ 11ರಂದು ಬರೋಡದಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಜನವರಿ 14ರಂದು ರಾಜ್ಕೋಟ್ನಲ್ಲಿ ಹಾಗೂ ಜನವರಿ 18ರಂದು ಇಂದೋರ್ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ.

Source link
ಈತ ಭಾರತ ಏಕದಿನ ತಂಡದಲ್ಲಿ ಯಾಕಿದ್ದಾನೆ? ಗಾಯಕ್ವಾಡ್ ಬದಲಿಗೆ ಈ ಆಟಗಾರನಿಗೆ ಸ್ಥಾನ ನೀಡಿದ್ದಕ್ಕೆ ಕಿಡಿಕಾರಿದ ಮಾಜಿ ಕ್ರಿಕೆಟರ್!