ಚಿಕ್ಕಮಗಳೂರು, ಜನವರಿ 05: ಕುಡಿತದ ಚಟ ಕಾರ್ಯಕ್ರಮ ವ್ಯಕ್ತಿಯನ್ನು ಯಾವ ಹಂತಕ್ಕೆ ತೆಗೆದುಕೊಂಡು ಹೋಗಬಲ್ಲದು ಎಂದು ಈ ಸಾಕ್ಷಿಯಾಗಿದೆ. ಎಣ್ಣೆ ವಿಚಾರವಾಗಿ ಶುರುವಾದ ಸಣ್ಣ ಗಲಾಟೆ ಕೊನೆಗೆ ತಂದೆಯಿಂದಲೇ (ತಂದೆ) ಮಗನ ಕೊಲೆ (ಕೊಲೆ) ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ರವಿವಾರ ನಡೆದಿದೆ. ಮಗ ಪ್ರದೀಪ್(40) ನನ್ನ ತಂದೆ ರಮೇಶ್ ಆಚಾರ್(65) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಅಪ್ಪ ಮತ್ತು ಮಗ ಇಬ್ಬರೂ ಕುಡಿತದ ಚಟಕ್ಕೆ ದಾಸರಾಗಿದ್ದರು. ಅದಷ್ಟೇ ಅಲ್ಲದೆ ನಾ ಮೇಲು, ತಾ ಮೇಲು ಎಂದು ಪೈಪೋಟಿಗೆ ಇಳಿಯಲು. ಹೀಗೆ ಸ್ನೇಹಿತರಂತೆ ಒಟ್ಟೊಟ್ಟಿಗೆ ಕೂತು ನನಗೆ ಜಾಸ್ತಿ, ನನಗೆ ಕಮ್ಮಿ ಅಂತ ಹಠಕ್ಕೆ ಬಿದ್ದು ಕುಡಿಯುತ್ತಿದ್ದರು. ಅಪ್ಪ-ಮಗನ ನಡುವಿನ ಎಣ್ಣೆ ವಿಚಾರವಾಗಿ ಆರಂಭವಾದ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯ.
ಇದನ್ನೂ ಓದಿ: ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ
ತಂದೆ ರಮೇಶ್, ಎದೆಯೆತ್ತರಕ್ಕೆ ಬೆಳೆದಿದ್ದ ಮಗನಿಗೆ ಬುದ್ಧಿ ಹೇಳಿ ಸರಿ ದಾರಿಗೆ ತರಬೇಕಿತ್ತು. ಆದರೆ ತಾನೇ ಮಗನನ್ನ ಜೊತೆಗೆ ಕೂರಿಸಿಕೊಂಡು ಎಣ್ಣೆ ಕುಡಿಯುತ್ತಿದ್ದ, ಜೊತೆಗೆ ಈಗ ಮಗನ ಹೆಣವನ್ನೇ ಉರುಳಿಸಿದ್ದಾರೆ. ಚಿಕ್ಕಮಗಳೂರು ವಯಸ್ಸಿನ ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಆನೆಗುಂಡಿ ಗ್ರಾಮದ ನಿವಾಸಿ ರಮೇಶ್, ಚಿಕ್ಕ ವಯಸ್ಸಿನಿಂದಲೂ ಕೂಡ ಕುಡಿತದ ಚಟಕ್ಕೆ ದಾಸನಾಗಿದ್ದ. ತಾನೊಬ್ಬನೇ ಕುಡಿದಿದ್ದರೆ ಏನೂ ಆಗಿರಲಿಲ್ಲ, ತಾನು ಕುಡಿಯೋದರ ಜೊತೆಗೆ ತನ್ನ ಮಗನನ್ನು ಒಟ್ಟಿಗೆ ಕೂರಿಸಿಕೊಂಡು ಕುಡಿಯೋಕೆ ಶುರುಮಾಡಿದ್ದರು.
ಅಪ್ಪ-ಮಗ ಇಬ್ಬರೂ ಎಣ್ಣೆ ಕುಡಿದ ಮೇಲೆ ನಿತ್ಯ ಜಗಳ ಮಾಡಿಕೊಳ್ಳುತ್ತಿದ್ದರು. ಕುಡುಕ ತಂದೆ ಮತ್ತು ಮಗನ ಕಾಟಕ್ಕೆ ತಾಯಿ ಮಂಜುಳಾ ಮನೆ ಬಿಟ್ಟು ಹೋಗಿದ್ದರು. ಹೆಣ್ಣು ದಿಕ್ಕಿಲ್ಲದ ಮನೆಯಲ್ಲಿ ಅಪ್ಪ-ಮಗ ಇಬ್ಬರದ್ದೇ ಕಾರುಬಾರು. ಹೇಳೋರು, ಕೇಳೋರು ಯಾರು ಇಲ್ಲದ್ದಕ್ಕೆ ನಿತ್ಯ ಬೆಳಗ್ಗೆಯಿಂದ ಸಂಜೆವರೆಗೂ ಕುಡಿಯೋದನ್ನೇ ಕಾಯಂ ವೃತ್ತಿ ಮಾಡಿಕೊಂಡಿದ್ದರು. ನನಗೆ ಎಣ್ಣೆ ಕಡಿಮೆ, ನಿನಗೆ ಜಾಸ್ತಿ ಅನ್ನೋ ವಿಚಾರಕ್ಕೆ ರವಿವಾರದಂದು ಗಲಾಟೆ ನಡೆದಿದೆ. ಈ ವೇಳೆ ರಮೇಶ್, ಮಗ ಪ್ರದೀಪನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಮನೆಯಲ್ಲಿ ಅಪ್ಪ-ಮಗ ಇಬ್ಬರೇ ವಾಸವಿದ್ದರು. ಕುಡಿದು ಕ್ಷುಲ್ಲಕ ಕಾರಣಕ್ಕೆ ಆಗಾಗ ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಇವರ ನಿರಂತರ ಜಗಳದ ಕಾಟ ತಡೆಯಲಾರದೆ ಪ್ರದೀಪ್ ತಾಯಿ ಈ ಮೊದಲೇ ಮನೆ ಬಿಟ್ಟು ಹೋಗಿದ್ದರು. ನಿನ್ನೆ ಅಡಕೆ ಮಾರಿ ಬಂದಿದ್ದು, ಸಿಕ್ಕ ಹಣದಲ್ಲಿ ರಾತ್ರಿ ಜೊಡೆತ್ತಿನಂತಿದ್ದ ಅಪ್ಪ-ಮಗ ಇಬ್ಬರೂ ಕಂಠಪೂರ್ತಿ ಕುಡಿದಿದ್ದಾರೆ. ಕುಡಿದ ಮತ್ತಿನಲ್ಲಿ ಅಪ್ಪ-ಮಗನ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಆಚಾರ್ ತನ್ನ ಮಗ ಪ್ರದೀಪ್‌ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ತಂದೆ
ಇಡೀ ರಾತ್ರಿ ಪ್ರದೀಪ್ ರಕ್ತದ ಮಡುವಿನಲ್ಲಿ ಬಿದ್ದಿರುವ ತೀವ್ರ ರಕ್ತಸ್ರಾವವಾಗಿ ಕಾಣಿಸಿಕೊಂಡಿದ್ದಾರೆ. ಬೆಳಿಗ್ಗೆ ರಮೇಶ್, ಮಗನ ಮೃತದೇಹವನ್ನು ಮನೆಯಿಂದ ಹೊರಕ್ಕೆ ಎಳೆದು ತಂದಿದ್ದಾನೆ. ಇದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಬಾಳೂರು ಠಾಣೆಯ ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದರು. ಸ್ಥಳ ಪರಿಶೀಲನೆ ಮಾಡಿದ ಪೊಲೀಸರು ತಂದೆ ರಮೇಶ್ ಅವರನ್ನು ಬಂಧಿಸಿದ್ದಾರೆ. ವೇಳೆ ಎಣ್ಣೆ ವಿಚಾರಕ್ಕೆ ಮಗನ ಕೊಲೆ ಮಾಡ ರಮೇಶ್ ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದಿದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ
‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲಾ’ ಎಂಬ ಮಾತಿನಂತೆ ಮಗನನ್ನು ಚೆನ್ನಾಗಿ ಬೆಳೆಸಿ ಬುದ್ಧಿವಂತನನ್ನಾಗಿ ಮಾಡಬೇಕಿದ್ದ ಅಪ್ಪನೇ ತನ್ನ ಜೊತೆಗೆ ಕೂರಿಸಿಕೊಂಡು ಕುಡಿಯೋದನ್ನ ಕಲಿಸಿ, ಇದೀಗ ತಾವೇ ತಮ್ಮ ಮಗನ ಕೊಲೆ ಮಾಡಿದ್ದು ಮಾತ್ರ ದುರಂತವೇ ಸರಿ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 7:20 pm, ಸೋಮ, 5 ಜನವರಿ 26