ದೇವರಾಜ ಅರಸು ದಾಖಲೆ ಬ್ರೇಕ್​​: ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ

ದೇವರಾಜ ಅರಸು ದಾಖಲೆ ಬ್ರೇಕ್​​: ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ


ಬೆಂಗಳೂರು, ಜನವರಿ 06: ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್ ಮಾಡಿದ್ದಾರೆ. 2013ರಲ್ಲಿ ಮೊದಲ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ ಸೇವೆ ಸಲ್ಲಿಸಿದ್ದರು. ಆ ಬಳಿಕ 2023ರ ಮೇ 20ರಿಂದ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಅವಧಿಯು 963 ದಿನ ಪೂರೈಸಿದೆ. ಆ ಮೂಲಕ ಸಿದ್ದರಾಮಯ್ಯ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಪಟ್ಟಿಗೆ ಸೇರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *