ಯಶ್ (ಯಶ್) ನಟಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗಲಿದೆ, ಸಿನಿಮಾದ ಪ್ರಚಾರಕ್ಕೆ ನಿಧಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಿನಿಮಾದಲ್ಲಿ ನಟಿಸಿರುವ ನಟಿಯರ ಪೋಸ್ಟರ್ ಒಂದಾಗಿ ಬಿಡುಗಡೆ ಆಗುತ್ತಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ, ಇದೀಗ ನಟಿ ರುಕ್ಮಿಣಿ ವಸಂತ್ ಅವರ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ.
ಇಂದು (ಜನವರಿ 06) ರುಕ್ಮಿಣಿ ವಸಂತ್ ಅವರ ಕ್ಯಾರೆಕ್ಟರ್ ಪೋಸ್ಟರ್ ಅನ್ನು ನಟ ಯಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ರುಕ್ಮಿಣಿ ಎಂದಿನಂತೆ ಅದ್ಭುತವಾಗಿ ಕಾಣುತ್ತಿದ್ದಾರೆ. ಪೋಸ್ಟರ್‌ನಲ್ಲಿ ತುಸು ಗ್ಲಾಮರಸ್ ಧಿರಿಸು ತೊಟ್ಟಿರುವ ರುಕ್ಮಿಣಿ ಚಿತ್ರದಲ್ಲಿ ನಟಿಸಿದ್ದಾರೆ. ಪೋಸ್ಟರ್ ನೋಡಿದರೆ ರುಕ್ಮಿಣಿ ಅವರದ್ದು ನೆಗೆಟಿವ್ ಶೇಡ್ ಇರಬಹುದಾದ ಪಾತ್ರವೇ ಎಂಬ ಅನುಮಾನವೂ ಮೂಡುತ್ತಿದೆ.
‘ಟಾಕ್ಸಿಕ್’ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಅವರ ಪಾತ್ರದ ಹೆಸರು ಮೆಲಿಸಾ ಎಂದಾಗಿದೆ. ಯಾವುದೋ ಪಾರ್ಟಿಯೊಂದರ ಮಧ್ಯೆ ಬಲು ಚೆನ್ನಾಗಿ ನಡೆದು ಬರುತ್ತಿದೆ ರುಕ್ಮಿಣಿ ವಸಂತ. ತಾರಾ ಸುತಾರಿಯಾ ಅವರ ಪಾತ್ರದ ಕೈಯಲ್ಲಿ ಬಂದೂಕು ಹಿಡಿದಿದ್ದಾರೆ ರುಕ್ಮಿಣಿ ವಸಂತ ಕೈಯಲ್ಲಿ ಪರ್ಸ್ ಒಂದನ್ನು ಹಿಡಿದಿದ್ದಾರೆ. ರುಕ್ಮಿಣಿ ಅವರ ಪಾತ್ರ ರಫ್ ಆಂಡ್ ಟಫ್ ಜೊತೆಗೆ ಇಬ್ಬರು ಬಲು ಗಂಭೀರವಾದ ಪಾತ್ರ ಎಂದು ಪೋಸ್ಟರ್ ನಿಂದ ಹೊರತೆಗೆದರು.
ಇದನ್ನೂ ಓದಿ:ಯಶ್ ಬಾಲ್ಯದಲ್ಲಿ ಹೇಗೆ ಕಾಣ್ತಿದ್ರು ನೋಡಿ; ಇಲ್ಲಿದೆ ಕ್ಯೂಟ್ ಫೋಟೋ
‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್ ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾಕ್ಕೆ ಕೆವಿಎನ್ ಬಂಡವಾಳ ಹೂಡಿದೆ. ಯಶ್ ಅವರು ತಮ್ಮ ಮಾನ್ ಸ್ಟರ್ ಮೈಂಡ್ ನಿರ್ಮಾಣ ಸಂಸ್ಥೆಯ ಮೂಲಕ ಸಹ ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಕೆಲ ವಿದೇಶಿ ತಂತ್ರಜ್ಞರು ಸಹ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ