Headlines

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!


ಚಿಕ್ಕಮಗಳೂರು, ಜನವರಿ 07: ತಂದೆ- ತಾಯಿ ಎಷ್ಟು ಕಷ್ಟವಾದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೀರೂರಿನಲ್ಲಿ ನಡೆದಿದೆ.

ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ

ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ. ತಾಯಿಯನ್ನು ಕಳೆದುಕೊಂಡು ಮನೆಯಲ್ಲಿದ್ದ ಅಪ್ರಾಪ್ತೆ, ಪಿಯುಸಿ ತನಕ ವಿದ್ಯಾಭ್ಯಾಸ ಮುಗಿಸಿದ ನಂತರ ತಂದೆ ಮನೆಗೆ ಮರಳಿದ್ದಳು. ಈ ವೇಳೆ ಡಿಸೆಂಬರ್‌ನಲ್ಲಿ ತಂದೆಯೊಂದಿಗೆ ಅಜ್ಜಿಯ ಮನೆಗೆ ಹೋಗಿ 2 ದಿನ ಉಳಿದು ಬಂದಿದ್ದಳು. ಮತ್ತೊಮ್ಮೆ ಅಜ್ಜಿಯಿಂದ ಬುಲಾವು ಬಂದಿದೆಯೆಂದು ಆಕೆ ಮನೆಗೆ ಹೋದ ಹುಡುಗಿಗೆ ಕಂಟಕ ಕಾದಿತ್ತು. ಅದೇ ಸಂದರ್ಭದಲ್ಲಿ ಅಜ್ಜಿಯ ಮನೆಗೆ ಆಗಮಿಸಿದ್ದ ಭರತ್ ಶೆಟ್ಟಿ ಎಂಬಾತ ತಂದೆ- ಮಗಳೊಡನೆ ಸಲುಗೆ ಬೆಳೆಸಿದ್ದ. ಆತನ ಮನೆಗೆ ಬಂದು ತಂಗುವಂತೆಯೂ ತಿಳಿಸಿದ್ದ.

ಎರಡು ದಿನಗಳ ಕಾಲ ನಾಲ್ವರಿಂದ ಅತ್ಯಾಚಾರ

ಇದಕ್ಕೊಪ್ಪಿದ್ದ ತಂದೆ ಮಗಳಿಬ್ಬರೂ ಭರತ್‌ನೊಂದಿಗೆ ಮಂಗಳೂರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ತಾನು ಮುಟ್ಟಾಗ ತಂದೆಗೆ ತಿಳಿಸಿದಳು. ಆದಾಗಿಯೂದಿನ ಅಪ್ರಾಪ್ತ ಬಳಿ ಬಂದ ಭರತ್, 4-5 ಜನ ಬರುತ್ತಾರೆ, ಅವರು ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾಳೆ. ಅವನ ಮಾತಿನಂತೆ 20 ರಿಂದ ಹಿಡಿದು 45 ವರ್ಷ ವಯೋಮಿತಿಯ ನಾಲ್ವರು ಒಬ್ಬರಾದ ಮೇಲೊಬ್ಬರಂತೆ ಆಕೆಯನ್ನು ಒಬ್ಬ ವ್ಯಕ್ತಿಯಾಗಿ ಶೋಷಿಸಿದ್ದರು. ಇದಾದ ಮರುವೂ ಇದೇ ಕೆಲಸಕ್ಕೆ ಒತ್ತಾಯಿಸಿದಾಗ ಹುಡುಗಿ ನಿರಾಕರಿಸಿದರೂ ಮತ್ತೊಮ್ಮೆ ಆಕೆಯ ಮೇಲೆ ಅದೇ ರೀತಿಯ ದೌರ್ಜನ್ಯ ನಡೆದಿತ್ತು. ಈ ವೇಳೆ ನಾನು ಅಪ್ರಾಪ್ತೆ, ನನ್ನನ್ನು ಬಿಡಿ ಎಂದು ಎಷ್ಟು ಅಂಗಲಾಚಿದರೂ ಕೇಳದ ಕಾಮುಕರು, ನಾವು ಭರತ್ ಶೆಟ್ಟಿಗೆ ಹಣ ನೀಡಿದ್ದೇವೆಂದು ಹೇಳಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು.

ಇದನ್ನೂ ಓದಿ ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಹುಲಿ ಕಳೇಬರ ಪತ್ತೆ

ಅಪ್ರಾಪ್ತ ಬಾಲಕಿ ನೀಡಿದ ದೂರಿನ ದಾಖಲೆ ಎಫ್‌ಐಆರ್ ದಾಖಲಾಗಿದ್ದು, ಬಾಲಕಿಯ ತಂದೆ, ಅಜ್ಜಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಂಸ ದಂಧೆಯ ಕಿಂಗ್‌ಪಿನ್ ಎನ್ನಲಾದ ಭರತ್ ಶೆಟ್ಟಿ ಸೇರಿದಂತೆ ಒಟ್ಟು 12 ಮಂದಿಯನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿಯ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ವೇಶ್ಯಾವಾಟಿಕೆ ಸಂಬಂಧ 8ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 10:25 am, ಬುಧವಾರ, 7 ಜನವರಿ 26



Source link

Leave a Reply

Your email address will not be published. Required fields are marked *