ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳನ್ನು ಪುಣೆಗೆ ಶಿಫ್ಟ್ ಮಾಡಲು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಬಿಸಿಸಿಐ ಮೇಲೆ ಒತ್ತಡ ಹೇರುತ್ತಿದೆ.

ಕಳೆದ ವರ್ಷದ ಆರ್ಸಿಬಿ ಚಾಂಪಿಯನ್ಸ್ ಸಂಭ್ರಮಾಚರಣೆ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಸ್ಪರ್ಧಾತ್ಮಕ ಪಂದ್ಯಗಳು ನಡೆದಿಲ್ಲ.

ಇನ್ನು ಹೊಸದಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ನೇತೃತ್ವದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶತಾಯಗತಾಯ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ಹರಸಾಹಸ ಮಾಡುತ್ತಿದೆ.

ಹೀಗಿರುವಾಗಲೇ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ನಡೆಯಬೇಕಿರುವ ಐಪಿಎಲ್ ಪಂದ್ಯಗಳನ್ನು ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಒತ್ತಡ ಹೇರಿದೆ.

ಈ ಕುರಿತಂತೆ ತಮ್ಮ ಅಧಿಕೃತ ‘ಎಕ್ಸ್ ಖಾತೆ’ಯಲ್ಲಿ ಪೋಸ್ಟ್ ಮಾಡಿದ್ದು, ಈಗಾಗಲೇ ಆರ್ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಈಗಾಗಲೇ ಪುಣೆ ಕ್ರಿಕೆಟ್ ಸ್ಟೇಡಿಯಂಗೆ ಭೇಟಿ ನೀಡಿದ್ದು, ಈ ಎರಡು ತಂಡಗಳ ಪೈಕಿ ಒಂದು ತಂಡಕ್ಕೆ ಆತಿಥ್ಯ ವಹಿಸಲು ಪುಣೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದೆ.

ಈಗಾಗಲೇ ಬಿಸಿಸಿಐ, ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಗೆ ಮೊದಲಿನಿಂದಲೂ ಸಪೋರ್ಟ್ ಮಾಡುತ್ತಲೇ ಬಂದಿದ್ದು, ಐಪಿಎಲ್ ಆಯೋಜನೆಗೂ ಬಿಸಿಸಿಐ ಅನುಮತಿ ನೀಡುವ ವಿಶ್ವಾಸವಿದೆ. ಸ್ಟಾರ್ ಪ್ಲೇಯರ್ಗಳ ಆತಿಥ್ಯಕ್ಕೆ ಪುಣೆ ಸಜ್ಜಾಗಿದೆ ಎಂದು ಬರೆದುಕೊಂಡಿದೆ.

ಒಂದು ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯದ ಆಯೋಜನೆ ಸಾಧ್ಯವಾಗದಿದ್ರೆ, ಪುಣೆಯನ್ನು ಆರ್ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

2026ನೇ ಸಾಲಿನ ಐಪಿಎಲ್ ಟೂರ್ನಿಗೆ ಮಾರ್ಚ್ 26ರಂದು ಚಾಲನೆ ಸಿಗಲಿದ್ದು, ಫೈನಲ್ ಪಂದ್ಯ ಮೇ 31ಕ್ಕೆ ನಿಗದಿಯಾಗಿದೆ. ಆರ್ಸಿಬಿ ತಂಡವು ಮತ್ತೊಮ್ಮೆ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ.

Source link
ಬೆಂಗಳೂರಿನಿಂದ ಆರ್ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!