ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ
ಬೆಂಗಳೂರು, ಜನವರಿ 07: ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭಾರತ್ ರೆಡ್ಡಿ ಬೆಂಬಲಿಗರ ನಡುವೆ ಬ್ಯಾನರ್ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ ತಲೆದಂಡದ ಬೆನ್ನಲ್ಲೇ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಸಿವಿಲ್ ರೈಟ್ಸ್ ಮತ್ತು ಎನ್‌ಫೋರ್ಸ್‌ಮೆಂಟ್ ಆಫ್ ವರ್ತಕರನ್ನು ಟ್ರಾನ್ಸ್‌ಫರ್ ಮಾಡಲಾಗಿತ್ತು, ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಿಸಲಾಯಿತು. ಪವನ್ ನೆಜ್ಜೂರು ಅವರ ಅಮಾನತಿಯಿಂದ ಎಸ್ಪಿ ಸ್ಥಾನಕ್ಕೆ ಡಾ. ಸುಮನ ಪೆನ್ನೆಕರ್ ಅವರನ್ನು ನೇಮಿಸಲಾಗಿದೆ.
ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನ ಅಮಾನತು ಮಾಡಿತ್ತು. ದುರ್ದೈವ ಅಂದರೆ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರು ಸಸ್ಪೆಂಡ್ ಆಗಿದ್ದರು. ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದರು. ಬೆನ್ನಲ್ಲೇ ಸರ್ಕಾರ ಕ್ರಮ ಕೈಗೊಂಡಿತ್ತು.
ಇದನ್ನೂ ಓದಿ: ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತರ ಸಾವು; ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು?
ಅಮಾನತು ಬೆನ್ನಲ್ಲೇ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಅವರ ಸಂಘಟನೆಯ ಸುದ್ದಿಗಳು ಹರಿದಾಡಿದ್ದವು. ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಮಾತ್ರ ಸೇವಿಸಿದ್ದ ನಜ್ಜೂರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ, ಪ್ರಾಣಪಾಯದಿಂದ ಅವರು ಪಾರಾಗಿದ್ದಾರೆ. ಬಳಿಕ ಈ ಬಗ್ಗೆ ಖುದ್ದು ಸ್ಪಷ್ಟನೆ ನೀಡಿದ್ದ ಎಸ್ ಪಿ ಪವನ್ ನೆಜ್ಜೂರ್ ಅವರ ತಂದೆ ಯಾರು ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ. ಇದೇ ವಿಚಾರ ಇಟ್ಟುಕೊಂಡು ವಿಪಕ್ಷ ಬಿಜೆಪಿ ರಾಜ್ಯ ಸಕರ್ಾರದ ವಿರುದ್ಧ ಮುಗಿಬಿದ್ದಿತ್ತು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.