ಬೆಂಗಳೂರು: ಭಾರತ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಮದುವೆ ಡೇಟ್ ಫಿಕ್ಸ್ ಆಗಿದೆ ಎಂದು ವರದಿಯಾಗಿದೆ.

ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬರುವ ಮಾರ್ಚ್ 05ರಂದು ಸಾನಿಯಾ ಚಾಂದೋಕ್ ಅವರನ್ನು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಾಂದೋಕ್ ಅವರ ಮದುವೆ ಕಾರ್ಯಕ್ರಮವು ಮಾರ್ಚ್ 03ರಿಂದಲೇ ಆರಂಭವಾಗಲಿದ್ದು, ಮಾರ್ಚ್ 05ರಂದು ಪ್ರಮುಖ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದು ವರದಿಯಾಗಿದೆ.

2025ರ ಆಗಸ್ಟ್ನಲ್ಲಿ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಾಂದೋಕ್ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಈ ಎಂಗೇಜ್ಮೆಂಟ್ ನಲ್ಲಿ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರಷ್ಟೇ ಪಾಲ್ಗೊಂಡಿದ್ದರು.

ಅರ್ಜುನ್ ತೆಂಡೂಲ್ಕರ್ ಅವರ ಮದುವೆ ಕಾರ್ಯಕ್ರಮವು ಮುಂಬೈನಲ್ಲಿ ನಡೆಯಲಿದ್ದು, ಕುಟುಂಬಸ್ಥರು, ಕ್ರಿಕೆಟ್ ತಾರೆಯರು ಹಾಗೂ ಬಾಲಿವುಡ್ ಸೆಲಿಬ್ರಿಟಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಇನ್ನು ಅರ್ಜುನ್ ತೆಂಡೂಲ್ಕರ್ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಹೇಳುವುದಾದರೇ, ಬೌಲಿಂಗ್ ಆಲ್ರೌಂಡರ್ ಆಗಿರುವ ಅವರು ದೇಶಿ ಕ್ರಿಕೆಟ್ನಲ್ಲಿ ಗೋವಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಇನ್ನು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದ ಅರ್ಜುನ್ ತೆಂಡೂಲ್ಕರ್ ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

Source link
ಅರ್ಜುನ್ ತೆಂಡೂಲ್ಕರ್ ಮದುವೆ ಡೇಟ್ ಫಿಕ್ಸ್; ಹಸೆಮಣೆ ಏರಲು ರೆಡಿಯಾದ ಸಚಿನ್ ಪುತ್ರ!