ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ಗಳ ಮಧ್ಯೆ ಯಾವುದೂ ಸರಿ ಇಲ್ಲ, ಒಬ್ಬರಿಗೊಬ್ಬರು ಬೆಂಬಲ ಕೊಡುವುದಿಲ್ಲ ಎಂಬಿತ್ಯಾದಿ ಮಾತುಗಳು ಆಗಾಗ ಕೇಳಿ ಬರುತ್ತಾ ಇರುತ್ತವೆ. ಈಗ ಕನ್ನಡ ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ (ಟಾಕ್ಸಿಕ್ ಟೀಸರ್) ನೋಡಿದ ಸುದೀಪ್ ಅವರು ಯಶ್‌ಗೆ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಟೀಸರ್ ಬೋಲ್ಡ್ ಎಂದವರಿಗೆ ಅವರ ಬಳಿ ಉತ್ತರವಿದೆ. ಈ ಬೆಳವಣಿಗೆ ಸ್ಯಾಂಡಲ್ ವುಡ್ ಪಾಲಿಗೆ ಪಾಸಿಟಿವ್ ಎಂಬ ಮಾತುಗಳು ಕೇಳಿ ಬಂದಿವೆ.
ಇಂದು (ಜನವರಿ 8) ಯಶ್ ಜನ್ಮದಿನ. ಈ ವಿಶೇಷ ದಿನದಂದು ‘ಟಾಕ್ಸಿಕ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಬಗ್ಗೆ ಮಾಹಿತಿ ನೀಡಲು ಯಶ್ ಟ್ವೀಟ್ ಮಾಡಿದ್ದಾರೆ. ರಾಯ ಅನ್ನೋದು ಯಶ್ ಮಾಡುತ್ತಿರುವ ಪಾತ್ರದ ಹೆಸರು. ಪಾತ್ರವನ್ನು ಪರಿಚಯಿಸುವ ರೀತಿಯಲ್ಲಿ ಈ ಟೀಸರ್ ಇದೆ. ಈ ಟೀಸರ್ ಬಗ್ಗೆ ಯಶ್ ಮಾಡಿದ ಟ್ವೀಟ್ ನ ಸುದೀಪ್ ರೀಟ್ವೀಟ್ ಮಾಡಿಕೊಂಡಿದ್ದಾರೆ.
‘ಯಶ್‌ಗೆ ಶುಭಾಶಯಗಳು. ಅಲೆಗಳ ವಿರುದ್ಧ ಸಾಗಲು ಯಾವಾಗಲೂ ಸಮಯ.ಈ ಹೊಸ ಹೆಜ್ಜೆ ನಿಮ್ಮ ಅದೃಷ್ಟದ ಬಳಿ ಕೊಂಡೊಯ್ಯಲಿ. ನೀವು ನಿಮ್ಮ ಗುರಿಯನ್ನು ನಿರ್ಧರಿಸಿದ್ದೀರಿ’ ಎಂದು ಸುದೀಪ್ ಹೇಳಿದ್ದಾರೆ. ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ. ಅಭಿಮಾನಿಗಳು ಅಚ್ಚರಿ ಹೊರಹಾಕಿದ್ದಾರೆ.
ಅತ್ಯುತ್ತಮ ವಿಶ್ಸ್… @TheNameIsYash
ಉಬ್ಬರವಿಳಿತದ ವಿರುದ್ಧ ಹೋಗಲು ಇದು ಯಾವಾಗಲೂ ಬಹಳಷ್ಟು ತೆಗೆದುಕೊಳ್ಳುತ್ತದೆ. ಈ ಹೊಸ ಹೆಜ್ಜೆಯು ನಿಮ್ಮನ್ನು ಹಣೆಬರಹಕ್ಕೆ ಹತ್ತಿರಕ್ಕೆ ಕೊಂಡೊಯ್ಯಲಿ, ನೀವು ನಿಮ್ಮ ಕಣ್ಣುಗಳನ್ನು ಹಾಕಿದ್ದೀರಿ. ಚೀರ್ಸ್ ♥️ಈ https://t.co/2YZ8NU3KEF
— ಕಿಚ್ಚ ಸುದೀಪ (@KicchaSudeep) ಜನವರಿ 8, 2026
‘ಟಾಕ್ಸಿಕ್’ ಟೀಸರ್ ತುಂಬಾನೇ ಬೋಲ್ಡ್ ಆಗಿದೆ. ಇದನ್ನು ಅನೇಕರು ಟೀಕಿಸಿದ್ದಾರೆ. ಈ ಟೀಕೆಗಳು ಕೇಳಿ ಬಂದರೆ ‘ಅಲೆಗಳ ವಿರುದ್ಧ ಸಾಕಷ್ಟು ಸಮಯ ಬೇಕು’ ಎಂದು ಯಶ್ ಟ್ವೀಟ್ ಮಾಡಬಹುದೆಂದು ಹೇಳಲಾಗುತ್ತಾ ಇದೆ.
ಯಶ್ ಅವರಿಗೆ ಸುದೀಪ್ ವಿಶ್ ಮಾಡಿದ್ದು ಅನೇಕರಿಗೆ ಅಚ್ಚರಿ ತಂದಿದೆ. ‘ಇದನ್ನು ನಾವು ನಿರೀಕ್ಷಿಸಿರಲಿಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ಇದು ನಮ್ಮ ಕಿಚ್ಚ ಸುದೀಪ್. ಯಶ್ ಹಾಗೂ ಸುದೀಪ್ ಮಧ್ಯೆ ಇರುವ ಬಾಂಡ್ ನ ಅಭಿಮಾನಿಗಳೇ ಹಾಳು ಮಾಡಿದರು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಾಲಿವುಡ್ ರೇಂಜ್‌ನಲ್ಲಿ ‘ಟಾಕ್ಸಿಕ್’ ಟೀಸರ್; ಎಲ್ಲರಿಗೂ ವಾರ್ನಿಂಗ್ ಕೊಟ್ಟ ‘ರಾಯ’
ಯಶ್ ಅವರು ‘ಕೆಜಿಎಫ್ 2’ ಬಳಿಕ ಒಪ್ಪಿಕೊಂಡ ಸಿನಿಮಾ ‘ಟಾಕ್ಸಿಕ್’. ಈ ಟೀಸರ್ ನೋಡಿದ ಅಭಿಮಾನಿಗಳು ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಕೆಲವು ಟೀಸರ್ ಸಖತ್ ಬೋಲ್ಡ್ ಎನ್ನುತ್ತಿದ್ದಾರೆ. ಸಿನಿಮಾನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.