ಕೋಗಿಲು ಭೂ ಕಬಳಿಕೆ ಕೇಸ್​​: ಎಲ್ಲ ದಾಖಲೆ ಫೇಕ್​​, ಆರೋಪಿಗಳ ಕಳ್ಳಾಟ ಬಯಲು

ಕೋಗಿಲು ಭೂ ಕಬಳಿಕೆ ಕೇಸ್​​: ಎಲ್ಲ ದಾಖಲೆ ಫೇಕ್​​, ಆರೋಪಿಗಳ ಕಳ್ಳಾಟ ಬಯಲು


ತಾತ್ಕಾಲಿಕ ಟೆಂಟ್ ನಲ್ಲಿ ವಾಸ.

ಬೆಂಗಳೂರು, ಜನವರಿ 08: ಯಲಹಂಕ ಕೋಗಿಲು ಬಳಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಸಂಬಂಧ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಬಂಧಿತ ಆರೋಪಿಗಳಾದ ವಿಜಯ್ ಮತ್ತು ವಸೀಮ್ ಉಲ್ಲಾ ಅಲ್ಲಿಯ ಅಕ್ರಮ ನಿವಾಸಿಗಳಿಂದ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಜೊತೆಗೆ ಹಕ್ಕುಪತ್ರಗಳನ್ನು ಕೂಡ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಈ ಯೂ ಯಲಹಂಕ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಇನ್ನು ಈ ಬಗ್ಗೆ ಮಾಹಿತಿ ಇದ್ದರೂ ಸಹ ಯಲಹಂಕ ತಹಶೀಲ್ದಾರ್ ಕ್ರಮ ಕೈಗೊಂಡಿಲ್ಲ. ನಕಲಿ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಿಕೊಂಡಿರೋ ಜಮೀನು ವಶಕ್ಕೆ ಪಡೆದಿಲ್ಲ. ನಕಲಿ ದಾಖಲೆಗಳ ಬಗ್ಗೆ ಕ್ರಮ ತೆಗದುಕೊಳ್ಳುವಂತೆ ಸ್ಥಳೀಯ ಯಲಹಂಕ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೀಗಾಗಿ 2022ರಿಂದ 2025ರ ಅವಧಿಯಲ್ಲಿ ತಹಶಿಲ್ದಾರರ ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಆಗಿದ್ದು 167 ಮನೆ, ಫ್ಲಾಟ್‌ಗಾಗಿ ಸಲ್ಲಿಕೆಯಾದ ಅರ್ಜಿ 250ಕ್ಕೂ ಹೆಚ್ಚು!

‘ದೂರಿನ ಆಧಾರದಲ್ಲಿ ತನಿಖೆ’

ಕೋಗಿಲು ಲೇಔಟ್‌ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ. ಪರಿಶೀಲನೆ ವೇಳೆ ಜಾಗ ಕೊಡುತ್ತೇವೆಂದು ಆರೋಪಿಗಳು ಮೋಸ ಮಾಡಿದ್ದು ಬೆಳಕಿಗೆ ಬಂದಿದೆ. ಹೀಗಾಗಿ ಸರ್ಕಾರಿ ಭೂಮಿ ಒತ್ತುವರಿ, ವಂಚನೆ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ. ದಾಖಲೆ ನೀಡುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಎಷ್ಟು ಜನರಿಂದ ಹಣ ಪಡೆದಿದ್ದಾರೆ? ಯಾವ ದಾಖಲೆಗಳನ್ನು ನಕಲಿಸಲಾಗಿದೆ ಎಂದು ತನಿಖೆ ಮಾಡುತ್ತೇನೆ. ಯಾರೆಲ್ಲ ವಂಚನೆಗೊಳಗಾಗಿದ್ದಾರೆ ಅವರಿಗೆ ದೂರು ನೀಡಿದ್ದೇವೆ. ಅವರು ದೂರಿನ ಆಧಾರದಲ್ಲಿ ತನಿಖೆ ಮಾಡುತ್ತಾರೆ.

’26 ಕುಟುಂಬಗಳ ದಾಖಲೆಯೇ ಸರಿ’

ಕೋಗಿಲು ಲೇಔಟ್‌ನಲ್ಲಿ ಮನೆ ತೆರವಾಗಿರುವವರ ಮೇಲಿರುವ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಇಷ್ಟು ಕುಟುಂಬಗಳ ದಾಖಲೆಗಳು ಮಾತ್ರ ಸರಿಯಾಗಿವೆ. ಈ ಹಲವರ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಷರತ್ತು ವಿಧಿಸಿ ಮನೆಗಳನ್ನು ಹಂಚಿಕೆ ಮಾಡಬಾರದು. ಯಾವುದೇ ಕಾರಣಕ್ಕೂ ಹೊರಗಿನವರಿಗೆ ಮನೆ ನೀಡುವುದಿಲ್ಲ. ಸಿಎಂ ಸಭೆ ನಡೆಸಿದ್ದು ಮನೆ ಹಂಚಿಕೆಗೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *