ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು

ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು


ಬೆಂಗಳೂರು, (ಜನವರಿ 08): ಕಾಂಗ್ರೆಸ್ (ಕಾಂಗ್ರೆಸ್) ಅವಧಿಯಲ್ಲಿ ʼಮನರೇಗಾದಲ್ಲಿ (mgnrega) 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರವಾಗಿದೆ. ಇಂಥ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ `ವಿಬಿಜಿ ರಾಮ್ ಜಿ ಕಾಯ್ದೆ ಜಾರಿ ತಂದಿದೆ. ಆದರೆ, ಕಾಂಗ್ರೆಸ್‌ಗೆ ಇದೇ ದೊಡ್ಡ ಸಮಸ್ಯೆಯಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಪ್ರಲ್ಹಾದ ಜೋಶಿ (ಪ್ರಹ್ಲಾದ ಜೋಶಿ) ತಿರುಗೇಟು ತೋರಿಸಿದೆ. ಬೆಂಗಳೂರಿನಲ್ಲಿ ಗುರುವಾರ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, `ವಿಬಿಜಿ ರಾಮ್ ಜಿ’ಯಲ್ಲಿ ಐ ತಂತ್ರಜ್ಞಾನ, ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿದ್ದು, ಕೆಲಸದ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ಮನರೇಗದಲ್ಲಿ ಹಣ ಹೊಡೆಯುತ್ತಿದ್ದ ಕಾಂಗ್ರೆಸ್‌ನ ಮಧ್ಯವರ್ತಿಗಳಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಇದನ್ನು ವಿರೋಧಿಸುತ್ತಿದ್ದಾರೆ ಎಂದು ಚಾಟಿ ಬೀಸಿದರು.

ಮನರೇಗಾದಲ್ಲಿ ಕಾಂಗ್ರೆಸ್ ಅವಧಿಯಲ್ಲಿ 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರದ ಆರೋಪವನ್ನು ಕಾಂಗ್ರೆಸ್ ವಿರೋಧಿಸಿಲ್ಲ. 2013ರಲ್ಲಿ ಸಿಎಜಿ ಪ್ರಕಾರ ದೇಶದಲ್ಲಿ 4.33 ಲಕ್ಷ ನಕಲಿ ಜಾಬ್ ಕಾರ್ಡ್‌ಗಳಿವೆ. ಮೊದಲು ಜೆಸಿಬಿಯಿಂದ ಕೆಲಸ ಮಾಡಿಸುವಂತೆ. ಈಗ ಈ ಎಲ್ಲಾ ಅಕ್ರಮ, ಲೋಪಗಳಿಗೂ ತೆರೆ ಎಳೆಯಲು `ವಿಬಿಜಿ ರಾಮ್ ಜಿ ಕಾಯ್ದೆ’ ತಂದಿದ್ದೇವೆ ಎಂದು ಜೋಶಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ರಾಜ್ಯದ ಕೂಲಿ ಕಾರ್ಮಿಕರನ್ನು ದಾರಿ ತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

`ವಿಬಿಜಿ ರಾಮ್ ಜಿ ಕಾಯ್ದೆ`ಯಲ್ಲಿ ಕೂಲಿಕಾರರಿಗೆ 60 ದಿನ ಕಾಲ ಬಿಡುವು ಕೊಟ್ಟಿದ್ದಕ್ಕೆ ಕಾಂಗ್ರೆಸ್ಸಿಗರು ಕೃಷಿ ಮೇಲೆ ದುಷ್ಪರಿಣಾಮ ಎನ್ನುತ್ತಿದ್ದಾರೆ, ಹಾಗಾದರೆ ಇವರ ಕಾಲದಲ್ಲೇ 365 ದಿನ ಕೆಲಸ ಕೊಡುತ್ತಿದ್ದರಾ? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ಕಾಲದಲ್ಲಿ ಮನರೇಗಾದಲ್ಲಿ ಡಿಜಿಟಲ್ ಪೇಮೆಂಟ್ ಅನ್ನೇ ಮಾಡಬೇಕಿತ್ತು. ಇದೀಗ ತನ್ನ ವರ್ತಿಗಳಿಗೆ ಅನುಕೂಲವಾಗಬೇಕೆಂಬ ನಿಲುವಿನಲ್ಲಿ ʼವಿಬಿಜಿ ರಾಮ್ ಜಿ ಕಾಯ್ದೆʼ ವಿರೋಧಿಸಿ ಹೋರಾಟ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಹೆಚ್ಚು ಭ್ರಷ್ಟಾಚಾರ

ಮನರೇಗಾದಲ್ಲಿ ರಾಜ್ಯಕ್ಕೆ ಹತ್ತು ವರ್ಷದ 8 ಲಕ್ಷ 53 ಸಾವಿರ ಕೋಟಿ ಕೊಟ್ಟಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲದಲ್ಲೇ ರಾಜ್ಯದಲ್ಲಿ ಮನರೇಗಾದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರವಾಗಿದೆ. 80 ವರ್ಷದ ವ್ಯಕ್ತಿಯನ್ನೂ ಕೂಲಿಯನ್ನಾಗಿ ಮಾಡಿ ಹಣ ಪಡೆಯಲಾಗಿದೆ. ಇದೀಗ ರಾಹುಲ್ ಗಾಂಧಿಯಂತಹ ಅಪ್ರಬುದ್ಧ ರಾಜಕಾರಣಿಯನ್ನು ಖುಷಿಪಡಿಸಲು ಹೋರಾಟ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಗರಿ ಗರಿ ಅಂಗಿ ಹಾಕಿದವರಿಗೆ ದುಡ್ಡು ಸಿಗದು

`ವಿಬಿಜಿ ರಾಮ್ ಜಿ`ಯಲ್ಲಿ ಕೇಂದ್ರ ಸರ್ಕಾರ ತಾಂತ್ರಿಕವಾಗಿ ಅನುಷ್ಠಾನ ಮಾಡುತ್ತಿರುವುದರಿಂದ ಕಾಂಗ್ರೆಸ್ ಮಧ್ಯವರ್ತಿಗಳಿಗೆ ಸಮಸ್ಯೆಯಾಗುತ್ತಿದೆ. ಕಾಂಗ್ರೆಸ್ ಮಧ್ಯವರ್ತಿಗಳಿಗೆ ಇನ್ನು ಮುಂದೆ ದುಡ್ಡು ಸಿಗುವುದಿಲ್ಲ ಎಂದು ಗರಿ ಗರಿ ಅಂಗಿ ಹಾಕಿಕೊಂಡು ಟಾಂಗ್ ಕೊಟ್ಟರು.

`ವಿಬಿಜಿ ರಾಮ್ ಜಿ` ಕಾಯ್ದೆಯಲ್ಲಿ ಇನ್ನು 14 ದಿನದಲ್ಲೇ ಕೂಲಿ ಹಣ ನೀಡಬೇಕು. ಇಲ್ಲದಿದ್ದರೆ ದಂಡ ವಿಧಿಸದಿದ್ದರೆ. ಮ್ಯಾನಿಟರಿಂಗ್ ಜವಾಬ್ದಾರಿಯನ್ನು ಪಂಚಾಯತ್‌ಗೂ ಕೊಡಲಾಗಿದೆ. ಪ್ರತಿ ವಾರ ಕೆಲಸದ ವಿವರಗಳನ್ನು ನೀಡಬೇಕು. ಯಾರೇ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗುತ್ತಾರೆ. ಇದರಲ್ಲಿ ಅಷ್ಟೊಂದು ವ್ಯವಸ್ಥಿತವಾಗಿ ಪಾರದರ್ಶಕತೆ ತರಲಾಗಿದೆ ಎಂದು ಜೋಶಿ ಸಮರ್ಥಿಸಿಕೊಂಡರು.

ಯುಪಿಎ ಅವಧಿಯಲ್ಲಿ ಜೆಸಿಬಿಯಿಂದ ಕೆಲಸ ಮಾಡಲಿಲ್ಲ ಎಂದು ಕಾಂಗ್ರೆಸ್ ನ ಒಬ್ಬರಾದರೂ ಹೇಳಲಿ ಎಂದು ಸವಾಲು ಹಾಕಿದ ಸಚಿವರು, ಇವರ ಅವಧಿಯಲ್ಲಿ ನರೇಗಾ ಸಿಬ್ಬಂದಿಗೆ ವೇತನ ಸಿಗಬೇಕಿದೆ. ಇನ್ನು ಯುಪಿಎ ಕಾಲದಲ್ಲಿ ರಕ್ಷಣಾ ವ್ಯವಸ್ಥೆಗೂ ಏನೂ ಮಾಡಲಿಲ್ಲ. ಆಗಿರುವ ರಕ್ಷಣಾ ಸಚಿವ ಆ್ಯಂಟನಿ ಅವರು ಹೈಕಮಾಂಡ್‌ಗೆ ಹೆದರಿ ಯಾವುದಕ್ಕೂ ಸಹಿ ಮಾಡಲಿಲ್ಲ ಎಂದು ಕುಟುಕಿದರು.

ರಾಹುಲ್ ಗಾಂಧಿ ಗಂಭೀರ ರಾಜಕಾರಣಿಯೇ?

ಅಧಿವೇಶನ ವೇಳೆ ವಿದೇಶಕ್ಕೆ ಹೋಗಿದ್ದ ರಾಹುಲ್ ಗಾಂಧಿ ಅವರೊಬ್ಬ ಗಂಭೀರ ರಾಜಕಾರಣಿಯೇ? ʼವಿಬಿಜಿ ರಾಮ್ ಜಿ ಕಾಯ್ದೆʼ ಯೋಜನೆ ಚರ್ಚೆ ವೇಳೆ ಸದನದಲ್ಲಿ ಇರಲೇ ಇಲ್ಲ. ಹೊಸ ಬದಲಾವಣೆ ಅನ್ವಯ ತಪ್ಪು ಕಂಡಲ್ಲಿ ನ್ಯಾಯಾಲಯಕ್ಕೆ ಹೋಗಬಹುದು. ಅಧಿಕಾರಿಗಳಿಗೆ ಶಿಕ್ಷೆ ಕೂಡ ಆಗುವುದಿಲ್ಲ. ಇದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದ ಜೋಶಿ, ಮೊದಲೆಲ್ಲಾ ಸರ್ಕಾರ 100’ ಹಾಕಿದರೆ 15 ಮಾತ್ರ ಜನರಿಗೆ ತಲುಪಿದೆ ಎಂದು ರಾಜೀವ್ ಗಾಂಧಿಯೇ ಹೇಳಿದ್ದಾರೆ. ಹಾಗಾದರೆ ಕಾಂಗ್ರೆಸ್‌ಗೆ ವ್ಯವಸ್ಥೆ ಹಾಗೆಯೇ ಇರಬೇಕಿತ್ತಾ? ಎಂದು ಹರಿಹಾಯ್ದರು.

ಮಹಿಳೆ ವಿವಸ್ತ್ರ ಪ್ರಕರಣದಲ್ಲಿ ಎಸ್ಐಆರ್ ಭಯ:

ಹುಬ್ಬಳ್ಳಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್‌ಗೆ ಎಸ್‌ಐಆರ್‌ ಭಯವಿದೆ. ಆದ್ದರಿಂದಯೇ ಎಸ್ಐಆರ್ ಮಾಡಿ ಎಂದರೆ ಎಫ್ಐಆರ್ ಮಾಡುತ್ತಾರೆ. ಮತ್ತು ಗೃಹ ಸಚಿವರು ಪರ ಸಿಎಂ ಮಾತಾಡಿದ್ದಾರೆ. ತನಿಖೆ ನಡೆಯಲಿದೆ ಎನ್ನಬಹುದಿತ್ತು ಎಂದು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.

ನಿಮ್ಮ ದಾದಾಗಿರಿ ನಡೆಯಲ್ಲ

ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರ ಈ ತರಹದ ದಾದಾಗಿರಿ ಇಲ್ಲಿ ನಡೆಯಲ್ಲ ಎಂದ ಜೋಶಿ, ಕಾರ್ಪೊರೇಟರ್ ದೂರನ್ನು ಪೊಲೀಸರು ಸುಜಾತಾ ಅವರ ದೂರನ್ನೇ ತೆಗೆದುಕೊಳ್ಳಲಿಲ್ಲವೇ? ಎಂದು ಪ್ರಶ್ನಿಸಿದರು.

ಬಿಎಲ್ ಒ ಮ್ಯಾಪಿಂಗ್ ಮಾಡಲು ಬಿಎಲ್ ಎಗಳನ್ನು ಕರೆದುಕೊಂಡು ಹೋಗಲು ಅವಕಾಶವಿದೆ. ಆ ದಿನ ಕಾಂಗ್ರೆಸ್ನ ಬಿಎಲ್ಎ 2 ಇರಲಿಲ್ಲ. ಕಾಂಗ್ರೆಸ್ಸಿನವರು ಹೋಗಿ ಸುಜಾತಾ ಮೇಲೆ ಹಲ್ಲೆ ಮಾಡುತ್ತಾರೆ. ನಂತರ ಕಾರ್ಪೊರೇಟರ್ ಕಡೆಯವರ ದೂರಿನ ಆರೋಪಿ ಸುಜಾತಾ ಅವರನ್ನು ಬಂಧಿಸುತ್ತಾರೆ. ಆಕೆ ತಾವೇ ಬಟ್ಟೆ ಬಿಚ್ಚಿಕೊಂಡರು. ಹಾಗಾದರೆ ಪೊಲೀಸರೇಕೆ ಸುಮ್ಮನಿದ್ದರು? ಆಕೆ ಉರುಳು ಹಾಕಿಕೊಳ್ಳಲು ಹೋಗಿದ್ರೂ ನೋಡಿಕೊಂಡು ಸುಮ್ಮನಿರುತ್ತಿದ್ದರಾ? ಎಂದು ಸಚಿವ ಪ್ರಲ್ಹಾದ ಜೋಶಿ ತರಾಟೆಗೆ ತೆಗೆದುಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 6:44 pm, ಗುರುವಾರ, 8 ಜನವರಿ 26



Source link

Leave a Reply

Your email address will not be published. Required fields are marked *