Headlines

Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​


ಬೆಂಗಳೂರು, ಜೂನ್ 24: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  ಮುಂಗಾರು ಆರಂಭವಾಗಿ 15 ದಿನಗಳು ಕಳೆದಿದ್ದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಬಿಟ್ಟರೆ ಬೇರೆಲ್ಲೂ ಅಷ್ಟೊಂದು ಮಳೆ(Rain)ಯಾಗಿರಲಿಲ್ಲ. ಈಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಮೂಡುಬಿದಿರೆ, ಉಪ್ಪಿನಂಗಡಿ, ಮಾಣಿ, ಬಂಟವಾಳ, ನಾಪೋಕ್ಲು, ಆಗುಂಬೆ, ವಿರಾಜಪೇಟೆ, ಸೋಮವಾರಪೇಟೆ, ಕದ್ರಾ, ಗೇರುಸೊಪ್ಪ, ಮಂಗಳೂರು, ಸಿದ್ದಾಪುರ, ಸುಳ್ಯ, ಶೃಂಗೇರಿಯಲ್ಲಿ ಹೆಚ್ಚು ಮಳೆಯಾಗಿದೆ. ಪುತ್ತೂರು, ಧರ್ಮಸ್ಥಳ, ಬೆಳ್ತಂಗಡಿ, ಶಕ್ತಿನಗರ, ಮಂಕಿ, ಪೊನ್ನಂಪೇಟೆ, ಕಮ್ಮರಡಿ, ಕಳಸ, ಪರಶುರಾಂಪುರ, ಜಯಪುರ, ವೈಎನ್ ಹೊಸಕೋಟೆ, ಕುಶಾಲನಗರ, ಮುಲ್ಕಿ, ಹೊನ್ನಾವರ, ಅಂಕೋಲಾ, ಕೋಟಾ, ಕುಮಟಾ, ಶಿರಾಲಿ, ಹುಂಚದಕಟ್ಟೆ, ಕೊಟ್ಟಿಗೆಹಾರ, ಎನ್​ಆರ್ ಪುರ, ಉಡುಪಿ, ಹಿರೆಕೆರೂರು, ಲಕ್ಷ್ಮೇಶ್ವರ, ದೊಡ್ಡಬಳ್ಳಾಪುರ, ತ್ಯಾಗರ್ತಿ, ಜಗಳೂರು, ಭದ್ರಾವತಿ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಜೂನ್ 26ರವರೆಗೂ ಭಾರಿ ಮಳೆ, ಉಳಿದೆಡೆ ಒಣಹವೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 



Source link

Leave a Reply

Your email address will not be published. Required fields are marked *