ಚಿಕ್ಕಬಳ್ಳಾಪುರ, (ಜನವರಿ 09): ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದ ಘಟನೆಯಲ್ಲಿ ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.