ಚಾಮರಾಜನಗರ, ಜನವರಿ 10: ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಒಂದೆಡೆ ಹುಲಿ ಉಪಟಳದಿಂದ ಜನತೆ ಆತಂಕದಲ್ಲಿರುವಾಗಲೇ, ಇದೀಗ ಚಿರತೆಯ ಭೀತಿ ಗ್ರಾಮಸ್ಥರನ್ನು ಕಾಡತೊಡಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಚಿರತೆ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಗ್ರಾಮದ ಒಳಗೇ ನಿರ್ಭಯವಾಗಿ ಕಾಣಿಸಿಕೊಳ್ಳುತ್ತಿರುವ ಚಿರತೆಯನ್ನು ಕಂಡು ಗ್ರಾಮಸ್ಥರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಕಳೆದ ಎರಡು ತಿಂಗಳಿನಿಂದ ಚಿರತೆ ಆಗಾಗ ಗ್ರಾಮಕ್ಕೆ ನುಗ್ಗಿ ಕಾಣಿಸಿಕೊಂಡಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ನೇನೆಕಟ್ಟೆ ಗ್ರಾಮ ಬಂಡೀಪುರ ಟೈಗರ್ ರಿಸರ್ವ್ ಅರಣ್ಯಕ್ಕೆ ಅಂಟಿಕೊಂಡಿರುವ ಕಾಡು ಪ್ರಾಣಿಗಳ ಓಡಾಟ ಹೆಚ್ಚಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ