ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ

ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ


ಹಾವೇರಿ, ಜ.10: ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳಾಗಿದೆ. ಎರಡು ತಿಂಗಳ ಗರ್ಭಿಣಿ ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ ಪ್ರಸ್ತುತ. ಪತಿ ಗಿರೇಶ ದೊಡ್ಡಮನಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಸುನೀತಾ ದೊಡ್ಡಮನಿ ಮನೆಯವರು ಆರೋಪಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯ ಮುಂದೆ ಆರೋಪಿಗಳನ್ನು ಬಂಧಿಸುವಂತೆ ಕುಟುಂಬದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *