ರಾಜ್ಯದ 4 ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ
ಬೆಂಗಳೂರು, ಜನವರಿ 10: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇಂದೂ ಸಹ ತಾಪಮಾನದಲ್ಲಿ (ಹವಾಮಾನ ಮುನ್ಸೂಚನೆ) ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 4 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ಸೂಚಿಸಲಾಗಿದೆ. ಭಾರಿ ಚಳಿಗೆ ಬೆಂಗಳೂರು ನಡುಗಿದ್ದು, ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ.
ಚಳಿಗೆ ಬೆಂಗಳೂರಿಗರು ಗಡಗಡ
ಬೆಂಗಳೂರಿನಲ್ಲಿ ಚಳಿಯಲ್ಲಿ ತುಂತುರು ಮಳೆಯೂ ಸುರಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ತೀವ್ರ ಶೀತ ವಾತಾವರಣ ಕಂಡುಬಂದಿದೆ. ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಇಳಿಕೆಯಾಗಿದೆ. ಹಗಲಿನ ವೇಳೆಯಲ್ಲಿ ನೆಲೆಯೂ ತಾಪಮಾನ ಕುಸಿತ ಕಂಡುಬಂದಿದೆ, ಸದಾ ಮೋಡ ಮುಸಕಿದ ವಾತಾವರಣವಿದೆ. ಮೈಕೊರೆಯುವ ಚಳಿಯಿಂದ ಉದ್ಯೋಗಿಗಳು ಕೆಲಸಕ್ಕೆ ತೆರಳುವಾಗ ಹಾಗೂ ಲಾಲ್ಬಾಗ್ನಲ್ಲಿ ವಾಕಿಂಗ್ಗೆ ಬರುವವರು ಟೋಪಿ, ಮಫ್ಲರ್ ಧರಿಸಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ, ಜನವರಿ 14 ರವರೆಗೂ ಕೆಲವು ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಮತ್ತು ಶೀತಗಾಳಿ ಬೀಸುವ ಸಾಧ್ಯತೆಯಿದೆ.
ಎಲ್ಲೆಲ್ಲಿ ಒಣಹವೆ?
ಬೀದರ್, ಕಲಬುರಗಿ, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.