ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ: ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ?

ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ: ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ?


ಬಾಗಲಕೋಟೆ, ಜನವರಿ 11: ವಿಚ್ಛೇದಿತ ಮಹಿಳೆ ಮೇಲೆ ದೌರ್ಜನ್ಯ (ದೈಹಿಕ ಕಿರುಕುಳ) ನಡೆದಿರುವಂತಹ ಘಟನೆ ಬಾಗಲಕೋಟೆ (ಬಾಗಲಕೋಟೆ) ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್ ನಲ್ಲಿ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ವರ್ಷದ ಮಹಿಳೆ ಮಾನಸಿಕ ಅಸ್ವಸ್ಥೆ, ದೌರ್ಜನ್ಯವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಹೋಗಿದ್ದಾರೆ. ಸದ್ಯ ಮಹಿಳೆಯ ಮೇಲೆ ಗ್ಯಾಂಗ್ ನಿಂದ ಅಥವಾ ಒಬ್ಬರಿಂದ ಅತ್ಯಾಚಾರಿತಾ ಎಂಬುವುದು ಪೊಲೀಸ್ ತನಿಖೆಯಲ್ಲಿದೆ. ಹುನಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೃತ್ಯವೆಸಗಿ ಬಿಸಾಕಿ ಹೋದ ದುಷ್ಟರು

ವಿಚ್ಚೇದಿತ ಮಹಿಳೆ ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದವರು. ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋದ ಮಹಿಳೆಯನ್ನು ನೋಡಿದ ಸಾರ್ವಜನಿಕರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ಬಳಿಕ ಆಂಬ್ಯುಲೆನ್ಸ್ ಮೂಲಕ ಅವರನ್ನು ಹುನಗುಂದ ಆಸ್ಪತ್ರೆಗೆ ದಾಖಲಿಸಲಾಗಿದೆ, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಮುಂದುವರಿದಿದೆ.

ದೌರ್ಜನ್ಯ ನೆನೆದು ಬಿಕ್ಕಿಬಿಕ್ಕಿ ಅತ್ತ ಮಹಿಳೆಯ ಸಹೋದರ

ಇನ್ನು ಮಹಿಳೆಯ ಸಹೋದರ ಸಹೋದರಿ ಮೇಲಾದ ದೌರ್ಜನ್ಯ ನೆನೆದು ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾತನಾಡಿದ ಸಹೋದರ ರವಿ ಮಾದರ, ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಬಿಕ್ಕಿಬಿಕ್ಕಿ ಅತ್ತರು. ಯಾರು ಇಂತಹ ಕೆಲಸ ಮಾಡಿದ್ದಾರೆ ಅವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲು ಬಯಸಿದ್ದಾರೆ.

ಇದನ್ನೂ ಓದಿ: ತಾಯಿ ಮೇಲಿನ ದ್ವೇಷಕ್ಕೆ ಮಗು ಬಲಿ; ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ!

ಸಂತ್ರಸ್ತೆ ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ. ಪರೀಕ್ಷೆ ಮಾಡಿಸಲಾಗಿದೆ, ಗುಪ್ತಾಂಗದ ಮೇಲೆ ಗಾಯಗಳಾಗಿದ್ದರೆ, ಚಿಕಿತ್ಸೆ ನೀಡಲಾಗಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಅತ್ಯಾಚಾರ ಆಗಿರುವ ಬಗ್ಗೆ ವೈದ್ಯಕೀಯ ವರದಿ ಬಂದ ನಂತರ ಖಚಿತ ಎಂದು ಜಿಲ್ಲಾಸ್ಪತ್ರೆ ವೈದ್ಯರು.

ಬಾಗಲಕೋಟೆ ಎಸ್ ಪಿ ಸಿದ್ದಾರ್ಥ ಗೋಯಲ್ ಹೇಳಿದ್ದಿಷ್ಟು

ಇನ್ನು ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಕುರಿತು ಪ್ರತಿಕ್ರಿಯೆ ನೀಡಿದ್ದು, ಈ ವಿಚಾರವಾಗಿ ಎಫ್ ಐಆರ್ ಘಟನೆ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ ಮಾಡಿದ್ದು, 72 ಜನರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಆ ಮೂಲಕ ಆರೋಪಿಗಳ ಪತ್ತೆಗೆ ಮುಂದಾಗಿದ್ದೇವೆ. ಆದಷ್ಟು ಬೇಗ ಆರೋಪಿಗಳ ಪತ್ತೆ ಹಚ್ಚುತ್ತೇವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 4:12 pm, ಭಾನುವಾರ, 11 ಜನವರಿ 26



Source link

Leave a Reply

Your email address will not be published. Required fields are marked *