ರಾಜಕೋಟ್, ಜನವರಿ 11: ದೊಡ್ಡ ದೊಡ್ಡ ಸುಧಾರಣೆಗಳನ್ನು ತರುವ ಮೂಲಕ ವಿಕಸಿತ ಭಾರತದ ಗುರಿಯತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವೈಬ್ರೆಂಟ್ ಗುಜರಾತ್ (ವೈಬ್ರೆಂಟ್ ಗುಜರಾತ್) ಸಮಾವೇಶದ ಭಾಗವಾಗಿ ರಾಜ್‌ಕೋಟ್‌ನಲ್ಲಿ ಟ್ರೇಡ್ ಶೋ ಉದ್ಘಾಟಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ (ನರೇಂದ್ರ ಮೋದಿ), ಭಾರತವು ಬಹಳ ವೇಗವಾಗಿ ಮುಂದುವರಿದ ದೇಶವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
‘ಕಳೆದ 11 ವರ್ಷದ ಭಾರತವು ವಿಶ್ವದ ಅತಿದೊಡ್ಡ ಮೊಬೈಲ್ ಡೇಟಾ ಬಳಕೆದಾರ ದೇಶವಾಗಿತ್ತು. ಈಗ ಎರಡನೇ ಅತಿದೊಡ್ಡ ಮೊಬೈಲ್ ತಯಾರಕ ದೇಶವೆನಿಸಿದೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ಶೇ 4.4ರ ವಿತ್ತೀಯ ಕೊರತೆಯ ಗುರಿ ಮುಟ್ಟುವುದು ಸರ್ಕಾರಕ್ಕೆ ಸಲೀಸು: ಏಜೆನ್ಸಿ ವರದಿ
‘ಭಾರತದ ವಿಶ್ವದ ಅತಿದೊಡ್ಡ ಸ್ಟಾರ್ಟಪ್ ಇಸಿಸ್ಟಂ ಹೊಂದಿದೆ. ಮೂರನೇ ಅತಿದೊಡ್ಡ ವೈಮಾನಿಕ ಮಾರುಕಟ್ಟೆ ಹೊಂದಿದೆ. ವಿಶ್ವದ ಮೂರು ಅತಿದೊಡ್ಡ ಮೆಟ್ರೊ ರೈಲು ನೆಟ್ವರ್ಕ್ಗಳಲ್ಲಿ ಒಂದೆನಿಸಿದೆ’ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಗುಜರಾತ್ ನ ಮಾಜಿ ಮುಖ್ಯಮಂತ್ರಿಯೂ ಆದ ನರೇಂದ್ರ ಮೋದಿ ಅವರು ಭಾರತದ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆಯನ್ನು ಗುರುತಿಸಿದ್ದಾರೆ.
‘ಭಾರತದ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗುವತ್ತ ಧಾವಿಸುತ್ತಿದೆ. ಈ ಪ್ರಯಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ. ದೇಶ ವಿದೇಶಗಳ ಹೂಡಿಕೆದಾರರಿಗೆ ಪ್ರಮುಖ ಬೆಳವಣಿಗೆ ಇಂಜಿನ್ ಆಗಿ ಗುಜರಾತ್ ಹೊಮ್ಮಿದೆ. ಎಂಎಸ್‌ಎಂಇಗಳಿಂದ ಹಿಡಿದು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಗಳವರೆಗೆ ಎಲ್ಲರೂ ಗುಜರಾತ್ ಜೊತೆ ಬೆಳೆಯುತ್ತಿದ್ದಾರೆ’ ಎಂದು ಪಿಎಂ ಮೋದಿ.
ಇದನ್ನೂ ಓದಿ: ಅಮೆರಿಕದೊಂದಿಗೆ ಟ್ರೇಡ್ ಡೀಲ್, ಮುಗಿಯದ ತೊಡಕು; ದಕ್ಷಿಣ ಅಮೆರಿಕ ಸೇರಿದಂತೆ ಬೇರೆ ಬೇರೆ ಮಾರುಕಟ್ಟೆಗಳ ಮೇಲೆ ಭಾರತದ ಕಣ್ಣು
ಈ ಸಂದರ್ಭದಲ್ಲಿ ಮುಖೇಶ್ ಅಂಬಾನಿ ಮೊದಲಾದ ವಿವಿಧ ಉದ್ಯಮಿಗಳು. ಪ್ರಧಾನಿ ಮೋದಿ ಅವರ ದೂರದೃಷ್ಟಿಯು ಮುಂದಿನ 50 ವರ್ಷಗಳಿಗೆ ಭಾರತಕ್ಕೆ ದಾರಿ ಕಲ್ಪಿಸಿದೆ. ದೇಶದ ಸ್ವಾಭಿಮಾನ ಮರಳಿ ಪಡೆಯುವಂತೆ ಮಾಡಿದೆ. ಭಾರತದಲ್ಲಿ ಯಾವತ್ತೂ ಇಷ್ಟು ಇತಿಹಾಸ ವಿಶ್ವಾಸ, ಭರವಸೆ ಇದ್ದಿದ್ದನ್ನು ನಾವು ಕಂಡಿಲ್ಲ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ನ ಚೇರ್ಮನ್ ಆದ ಅಂಬಾನಿ ಹೇಳಿದ್ದಾರೆ.
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ