ಶಿವಮೊಗ್ಗ, ಜನವರಿ 11: ಗಂಡ-ಹೆಂಡತಿ (ಗಂಡ ಹೆಂಡತಿ) ಜಗಳ ಉಂಡು ಮಲಗುವ ತನಕ ಎನ್ನುವ ಗಾದೆಯಿದೆ. ಆದರೆ ಇಲ್ಲಿ ಗಂಡ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪತ್ನಿಯ ತಂದೆಗೆ ಗೊತ್ತಾಗಿದೆ. ಹೀಗಾಗಿ ಪ್ರೀತಿಸಿ ಮಗಳಿಗೆ ವಂಚನೆ ಮಾಡಿದ್ದು ಅಳಿಯ ಮೇಲೆ ಮಾವನನ್ನು ಸೇಡು ತೀರಿಸಿಕೊಂಡಿದ್ದಾರೆ. ಆ ಮೂಲಕ ಅಳಿಯನ ಮರ್ಡರ್ ಕೇಸ್ (ಕೊಲೆ ಪ್ರಕರಣ) ಬಿಗ್ ಟ್ವಿಸ್ಟ್ ಸಿಕ್ಕಿದೆ.
ನಡೆದದ್ದೇನು?
ಶಿವಮೊಗ್ಗದ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿಯ ಶ್ರೀನಿಧಿ ವೈನ್ ಶಾಪ್ ಮುಂದೆ ಡಿ. 29 ರಂದು ಯುವಕನ ಕೊಲೆ ನಡೆದಿತ್ತು. ಅರುಣ ಎಂಬ ಯುವಕ ವೈನ್ ಶಾಪ್ ಮುಂದೆ ನಿಂತಿದ್ದ. ದಿಢೀರ್ ಎಂಟ್ರಿಕೊಟ್ಟಿದ್ದ ಇಬ್ಬರು ವ್ಯಕ್ತಿಗಳು ರಾಡ್ ನಿಂದ ಅರುಣ್ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಅರುಣ್ ಸ್ಥಳದಲ್ಲೇ ಇದ್ದ. ಈ ಕೊಲೆ ನಡೆದು 10 ರಿಂದ 12 ದಿನಗಳಾದರೂ ಆರೋಪಿಗಳು ಇರಲಿಲ್ಲ. ಕೊಲೆ ಮಾಡಿದ ಹಂತಕರು ಮತ್ತು ಅವರ ಕುಟುಂಬದವರು ಮನೆಗೆ ಬೀಗ ಹಾಕಿ ಎಸ್ಕೇಪ್ ಆಗಿದ್ದರು. ಕೊನೆಗೆ ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಇಬ್ಬರನ್ನು ವಿನೋಬ ನಗರ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು!
ಅಷ್ಟಕ್ಕೂ ಕೊಲೆಯಾದ ಅರುಣ್ ನನ್ನು ಕೊಲೆ ಮಾಡಿದ್ದು ಯಾರು, ಏಕೆ ಅಂತಾ ನೋಡುವುದಿಲ್ಲ, ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ, ಅರುಣ್ ಹೆಣ್ಣು ಕೊಟ್ಟ ಮಾವ ತಿಪ್ಪೇಶ್ ಮತ್ತು ಸೋದರ ಮಾವ ಲೋಕೇಶ್. ಈ ಇಬ್ಬರು ಸೇರಿ ಅಂದು ಕೊಲೆ ಮಾಡಿದರು. ಕೊಲೆಗೆ ಪತ್ನಿ ಯಶಸ್ವಿನಿ ಮತ್ತು ಅತ್ತೆ ಕಮಲಾಕ್ಷಿ ಸಾಥ್ ಕೊಟ್ಟಿದ್ದರು. ಅರುಣ್ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಲ್ಲಿ ಇಬ್ಬರ ಬಂಧನವಾಗಿದೆ. ಅತ್ತೆ ಮತ್ತು ಪತ್ನಿ ಪೊಲೀಸ್ ಕೈಗೆ ಸಿಕ್ಕಿಲ್ಲ. ವಿನೋಬ ನಗರ ಪೊಲೀಸರು ಅರುಣ್ ಮರ್ ಕೇಸ್ ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಕೊಲೆಯಲ್ಲಿ ಶಾಮಿ ಪತ್ನಿ ಮತ್ತು ಅತ್ತೆಯ ಶೋಧ ಕಾರ್ಯ ಮುಂದುವರಿದಿದೆ. ಮಾಡಿದ ಮಾವ ಮತ್ತು ಸಂಬಂಧಿ ಇಬ್ಬರನ್ನು ಪೊಲೀಸರು ಕಸ್ಟಡಿಗೆ ಒಳಪಡಿಸಲು ತನಿಖೆಯ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ.
ಪ್ರೀತಿಸಿ ಮದುವೆ ಮಾಡಿಕೊಂಡಿದ್ದ ಜೋಡಿ
ಅರುಣ್ ಕಾಶೀಪುರದಲ್ಲಿ ಯಶಸ್ವಿನಿ ಎಂಬ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದಳು. ಗಾರೆ ಕೆಲಸ ಮಾಡಿಕೊಂಡಿದ್ದ ಅರುಣ್ ಡೊಳ್ಳು ಹೊಡೆಯುತ್ತಿದ್ದ. ಆರ್ಎಕ್ಸ್ 100 ಬೈಕ್ ಇಟ್ಟುಕೊಂಡಿದ್ದ. ಡೊಳ್ಳು ಮತ್ತು ಆರ್ಎಕ್ಸ್ 100 ಬೈಕ್ ಓಡಿಸುವ ಸ್ಟೈಲಿಗೆ ಯುವತಿ ಮನಸೋತಿದ್ದಳು. ಮೂರು ವರ್ಷಗಳ ಹಿಂದೆ ಅರುಣ ಯಶಸ್ವಿಯನ್ನ ಮದುವೆಯಾಗಿದ್ದ.
ದಿನ ಕಳೆದಂತೆ ಇಬ್ಬರ ನಡುವೆ ಕೆಲಸದ ವಿಚಾರದಲ್ಲಿ ಗಲಾಟೆಯಾಗುತ್ತಿತ್ತು. ಹೀಗಾಗಿ ಯಶಸ್ವಿನಿ ತಾಯಿ ಮನೆಗೆ ಹೋಗುತ್ತಿದ್ದಳು. ಪತ್ನಿಯನ್ನು ತವರು ಮನೆಗೆ ಕರೆದುಕೊಂಡು ಬರಲು ಹೋಗುತ್ತಿದ್ದ. ಈ ನಡುವೆ ಪತಿ, ಪತ್ನಿಯ ನಡುವೆ ಗಲಾಟೆ ಹೆಚ್ಚಾದಂತೆ ಅರುಣ್ ಮದ್ಯಪಾನ ಮಾಡಲು ಶುರು ಮಾಡಿದೆ.
ಹೆಂಡತಿಯನ್ನು ಗಂಡನ ಮನೆಗೆ ಕಳುಹಿಸಿ ಎಂದು ಗಲಾಟೆ ಮಾಡುತ್ತಿದ್ದ ಅರುಣ್ಗೆ ಹೆಂಡತಿ ಮನೆಯವರು ರಾಡಿನಲ್ಲಿ ಹೊಡೆದು ಕಳುಹಿಸಿದ ಉದಾಹರಣೆಗಳಿವೆ. ನಮ್ಮ ಮನೆಯ ಹುಡುಗಿಯನ್ನ ಓಡಿಸಿಕೊಂಡು ಮದುವೆ ಆಗಿರುವುದಕ್ಕೆ ಪತ್ನಿಯ ಕುಟುಂಬಸ್ಥರಿಗೆ ಅಸಮಾಧಾನವಿತ್ತು. ಈ ಹಿನ್ನಲೆಯಲ್ಲಿ ಪತ್ನಿ ಸೇರಿದಂತೆ ಅತ್ತೆ ಮಾವ, ಸಂಬಂಧಿ ನಾಲ್ವರು ಸೇರಿ ಅರುಣ್ ಕಥೆ ಮುಗಿಸಲು ಸ್ಕೇಚ್ ಹಾಕಿದ್ದರು. ಅದರಂತೆ ಕೊಲೆ ಕೂಡ ಮಾಡಿದರು.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್
ಪತಿ ಮರ್ಡರ್ ಕೇಸ್ ನಲ್ಲಿ ಮಾವ ಮತ್ತು ಸಂಬಂಧಿ ಇಬ್ಬರ ಬಂಧನವಾಗಿದೆ. ಪತ್ನಿ ಮತ್ತು ಅತ್ತೆ ಇಬ್ಬರು ಶಾಮೀಲು ಆಗಿರುವುದು ತನಿಖೆಯಿಂದ ಬಯಲಾಗಿದೆ. ಪ್ರೀತಿಸಿ ಮದುವೆಯಾದ ಪತಿಯ ಮರ್ಡರ್ ಗೆ ಪತ್ನಿಯೇ ಸ್ಕೇಚ್ ಹಾಕಿರುವುದು ಎಲ್ಲರೂ ಬೆಚ್ಚಿ ಬೀಳುವಂತೆ ಮಾಡಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 8:58 pm, ಭಾನುವಾರ, 11 ಜನವರಿ 26