Headlines

Horoscope Today 12 January : ಇಂದು ಈ ರಾಶಿಯವರು ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವರು

Horoscope Today 12 January : ಇಂದು ಈ ರಾಶಿಯವರು ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವರು


ಮೇಷ ರಾಶಿ:

ಯಾವುದೇ ನಿರ್ಬಂಧಗಳು ಇಲ್ಲದೇ ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣದ ಕೊರತೆ ಇರುವುದು. ನಿಮ್ಮ ದ್ವೇಷವು ಬಲವುಳ್ಳವರಲ್ಲಿ ಬೇಡ. ಸುಮ್ಮನೇ ಆಪ್ತರ ಮೇಲೆ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯನ್ನು ಹಿಂಪಡೆಯುವ ಸಲಹೆ ನಿಮಗೆ ಬರಬಹುದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ. ಸತ್ಕರ್ಮದಿಂದ ಬರುವ ಪುಣ್ಯದ ಫಲವು ಇಂದು ಸಿಗುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಶ್ಚರ್ಯಗೊಳಿಸಿತು. ಸಿಟ್ಟು ಮಾಡಿಕೊಂಡು ಆಗಬೇಕಾದ ಕೆಲಸವನ್ನು ಮಾಡಿ ಮುಗಿಸಿ.

ವೃಷಭ ರಾಶಿ:

ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರಿ. ಎಲ್ಲರ ಜೊತೆ ಸೇರಿ ಉತ್ಸಾಹದಿಂದ ಪಾಲ್ಗೊಳ್ಳುವಿರಿ. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಾಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ದೇಹದ ಬಗ್ಗೆ ಅತಿಯಾದ ಮೋಹವಿರುವುದು. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದಾರೆ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲಬಾಧೆಯು ನಿಮ್ಮನ್ನು ತೀವ್ರವಾಗಿ ಕಾಡುತ್ತದೆ. ಸುಮ್ಮನೆ ಇರುವುದು ನಿಮಗೆ ಇಂದು ಪ್ರಿಯವಾದೀತು. ಹೂಡಿಕೆಯಿಂದ ಹಣವನ್ನು ಪಡೆದುಕೊಳ್ಳಿ.

ಮಿಥುನ ರಾಶಿ:

ಮಕ್ಕಳಿಗೆ ನಿರಾಸೆಯಾಗದಂತೆ ನಡೆದುಕೊಳ್ಳಿ. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾಗುವುದು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಪರಿಚಿತರು ಬೇರೆ ಬೇರೆಯವರಲ್ಲಿ ಸ್ನೇಹಿತರಾಗಬಹುದು. ಅಸಂಬದ್ಧ ಮಾತುಗಳ ನಿಮ್ಮ ವ್ಯಕ್ತಿತ್ವವನ್ನು ತಿಳಿಸುವುದು. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸುವುದು.

ಕರ್ಕಾಟಕ ರಾಶಿ:

ಹಣಕಾಸಿನಲ್ಲಿ ವಂಚನೆಯಾಗಿರುವುದು ಬಹಳ ದಿನಗಳ ಅನಂತರ ಗೊತ್ತಾಗಿ ಬೇಸರವಾಗುವುದು. ಯಾರ ವಿಚಾರವನ್ನೂ ಒಪ್ಪಿಕೊಳ್ಳಲಾರಿರಿ. ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆದುಕೊಳ್ಳಿ. ಅಪಾಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳಿರಿ. ಸ್ತ್ರೀಯರಿಂದ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ಕಷ್ಟವಾಯಿತು. ತಪ್ಪಿನ ಕಾರಣಕ್ಕೆ ನಿಮ್ಮ ಬಳಿ ಕ್ಷಮೆಯನ್ನು ಕೇಳಬಹುದು.

ಸಿಂಹ ರಾಶಿ:

ಬಂದ ಹಣವನ್ನು ಖರ್ಚಾಗದಂತೆ ಸಂಗ್ರಹಿಸಲು ಪ್ರಯತ್ನಿಸಿ. ಆರ್ಥಿಕ ವಿಚಾರದಲ್ಲಿ ನಿಮಗೆ ಯಾವಾಗಲೂ ಅಸಮಾಧನ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನ ಬರಬಹುದು. ಭೂಮಿಯಿಂದ ಸಂಪತ್ತನ್ನು ಕಳೆದುಕೊಳ್ಳುವಿರಿ. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳುವ ಸಾಧ್ಯತೆಯಿದೆ.

ಕನ್ಯಾ ರಾಶಿ:

ಆತ್ಮಗೌರವವನ್ನು ಕೆಡಿಸಿಕೊಳ್ಳುವ ಸಂದರ್ಭ ಬರಬಹುದು. ಮಕ್ಕಳ ಕಾರ್ಯದಿಂದ ನಿಮಗೆ ಅಪ್ರಶಂಸೆಯು ಬರಬಹುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಿದೆ. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ಆಯಾಸ ಹೆಚ್ಚಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಸಂಪತ್ತು ಮತ್ತಾವುದೋ ರೂಪದಲ್ಲಿ ಬಂದು ಸೇರುತ್ತದೆ ಎಂಬ ನಂಬಿಕೆ ಇರಲಿದೆ.

ತುಲಾ ರಾಶಿ:

ಶತ್ರುಗಳ ಕಾರಣದಿಂದ ಖರ್ಚು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ಆರೋಗ್ಯದಲ್ಲಿ ಅಸ್ತವ್ಯಸ್ತ. ವಚನ ಭ್ರಷ್ಟರಾಗುವ ಸಾಧ್ಯತೆ ಇದೆ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಗೃಹನಿರ್ಮಾಣವು ಧನಭಾವದಿಂದ ಮುಂದೆ ಹೋಗುವುದು. ಹಳೆಯ ಘಟನೆಗಳು ನಿಮ್ಮನ್ನು ಕಾಡಬಹುದು. ಆತಂಕದಿಂದ ನಿಮಗೆ ಮುಕ್ತಿ ಸಿಗಲಿದೆ. ಸಂಗಾತಿಯ ಮಾತಿಗೆ ಸಕಾರಾತ್ಮಕವಾಗಿರಿ.

ವೃಶ್ಚಿಕ ರಾಶಿ:

ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿ ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುತ್ತದೆ. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದಿಂದ ನಿಮಗೆ ಸಹಾಯ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದು ಮಾತ್ರವೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಇಂದು ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಹಣವನ್ನು ಸಾಲವಾಗಿ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಸಾಮಾಜಿಕ ತಾಣದಿಂದ ಪ್ರೇಮವು ಉಂಟಾಗಬಹುದು.

ಧನು ರಾಶಿ:

ಉದ್ಯಮದಿಂದ ಉತ್ತಮ ಆದಾಯ ಸಿಗಬಹುದು. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರುತ್ತದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕ ಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ’ ಮಾತ್ರ ಇರದು. ದ್ವೇಷವನ್ನು ತೀರಿಸಿಕೊಳ್ಳಲು ಕಾಯುವಿರಿ. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆ ಅಚ್ಚರಿ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು.

ಮಕರ ರಾಶಿ:

ಒಳ್ಳೆಯ ವ್ಯವಸ್ಥೆ ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ಬಂಧುಗಳ ವಿಚಾರದಲ್ಲಿ ತೃಪ್ತಿ’ ಇರದು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದರೆ ಇಂದು ಸಿಗಬಹುದು. ಸ್ನೇಹಿತರಿಂದ ನಿಮಗೆ ಬಹುಮಾನ ಸಿಗಬಹುದು. ದೂರದವರಿಗೆ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ನೀವು ಮಾಡುವ ಸಣ್ಣ ಕೆಲಸಕ್ಕೂ ಪ್ರಶಂಸೆಯನ್ನು ಅಪೇಕ್ಷಿಸುವಿರಿ. ಅನ್ಯ ಕರೆಗಳಿಂದ ಮೋಸದ ಜಾಲಕ್ಕೆ ಸಿಕ್ಕಬಹುದಾದ ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಸ್ನೇಹಿತರ ಸಹಕಾರದಿಂದ ಸ್ಥಿರಿ.

ಕುಂಭ ರಾಶಿ:

ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾಯಿತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆ ಕೇಳುವಿರಿ. ನಿಮ್ಮ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಸಂಗಾತಿಯ ಬಗ್ಗೆ ಧನಾತ್ಮಕ ಅಂಶಗಳು ಕೇಳಿಬರಬಹುದು. ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲ ವಸ್ತು. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ಅತಿಥಿಗಳ ಆಗಮನ ಕಾರ್ಯಕ್ರಮ. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಾಗುವುದು. ಕಛೇರಿಯ ವಾಸ್ತವವನ್ನು ಅರ್ಥಮಾಡಿಕೊಂಡು ವ್ಯವಹರಿಸಿ.

ಮೀನ ರಾಶಿ:

ಸಂದರ್ಭೋಚಿತ ಮಾತುಗಳಿಂದ ಗೆಲುವು ಸಿಗಬಹುದು. ನಂಬಿಕೆ ದ್ರೋಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿ ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧಾನ ಚಿತ್ತದಿಂದ ಇರುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳನ್ನು ಕೇಳಬಹುದು. ಅನ್ಯರಿಗೆ ಅಸಾಧ್ಯವಾದ ಕೆಲಸವು ನಿಮ್ಮಿಂದ ಸಾಧ್ಯವಾಗಬಹುದು. ಜನಮನ್ನಣೆಯ ಆಸೆಯು ಒಂದಿಲ್ಲೊಂದು ಕೆಲಸವನ್ನು ಮಾಡುವುದು.

ಜನವರಿ 12, 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಕಾರ್ಯಕ್ರಮ : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಸ್ವಾತಿ ಯೋಗ : ಧೃತಿ, ಕರಣ : ಗರಜ, 06 ಸೂರ್ಯೋದಯ5 – 06 ಸೂರ್ಯೋದಯ pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08-18 – 09:43, ಯಮಗಂಡ ಕಾಲ 11:08 – 12:33, ಗುಳಿಕ ಕಾಲ 13:58 – 15:23

-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)



Source link

Leave a Reply

Your email address will not be published. Required fields are marked *