ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ (ಫೈರ್ ಅಸಿಡೆಂಟ್) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ಕಾರ್ಮಿಕರು ಪತ್ತೆಯಾಗಿದ್ದಾರೆ. ಹಲವಾರು ಅಂಗಡಿಗಳು ಸುತ್ತು ಭಸ್ಮ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗುವುದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ.
ಬೆಂಕಿಯನ್ನು ನಿಯಂತ್ರಿಸಲು, ಹತ್ತಿರದ ಅಂಗಡಿಗಳು ಮತ್ತು ಮನೆಗಳಿಗೆ ಹರಡದಂತೆ ತಡೆಯಲು 6 ಅಗ್ನಿಶಾಮಕ ದಳದ ವಾಹನಗಳು ಮತ್ತು ನೀರಿನ ಟ್ಯಾಂಕರ್‌ಗಳನ್ನು ಕರೆಯಲಾಗಿದೆ. ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ಸಹ ಕರೆಸಿಕೊಳ್ಳಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ