Headlines

ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ​ ಮಹತ್ವದ ಸಂದೇಶ

ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ​ ಮಹತ್ವದ ಸಂದೇಶ


ಮೈಸೂರು, (ಜನವರಿ 13): ಸಿಎಂ ಹುದ್ದೆ ಬೇಕು ಎಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್)ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ಭೇಟಿಗೆ ಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಹೌದು…ತಮಿಳುನಾಡಿಗೆ ತೆರಳು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದರೆ, ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ಸಿಕ್ಕಿದ್ದೇ ಚಾನ್ಸ್ ಎಂದು ರಾಹುಲ್ ಗಾಂಧಿಯವರನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದರು. ಇದು ಸಿಎಂ ಕುರ್ಚಿಯ ಚರ್ಚೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜೊತೆ ಡಿ.ಕೆ.ಶಿವಕುಮಾರ್ ಒಬ್ಬರೇ ಮಾತುಕತೆಗೆ ಮುಂದಾಗಿದ್ದಾರೆ. ಈ ವೇಳೆ ಏನು ತಲೆಕೆಡಿಸಿಕೊಳ್ಳಬೇಡಿ. ಶೀಘ್ರವೇ ನಿಮ್ಮನ್ನ ದೆಹಲಿಗೆ ಕರೆಯುತ್ತೇವೆ ಎಂದು ಡಿಕೆಶಿಗೆ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಟಿವಿ9ಗೆ ಕಾಂಗ್ರೆಸ್ ಮೂಲಗಳು ತಿಳಿಸಿವೆ, ಈ ಬೆಳವಣಿಗೆ ಕಾಂಗ್ರೆಸ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ನೋಡಿ: ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು!



Source link

Leave a Reply

Your email address will not be published. Required fields are marked *