ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು


ರಾಕಿಂಗ್ ಸ್ಟಾರ್ ಯಶ್ (ಯಶ್) ಅವರು ಜನವರಿ 8 ರಂದು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಲ್ಫ್ ಕ್ಲಬ್ ರಸ್ತೆ ಬಳಿಯಿರುವ ಮನೆ ಎದುರು ಬ್ಯಾನರ್ ಹಾಕಲಾಗಿದೆ. ಈ ಬಗ್ಗೆ ಜಿಬಿಎ ಸಹಾಯಕ ಇಂಜಿನಿಯರ್ ಪೂಜಾರಪ್ಪ ಅವರು ದೂರು ನೀಡಿದ್ದರು. ಕರ್ನಾಟಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆಯಡಿ ಕೇಸ್ ಹಾಕಲಾಗಿದೆ. ಅದರ ಅನ್ವಯ ಕಾಯ್ದೆ 1951 ಮತ್ತು 1981ರಡಿ ಅರ್ಜಿ ಸಲ್ಲಿಸಲಾಗಿದೆ. ಯಶ್ ಹೆಸರು ಉಲ್ಲೇಖಿಸಿ ಜಿಎಸ್ ಕ್ರಿಯೇಷನ್ಸ್ ಮತ್ತು ವೇಣು ಗ್ರೂಪ್ಸ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಶ್ ಅವರು ಈಗ ‘ಟಾಕ್ಸಿಕ್’ (ಟಾಕ್ಸಿಕ್) ಸಿನಿಮಾದ ಕೆಲಸಗಳಲ್ಲಿ ಬ್ಯೂಸಿ ಆಗಿದ್ದಾರೆ. ಮಾರ್ಚ್ 19 ರಂದು ಆ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *