Headlines

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ?

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ?


ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ತಿಳಿಸಿದ್ದಾರೆ (ಡಿಕೆ ಶಿವಕುಮಾರ್) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (ರಾಹುಲ್ ಗಾಂಧಿ) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ.

ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಡಿಕೆ ಶಿವಕುಮಾರ್, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಡಿಕೆ ಶಿವಕುಮಾರ್ ಎಕ್ಸ್ ಸಂದೇಶ

ಖಾಸಗಿ ಕಾರ್ಯನಿಮಿತ್ತ ಊಟಕ್ಕೆ ತೆರಳಲು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಂದಿದ್ದ ರಾಹುಲ್ ಗಾಂಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ, ಇಬ್ಬರು ನಾಯಕರೂ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಸ್ವಲ್ಪ ಹೊತ್ತು ಮಾತುಕತೆ ನಡೆಸಿದ್ದರು.

ಡಿಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಹೇಳಿದ್ದೇನು?

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರ ಸೈಡ್ ಗೆ ಕರೆದುಕೊಂಡು ಹೋಗಿದ್ದ ಡಿಕೆ ಶಿವಕುಮಾರ್ ತುಸು ಗಂಭೀರವಾಗಿ ಚರ್ಚಿಸುತ್ತಿರುವುದು ಕಂಡುಬಂದಿದೆ. ಆಗ, ನೀವು ತಲೆ ಕೆಡಿಸಿಕೊಳ್ಳಬೇಡಿ. ಶೀಘ್ರವೇ ನಿಮ್ಮನ್ನು ದೆಹಲಿಗೆ ಕರೆಯುತ್ತೇವೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ಅದಾದ ನಂತರ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ, ರಾಜ್ಯ ರಾಜಕಾರಣದಲ್ಲೂ ಸಂಚಲನ ಮೂಡಿಸಿತ್ತು

ಇದೀಗ, ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಹಂಚಿಕೊಂಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈ ತಿಂಗಳ ಕೊನೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಈ ತಿಂಗಳ ಕೊನೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ಆಯೋಜನೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಬಗ್ಗೆ ಮಹತ್ವದ ಮಾತುಕತೆ ನಡೆಯುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ ಮಹತ್ವದ ಸಂದೇಶ

ಇದರ ಪೂರ್ವಭಾವಿಯಾಗಿ ಹೈಕಮಾಂಡ್ ನಾಯಕರು ಜನವರಿ 16 ರಂದು ರಾಜ್ಯವಾರು ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *