ಮೊಮ್ಮಗನ ಎದುರೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದಿದ್ದ ಆರೋಪಿ ನೇಣಿಗೆ ಶರಣು

ಮೊಮ್ಮಗನ ಎದುರೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದಿದ್ದ ಆರೋಪಿ ನೇಣಿಗೆ ಶರಣು


ನೆಲಮಂಗಲ, ಜನವರಿ 14: ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯನ್ನು ಕೊಂದಿದ್ದ (ಕೊಲೆ) ಆರೋಪಿ ನೇಣಿಗೆ ಶರಣಾಗಿರುವಂತಹ (ಆತ್ಮಹತ್ಯೆ) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮದಲ್ಲಿ ನಡೆದಿದೆ. ದಾಕ್ಷಾಯಿಣಮ್ಮ(55) ಕೊಂಡು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಸದ್ಯಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಶನಿವಾರದಂದು ಮಟಮಟ ಮಧ್ಯಾಹ್ನ ದಾಕ್ಷಾಯಿಣಮ್ಮನನ್ನು ಆರೋಪಿ ವೀರಭದ್ರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ಮಾದನಾಯಕನಹಳ್ಳಿ ಪೊಲೀಸರಿಂದ ಹುಡುಕಾಟ ನಡೆಸಿದೆ.

ಇದನ್ನೂ ಓದಿ: ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ?

ನಿನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದ ಅಕ್ಕನ ಮನೆಗೆ ತಡರಾತ್ರಿ ಬಂದಿದ್ದ. ಅಕ್ಕನನ್ನ ಮಾತನಾಡಿಸಿಕೊಂಡು ತೋಟಕ್ಕೆ ಹೋದವನು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಹೊರಗೆ ಹೋದವನು ವಾಪಸ್ ಮನೆಗೆ ಬಾರದ ಕಾರಣ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ನಡೆದದ್ದೇನು?

ಬೆಂಗಳೂರು ವಾಯುವ್ಯ ವಿಭಾಗ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯಲ್ಲಿ ನಿವಾಸಿ ದಾಕ್ಷಾಯಿಣಮ್ಮ 8 ವರ್ಷದ ಹಿಂದೆ ಪತಿ ನಾಗರಾಜ್ ಅವರನ್ನು ಕಳೆದುಕೊಂಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನ ಮದುವೆ ಕೂಡ ಮಾಡಿದ್ದಾರೆ. ಹಣಕಾಸಿನ ವ್ಯವಹಾರ ಮತ್ತು ಮನೆ ಬಾಡಿಗೆ ಹಣದಲ್ಲಿ ಒಂಟಿಯಾಗಿ ಜೀವನ ನಡೆಸುವುದು. ದಾಕ್ಷಾಯಿಣಮ್ಮ ಮಾವ ವೀರಭದ್ರನ ಜೊತೆ ಹಣಕಾಸಿನ ವ್ಯವಹಾರ ಹಾಗೂ ಭೂ ವ್ಯಾಜ್ಯ ಸಂಬಂಧ ಇಬ್ಬರ ಮಧ್ಯೆ ಜಗಳವಾಗಿತ್ತು.

ಇದನ್ನೂ ಓದಿ: ತಾಯಿಗೆ ಹೊಡೆದ ಎಂದು ಮಲತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಮಗ

ಅದೊಂದು ದಿನ ತಮ್ಮ ಮೊಮ್ಮಗನನ್ನು ಶಾಲೆಯಿಂದ ಕರೆತರಲು ಹೊರಟಿದ್ದಾರೆ. ಈ ವೇಳೆ ಬೈಕ್ ನಲ್ಲಿ ಬಂದ ವ್ಯಕ್ತಿಯೋರ್ವ ನಡು ರಸ್ತೆಯಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಘಟನೆ ಸಂಬಂಧ ಮಾದನಾಯಕನಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಷ್ಟೇ ಅಲ್ಲ ಮಾದನಾಯಕನಹಳ್ಳಿ ಪೊಲೀಸ್ ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಆದರೆ ಅಷ್ಟರಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *