ಚಿಕ್ಕಬಳ್ಳಾಪುರ, (ಜನವರಿ 14): ಶಿಡ್ಲಘಟ್ಟ ಪೌರಾಯುಕ್ತ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಟಿವಿ9 ಜೊತೆ ಮಾತನಾಡುವಾಗ ಪೌರಾಯುಕ್ತೆ ಅಮೃತ ಗೌಡ ಅವರು ಕಣ್ಣೀರಿಟ್ಟಿದ್ದಾರೆ. ಅಕ್ರಮ ಬ್ಯಾನರ್‌ಗಳನ್ನು ಹೊಂದಿರುವಾಗ ಈ ಘಟನೆ ಸಂಭವಿಸಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಯಾರೇ ಆಗಲಿ, ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣವನ್ನು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಸುತ್ತಿದ್ದರು, ಕಾಂಗ್ರೆಸ್ ನಾಯಕನ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಐದು ವರ್ಷಗಳ ತಮ್ಮ ಸೇವೆಯಲ್ಲಿ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಅಮೃತಾ ಗೌಡ ನೋವು ತೋಡಿಕೊಂಡಿದ್ದಾರೆ. ಮಹಿಳಾ ಅಧಿಕಾರಿಗೆ ಇಂತಹ ಬೆದರಿಕೆಗಳು ಬಂದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ