ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (ಕರ್ನಾಟಕ ವಾಲ್ಮೀಕಿ ನಿಗಮದ ಹಗರಣ) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (ಬಿ ನಾಗೇಂದ್ರ) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ನೀಡಿದ ನೋಟಿಸ್ ಜಾಮೀನಿಗೆ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ಜೋರ್ಟ್, ಕೆಲವು ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಲಾಗಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ನಾಗೇಂದ್ರಗೆ ಕೋರ್ಟ್ ಷರತ್ತು ಹಾಕಿದೆ.
ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ (ಸಿಬಿಐ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ (ಜನವರಿ 13) ವಿಚಾರಣೆ ನಡೆಸುತ್ತಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಬುಧವಾರಕ್ಕೆ (ಜ.14) ಆದೇಶ ಕಾಯ್ದಿರಿಸಿತ್ತು. ಅದರಂತೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಕುಣಿಕೆಯಿಂದ ಬಚಾವ್ ಆಗಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಇಡಿ ಬಿಗ್ ಶಾಕ್
ವಾದ-ಪ್ರತಿವಾದ ಹೇಗಿತ್ತು?
ಮಂಗಳವಾರ(ಜನವರಿ 13) ವಿಚಾರಣೆ ವೇಳೆ ಪ್ರಕರಣದ ತನಿಖಾಧಿಕಾರಿಯೇ ಕೋರ್ಟ್‌ನಲ್ಲಿ ವಾದಮಂಡನೆ ಮಾಡಲಾಗಿತ್ತು. ವಾಲ್‌ಕಿ ಹಗರಣದಲ್ಲಿ ಹಣ ಪಡೆದವರನ್ನುಮೀಡಿ, ಇಡಿ ತನಿಖೆ ಮಾಡಿದೆ. ಅದಕ್ಕಿಂತ ಹೆಚ್ಚಿಗೆ ಉಪಯುಕ್ತಗಳು ಯಾರು ಅನ್ನೋದನ್ನ ಪತ್ತೆ ಹಚ್ಚಬೇಕಿದೆ. ಇಲ್ಲಿಯವರೆಗೂ ನಡೆದ ತನಿಖೆಯ ಕೆಲ ಮಾಹಿತಿಗಳನ್ನು ತೆರೆದ ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಿಲ್ಲ. ಮುಂಬೈನಲ್ಲಿ ಕೂಡ ದಾಳಿ ಮಾಡಿ ಮಾಹಿತಿ ಕಲೆಹಾಕಲಾಗಿದೆ. ಹಗರಣದ ಹಣ ಚಿನ್ನ, ಬುಲಿಯನ್ ಆಗಿ ಕನ್ವರ್ಟ್ ಆಗಿದೆ. ಇದರ ಹಿಂದೆ ನಾಗೇಂದ್ರ, ಅವರ ಸಹಚರರು ಭಾಗವಹಿಸಿದ್ದಾರೆ. ಇದರ ಹಿಂದೆ ಕೆಲ ಬೋಗಸ್ ಕಂಪನಿಗಳು ಸೇರಿಕೊಂಡಿವೆ. ಈ ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ ಎಂದು ಹೇಳಿ ಕೋರ್ಟ್‌ಗೆ ತಂದಿದ್ದ ಎರಡು ಸೂಟ್‌ಕೇಸ್ ದಾಖಲೆಗಳನ್ನು ತನಿಖಾಧಿಕಾರಿ ತೋರಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ನಾಗೇಂದ್ರ ಪರ ವಕೀಲರು ಪ್ರತಿವಾದ ಮಂಡಿಸಿದರು, ನಾಗೇಂದ್ರ ಮತ್ತು ನೆಕ್ಕಂಟಿ ನಾಗರಾಜ್ ಅವರ ವೈಯಕ್ತಿಕ ವ್ಯವಹಾರವಾಗಿದೆ. ಹೇಳುತ್ತಿರುವ ಟೆಂಡರ್‌ಗೂ ಈ ವ್ಯವಹಾರಗಳಿಗೆ ಯಾವುದೇ ಸಂಬಂಧವಿಲ್ಲ ಅಂತಾ ವಾದಿಸಿದ್ದರು. ಈ ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅಂತಿಮವಾಗಿ ನಾಗೇಂದ್ರಗೆ ಜಮೀನು ಮಂಜೂರು ಮಾಡಿದೆ.
8.07 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಇದೇ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಈ ಹಿಂದೆ ಜೈಲು ಪಾಲಾಗಿದ್ದ ಬಿ ನಾಗೇಂದ್ರ ನಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದರು. ಇನ್ನು ಈ ಹಗರಣಕ್ಕೆ ಜಾರಿ ನಿರ್ದೇಶನಾಲಯವು (ಇಡಿ) ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ 8.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಏನಿದು ಪ್ರಕರಣ?
ಕರ್ನಾಟಕ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಗಳಿಂದ ಕೋಟ್ಯಂತರ ರೂಪಾಯಿಗಳನ್ನು ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾಯಿಸಲಾಗಿದೆ. ನಂತರ ಈ ಹಣವನ್ನು ಶೆಲ್ ಕಂಪನಿಗಳ ಮೂಲಕ ಮಾಡಲಾಗಿದೆ ಎಂಬ ಆರೋಪದ ಮೇಲೆ ಕರ್ನಾಟಕ ಅಧಿಕಾರಿಗಳು ಮತ್ತು ಎಫ್‌ಐಆರ್ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಈ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಿ. ನಾಗೇಂದ್ರ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ