ಬಿಗ್ ಬಾಸ್ ಫಿನಾಲೆ: ಅಶ್ವಿನಿ ಗೌಡ ಪರವಾಗಿ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ಹೋಗಿದ್ದು ನಿಜವೇ?

ಬಿಗ್ ಬಾಸ್ ಫಿನಾಲೆ: ಅಶ್ವಿನಿ ಗೌಡ ಪರವಾಗಿ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ಹೋಗಿದ್ದು ನಿಜವೇ?


ಈಗ ಎಲ್ಲೆಲ್ಲೂ ‘ಬಿಗ್ ಬಾಸ್ ಕನ್ನಡ ಸೀಸನ್ 12’ (ಬಿಬಿಕೆ 12) ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾರು ವಿನ್ ಆಗುತ್ತಾರೆ ಎಂಬ ಕೌತುಕ. ಗಿಲ್ಲಿ ನಟ (ಗಿಲ್ಲಿ ನಟ)ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು ಈ ಫೋಟೋದಲ್ಲಿ ಕಾಣಿಸಿದೆ. ಅಶ್ವಿನಿ ಗೌಡ (ಅಶ್ವಿನಿ ಗೌಡ) ಅವರ ಪರವಾಗಿ ಮಾತಾಡಲು ನಾರಾಯಣ ಗೌಡ ಹೋಗಿದ್ದರು ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದಾರೆ. ಆ ಕರವೇ ಧರ್ಮಣ್ಣ ಅವರು ಭಾಷಣದ ಬಗ್ಗೆ.

ಅಂದಹಾಗೆ, ಈ ಭೇಟಿಗೂ ಬಿಗ್ ಬಾಸ್ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ನಾರಾಯಣ ಗೌಡ ಅವರು ತಮ್ಮ ಮಗನ ಮದುವೆಗೆ ಆಹ್ವಾನ ನೀಡಲು ಸುದೀಪ್ ಮನೆಗೆ ಹೋದಾಗ ತೆಗೆದ ಫೋಟೋ ಇದು. ಈ ಫೋಟೋವನ್ನು ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆ ಬಗ್ಗೆ ಕರವೇ ಧರ್ಮಣ್ಣ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

‘ನಾರಾಯಣ ಗೌಡ ಅವರ ಮಗನ ಮದುವೆ ಪತ್ರಿಕೆಯನ್ನು ಕೊಡುತ್ತಿರುವುದನ್ನು ತಿಂಗಳ ಹಿಂದೆಯೇ ರಾಜ್ಯದ ಜನರು ನೋಡುತ್ತಿದ್ದಾರೆ. ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಹಾಗೂ ಕಲಾವಿದರಿಗೆ ನಾರಾಯಣ ಗೌಡ ಅವರು ಮದುವೆ ಪತ್ರಿಕೆ ನೀಡುತ್ತಿದ್ದಾರೆ. ಇಲ್ಲ ಸುದೀಪ್ ಅವರು ನಿನ್ನೆ ಬರಲು ಹೇಳಿದ್ದರು. ಅವರನ್ನು ಭೇಟಿ ಮಾಡಿ ಮದುವೆ ಆಹ್ವಾನ ಪತ್ರಿಕೆ ನೀಡಿದೆ’ ಎಂದು ಧರ್ಮಣ್ಣ ಅವರು ಹೇಳಿದ್ದಾರೆ.

‘ಬೇರೆಯವರ ರೀತಿಯೇ ಸುದೀಪ್ ಅವರಿಗೆ ಮದುವೆ ಪತ್ರಿಕೆ ನೀಡಿದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದೆ. ಅದನ್ನು ಕೆಲವು ಟ್ರೋಲ್ ಪೇಜ್‌ಗಳು ತೆಗೆದುಕೊಳ್ಳುತ್ತಿವೆ. ನಾರಾಯಣ ಗೌಡ್ರು ಹಾಗೂ ಸುದೀಪ್ ಅವರ ವಿರೋಧಿಗಳು ಈ ರೀತಿ ಹೊಟ್ಟೆ ತುಂಬಿಸಿಕೊಳ್ಳುವುದಕ್ಕೆ ನಾಚಿಕೆ ಆಗಬೇಕು’ ಎಂದು ಧರ್ಮಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ..

ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರ ಆಟ ಎಲ್ಲರಿಗೂ ಮೆಚ್ಚುಗೆಯಾಗಿದೆ. ಹಾಗಂತ ಅವರೇ ಗೆಲ್ಲಬಹುದು ಎಂಬ ಅಭಿಪ್ರಾಯ ಎಲ್ಲರಿಗೂ ಇದೆ. ಜನವರಿ 17 ಮತ್ತು 18ರಂದು ಬಿಗ್ ಬಾಸ್ ಫಿನಾಲೆ. ಸೋಶಿಯಲ್ ಮೀಡಿಯಾದಲ್ಲಿ ಎಲ್ಲ ಸ್ಪರ್ಧಿಗಳ ಪರವಾಗಿ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ಗಿಲ್ಲಿ ಹವಾ ಸಿಕ್ಕಾಪಟ್ಟೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *