Headlines

ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ?

ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ?


ನಟ ಅಕ್ಷಯ್ ಖನ್ನಾ ಅವರು ‘ಧುರಂಧರ’ (ಧುರಂಧರ) ಸಿನಿಮಾದಿಂದ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ರೆಹಮಾನ್ ಡಕಾಯಿತ್ ಎಂಬ ಗ್ಯಾಂಗ್‌ಸ್ಟರ್ ಪಾತ್ರವನ್ನು ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈಗ ಈ ಚಿತ್ರಕ್ಕೆ ಸೀಕ್ವೆಲ್ ಕೂಡ ಸಿದ್ಧವಾಗುತ್ತಿದೆ. ಮಾರ್ಚ್ 19 ರಂದು ‘ಧುರಂದರ್ 2’ (ಧುರಂಧರ 2) ಸಿನಿಮಾ ಬಿಡುಗಡೆ ಆಗಲಿದೆ. ಸೀಕ್ವೆಲ್ನಲ್ಲಿ ಅಕ್ಷಯ್ ಖನ್ನಾ (ಅಕ್ಷಯ್ ಖನ್ನಾ) ಪಾತ್ರ ಇರುವುದಿಲ್ಲ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಏಕೆಂದರೆ, ಮೊದಲ ಪಾತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರ ಸಾಯುತ್ತದೆ. ಆದರೆ ಈಗ ಹೊಸ ಗುಸುಗುಸು ಕೇಳಿಬಂದಿದೆ.

‘ಧರಂಧರ್’ ಸಿನಿಮಾ ಗೆಲ್ಲಲು ಅಕ್ಷಯ್ ಖನ್ನಾ ಅವರ ನಟನೆ ಕೂಡ ಕಾರಣ. ಸಿನಿಮಾದ ಹೀರೋ ರಣವೀರ್ ಸಿಂಗ್ ಅವರಿಗಿಂತ ಅಕ್ಷಯ್ ಖನ್ನಾ ಪಾತ್ರವೇ ಹೆಚ್ಚು ಹೈಲೈಟ್ ಆಗಿದೆ. ಅಕ್ಷಯ್ ಖನ್ನಾ ಅವರ ನಟನೆಯನ್ನು ಅಭಿಮಾನಿಗಳು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದಾರೆ. ಅವರ ಡ್ಯಾನ್ಸ್ ಕೂಡ ವೈರಲ್ ಆಗಿದೆ. ಒಟ್ಟಿನಲ್ಲಿ ಅವರು ಹೊಸ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

ಈ ಜನಪ್ರಿಯತೆಯ ಪರಿಣಾಮವಾಗಿ ‘ಧುರಂದರ್ 2’ ಸಿನಿಮಾದಲ್ಲಿ ಕೂಡ ರೆಹಮಾನ್ ಡಕಾಯಿತ್ ಪಾತ್ರವನ್ನು ಮುಂದುವರಿಸುವ ಬಗ್ಗೆ ನಿರ್ದೇಶಕ ಆದಿತ್ಯ ಧಾರ್ ಅವರು ಆಲೋಚಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ‘ಧುರಂಧರ’ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ರೆಹಮಾನ್ ಡಕಾಯಿತ್ ಪಾತ್ರದಲ್ಲಿ ಸತ್ತರೂ ಕೂಡ ‘ಧುರಂಧರ 2’ ಚಿತ್ರದಲ್ಲಿ ಆ ಪಾತ್ರ ಮತ್ತೆ ಬರಲಿದೆ.

‘ಧುರಂಧರ 2’ ಚಿತ್ರಕ್ಕಾಗಿ ಅಕ್ಷಯ್ ಖನ್ನಾ ಅವರು ಒಂದು ವಾರ ಕಾಲ್ ಶೀಟ್ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅದಕ್ಕಾಗಿ ಅವರು ಮತ್ತೆ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಕೆಲವು ಫ್ಲ್ಯಾಶ್ ಬ್ಯಾಕ್ ದೃಶ್ಯಗಳ ಮೂಲಕ ರೆಹಮಾನ್ ಡಕಾಯಿತ್ ಪಾತ್ರವನ್ನು ಮತ್ತೆ ಜನರಿಗೆ ತೋರಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಈ ವಿಷಯ ಕೇಳಿ ಅಕ್ಷಯ್ ಖನ್ನಾ ಅವರ ಅಭಿಮಾನಿಗಳಿಗೆ ಖುಷಿಯಾಗಿದೆ.

ಇದನ್ನೂ ಓದಿ: ‘ಧುರಂಧರ’ ನಿರ್ದೇಶಕ ದೇವರ ಮಗ: ಸಿಕ್ಕಾಪಟ್ಟೆ ಹೊಗಳಿದ ವಿವೇಕ್ ಅಗ್ನಿಹೋತ್ರಿ

ಮಾರ್ಚ್ 19 ರಂದು ‘ಟಾಕ್ಸಿಕ್’ ಸಿನಿಮಾದ ಎದುರು ‘ಧುರಂಧರ 2’ ಬಿಡುಗಡೆ ಆಗಲಿದೆ. ಹಾಗೆ ಪೈಪೋಟಿ ಜೋರಾಗಿ ಇರಲಿದೆ. ಜನರ ನಿರೀಕ್ಷೆ ಕೂಡ ಡಬಲ್ ಆಗಿದೆ. ಆ ನಿರೀಕ್ಷೆಯನ್ನ ತಲುಪಲು ಅಕ್ಷಯ್ ಖನ್ನ ಅವರ ಪಾತ್ರವನ್ನು ಮುಂದುವರಿಸಲಾಗುತ್ತಿದೆ ಎಂದು ಸಿನಿಪ್ರಿಯರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *