Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 15ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 15ರ ದಿನಭವಿಷ್ಯ


Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಈ ದಿನ ನಿಮ್ಮ ಹೊಸ ಯೋಜನೆಗಳು ವೇಗವಾಗಿ ಬೆಳೆಯುತ್ತವೆ. ಉದ್ಯೋಗಸ್ಥರಿಗೆ ನಿರ್ದಿಷ್ಟ ಗುರಿ ತಲುಪಲು ನಿರೀಕ್ಷಿತ ಪ್ರಮಾಣದ ಸಹಾಯ ಸಿಗಲಿದೆ. ಅಂಗಡಿ ಮತ್ತು ಬ್ಯೂಟಿ ಸಲೂನ್ ನಡೆಸುತ್ತಾ ಇರುವವರಿಗೆ ಹೆಚ್ಚಿನ ಸಂಖ್ಯೆಯ ಗ್ರಾಹಕರಿಂದ ಸಂತೃಪ್ತ ಲಾಭ ದೊರೆಯಲಿದೆ. ರೈತರಿಗೆ ಹವಾಮಾನವು ಹಿತಕರವಾಗಿ ಪರಿಣಮಿಸುತ್ತದೆ ಮತ್ತು ಮಾರಾಟದಲ್ಲಿ ಸುಧಾರಣೆ ತರುತ್ತದೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಹೊಸ ವಿಧಾನಗಳನ್ನು ಅಳವಡಿಸಿ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ಕುಟುಂಬದಲ್ಲಿ ಸದಸ್ಯರೊಂದಿಗೆ ಸಂವಹನ ಸ್ಪಷ್ಟವಾಗುವುದು ಸಂತೋಷ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಈ ದಿನ ನಿಮ್ಮ ಮುಖ್ಯ ಕಾರ್ಯಗಳಲ್ಲಿ ಯಶಸ್ಸು ಕಾಣಲಿದೆ. ಪೊಲೀಸ್ ಮತ್ತು ಸೇನೆಯಲ್ಲಿ ಇರುವವರು ನಿಯೋಜನೆ ಆಗಿರುವ ಕೆಲಸಗಳಲ್ಲಿ ಶಿಸ್ತಿನಿಂದ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ಆಹಾರ ಸೇವೆ ಅಥವಾ ಕ್ಯಾಂಟೀನ್-ಕಾಂಟ್ರ್ಯಾಕ್ಟ್ ಕೆಲಸಗಾರರು ಒಪ್ಪಂದದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಮತ್ತು ಗ್ರಾಹಕರಿಂದ ಉತ್ತಮ ವಿಮರ್ಶೆಯನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಬಂದರೂ ಸಹೋದ್ಯೋಗಿಗಳ ಸಹಕಾರದಿಂದ ಒತ್ತಡ. ಕುಟುಂಬದ ಸಮಸ್ಯೆಗಳಿಗೆ ಮಾತುಕತೆ ಮೂಲಕ ಪರಿಹಾರ ನೀವು.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮ್ಮ ಜೀವನಶೈಲಿಯಲ್ಲಿ ಕೆಲವು ಧಾರ್ಮಿಕ ವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ. ಯಾವುದೆಲ್ಲ ಹಿಂಸೆ- ಕಿರಿಕಿರಿ ನೀಡುತ್ತಿದೆ ನಿಮಗೆ ಇತರರನ್ನು ದೂರುವುದು ನಿಲ್ಲಿಸಿದೆ. ವಾಸ್ತವ ನೆಲೆಗಟ್ಟಿನಲ್ಲಿ ಮುಂದೆ ಸಾಗುವುದಕ್ಕೆ ಆದ್ಯತೆ ಕೊಡುತ್ತೀರಿ. ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಉದ್ದೇಶಗಳನ್ನು ಸ್ಪಷ್ಟಪಡಿಸಲು ಉತ್ತಮ ವೇದಿಕೆ ದೊರೆಯಲಿದೆ. ಹಣದ ಸಮಸ್ಯೆಯಲ್ಲಿ ಸಿಲುಕಿದವರಿಗೆ ಅದರಿಂದ ಹೊರಬರುವ ಮಾರ್ಗೋಪಾಯ ಗೋಚರವಾಗುತ್ತದೆ. ಮುಖ್ಯವಾಗಿ ಸಾಂಸಾರಿಕ ಜೀವನ ಸಂತೃಪ್ತಿಯಿಂದ ಇರುತ್ತದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *