Headlines

ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ

ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ


ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ

ಬಾಗಲಕೋಟೆ, ಜನವರಿ 15: ಬಾಗಲಕೋಟೆ (ಬಾಗಲಕೋಟ) ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ನಗದು ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂಬುದು ಖಚಿತವಾಗಿದೆ. ಬಾಗಲಕೋಟೆ ಜಿಲ್ಲೆ ತೇರದಾಳ ಮತ್ತು ರಬಕವಿಬನಹಟ್ಟಿ ಭಾಗದಲ್ಲಿ ದಾನಜ್ಜ ಎಂದಾಗ ಹೆಸರಾಗಿದ್ದ ಚಂದ್ರವ್ವ ನೀಲಗಿ ಅವರ ಕೊಲೆ ಸ್ಥಳೀರನ್ನು ತಂಡಕ್ಕೀಡು ಮಾಡಿದೆ.

ತರಕಾರಿ ಮಾರಟ ಮಾಡಿ ಜೀವನ, ದಾನದಿಂದಲೇ ಪ್ರಸಿದ್ಧಿ

ದಾನಜ್ಜಿ ಅವರು ಸಂಪೂರ್ಣ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ 60 ವರ್ಷಗಳಿಂದ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನದ ಬಳಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಅವರು, ಕೂಡಿಟ್ಟ ಅನೇಕ ದಾನ ಕಾರ್ಯಗಳನ್ನು ಮಾಡಿದರು. ವಿಶೇಷವಾಗಿ, 2022ರಲ್ಲಿ ಪ್ರಭುಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಗೆ 20 ಕೆಜಿ ತೂಕದ, 16 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲನ್ನು ದಾನ ಮಾಡಲಾಗಿತ್ತು. ಇದಲ್ಲದೆ, ದೇವಸ್ಥಾನದಲ್ಲಿ 3 ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಠಡಿಯೊಂದನ್ನೂ ನಿರ್ಮಿಸಿಕೊಟ್ಟಿದ್ದರು. ಅವರ ಈ ದಾನ-ಧರ್ಮಗಳ ಗುಣದಿಂದಾಗಿ ಅವರಿಗೆ ದಾನಜ್ಜಿ ಎಂಬ ಅನ್ವರ್ಥನಾಮ ಬಂದಿತ್ತು.

ಆಸ್ತಿಗಾಗಿ ನೀಚತನ ಪ್ರದರ್ಶಿಸಿದ ದಾನಜ್ಜಿಯ ಅಣ್ಣನ ಮಕ್ಕಳು

ಇಂತಹ ದಾನಕ್ಕೆ ಹೆಸರಾಗಿದ್ದ ವೃದ್ಧೆಯ ಕೊಲೆಗೆ ಆಸ್ತಿ ವಿವಾದವೇ ಕಾರಣ. ದಾನಜ್ಜಿ ಮತ್ತು ಅವರ ಅಣ್ಣನ ಮಕ್ಕಳ ನಡುವೆ 11 ರೂಪಾಯಿ ಆಸ್ತಿಯ ವಿಚಾರವಾಗಿ ಭಿನ್ನಾಭಿಪ್ರಾಯಗಳಿದ್ದವು. ಜನವರಿ 13 ರಂದು, ಸರ್ವೆ ಅಧಿಕಾರಿಗಳು ದಾನಜ್ಜಿ ಅವರ ಹೊಲದ ಭೂಮಿಯ ಸರ್ವೇಗಾಗಿ ಬಂದಿದ್ದ ಸಂದರ್ಭದಲ್ಲಿ, ಅಜ್ಜಿ ಘಟಪ್ರಭಾ ಕಾಲುವೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಲು ಪ್ರಯತ್ನಿಸಲಾಯಿತು. ನಂತರ, ಆಕೆಯನ್ನು ಉಳಿಸುವ ರೀತಿಯಲ್ಲಿ ನಾಟಕವನ್ನೂ ಮಾಡಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಹೈರಾಮಾ ನಡೆಸಲಾಯಿತು. ಬಳಿಕ ಆರೋಪಿಗಳು ವೃದ್ಧೆಯನ್ನು ಕಾಡಯ್ಯ ಬನಹಟ್ಟಿ ಆಸ್ಪತ್ರೆಗೆ ಕರೆ ತಂದಿದ್ದರು. ಅಲ್ಲಿಂದ ತಾವೇ ಗೋಕಾ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆಂದು ಕರೆದೊಯ್ದಿದ್ದ ಆರೋಪಿಗಳು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆ ಮಾಡಿ ತರಾತುರಿಯಲ್ಲಿ ಅಂತ್ಯಸಂಸ್ಕಾರಕ್ಕೆ ಯತ್ನ

ಕೊಲೆ ಮಾಡಿದ ನಂತರ ದಾನಜ್ಜಿ ಅಣ್ಣನ ಮಕ್ಕಳನ್ನು ಆತುರವಾಗಿ ಅಂತ್ಯಸಂಸ್ಕಾರ ಮಾಡಲು ಪ್ರಯತ್ನ ನಡೆಸಿದ್ದರು. ಒರಗಿಸಿ ಶೃಂಗಾರ ಮಾಡಿ, ಶೀಘ್ರವಾಗಿ ಶವವನ್ನು ಸಾಗಿಸಲು ಮುಂದಾಗಿದ್ದರು. ಆದರೆ, ಸ್ಥಳೀಯರಲ್ಲಿ ಅನುಮಾನಗಳು ಹುಟ್ಟಿಕೊಂಡವು. ಗಡಿಬಿಡಿಯ ಈ ವರ್ತನೆಯಿಂದ ಅನುಮಾನಗೊಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಈ ಭೀಕರ ಕೃತ್ಯ ಬಯಲಿಗೆ ಬಂದಿದೆ.

ಇದನ್ನೂ ಓದಿ: ಹುಡುಗಾಟವಲ್ಲ! ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ರಬಕವಿಬನಹಟ್ಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸದ್ಯ ಐದು ಮಂದಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *